ಶಿಗ್ಗಾವಿಯಲ್ಲಿ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್‌

ಶಿಗ್ಗಾವಿಯಲ್ಲಿ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್‌

ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪುತ್ರ ಭರತ್​​ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್​ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್​​ ನೀಡಲಾಗಿದೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಇನ್ನೂ ಘೋಷಣೆಯಾಗದ ಕಾರಣ ಅಭ್ಯರ್ಥಿ ಹೆಸರನ್ನು ಪ್ರಕಟಿಸಿಲ್ಲ. ಬಿಜೆಪಿ ರಾಜ್ಯ ಘಟಕದ ಪಟ್ಟಿ ಬರುವ ಮುನ್ನವೇ ಹೈಕಮಾಂಡ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಬೆಲ್ಲದ್‌ ಸೇರಿದಂತೆ ಕೆಲ ಬಿಜೆಪಿ ನಾಯಕರು ಬೊಮ್ಮಾಯಿ ಪುತ್ರನ ಪರ ಬ್ಯಾಟಿಂಗ್‌ ಮಾಡಿದ್ದರು

ಇನ್ನು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹೋದರ ಡಿ.ಕೆ. ಸುರೇಶ್‌ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಅತ್ತ ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್​​ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಟಿಕೆಟ್‌ಗೆ ಸಿ.ಪಿ ಯೋಗೇಶ್ವರ್‌ ಪ್ರಯತ್ನಿಸಿದ್ರೂ ಈ ಕ್ಷೇತ್ರದಲ್ಲಿ ಜೆಡಿಎಸ್‌ಗೇ ಅವಕಾಶ ಹೆಚ್ಚು ಎನ್ನುವ ಸುದ್ದಿ ಹೊರಬಿದ್ದಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!