BJP ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹ* ಕೇಸ್: CM ಕಾನೂನು ಸಲಹೆಗಾರರ ವಿರುದ್ಧ ದೂರು.

ಬೆಂಗಳೂರು :- ಬಿಜೆಪಿ (BJP) ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ತೆನ್ನೀರ ಮಹಿನಾ, ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿನಯ್ ಸೋಮಯ್ಯ ಸಹೋದರ ಜೀವನ್ ಅವರು “ನನ್ನ ಸಹೋದರನಿಗೆ ಕಿರುಕುಳ ನೀಡಿದ್ದಾರೆ” ಎಂದು ಪೊಲೀಸರಿಗೆ 6 ಪುಟಗಳ ದೂರನ್ನು ಸಲ್ಲಿಸಿದ್ದಾರೆ.


ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾತನಾಡಿ, ಈ ಘಟನೆಯಿಂದ ನಿಜಕ್ಕೂ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ‘ಕೈ’ ಶಾಸಕರು, ತನ್ನೀರ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲಿಷರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ಗೆಆ*ಹತ್ಯೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.
ಇನ್ನು, ಮೃತ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಮಡಿಕೇರಿಯಲ್ಲಿನ ಮನೆಗೆ ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತ ವಿನಯ್ ಆ*ಹತ್ಯೆಗೆ ಕಾರಣವಾದವರನ್ನು ಬಂಧಿಸುವಂತೆ ಮಡಿಕೇರಿಯ ಜ.ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ ಗೌಡ ಮತ್ತು ಕಾಂಗ್ರೆಸ್ ವಕ್ತಾರ ತೆನ್ನೀರಾ ಮಹಿನಾ ಬಂಧಿಸಿವಂತೆ ಆಗ್ರಹಸಿದರು. ಅಲ್ಲದೇ, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ವಿರುದ್ಧವೂ ಧಿಕ್ಕಾರ ಕೂಗಿದರು. ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ ಗೌಡ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ವಿಚಾರ ತಿಳಿದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎಸ್ ರಾಮರಾಜನ್ ಬಿಜೆಪಿ ಕಾರ್ಯಕರ್ತರ ಮನವೊಲಿಸಿದರು. ಎಸ್ಪಿ ಮನವೊಲಿಕೆ ಬಳಿಕ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!