ಬಾಲಿವುಡ್ ಹಿರಿಯ ನಟ ಗೋವಿಂದ ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರೀತಿ ಮತ್ತು ವಿವಾಹದಲ್ಲಿ ಮೋಸ ಹಾಗೂ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಅಂತ ಕಾರಣ ಕೊಟ್ಟು ಸುನೀತಾ ಅವರು ವಿಚ್ಛೇದನ ಕೋರಿದ್ದಾರೆ. ಹಿಂದೂ ವಿವಾಹ ಕಾಯ್ದೆ 1955ರ ಸೆಕ್ಷನ್ 13 (1), (i), (ia), (ib) ಅಡಿಯಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ
ಬಾಲಿವುಡ್ ಹಿರಿಯ ನಟ ಗೋವಿಂದ ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಈ ಹಿಂದೆಯೇ ಅಹುಜಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿತ್ತು. ಮೇ 25ರಂದು ನ್ಯಾಯಾಲಯವು ಗೋವಿಂದ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಜೂನ್‌ನಿಂದ ಇಬ್ಬರೂ ವಿಚ್ಛೇದನ ಕುರಿತಂತೆ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಆದರೆ, ವಿಚಾರಣೆ ಸಮಯದಲ್ಲಿ ಗೋವಿಂದ ಅವರು ಹಾಜರಾಗುತ್ತಿರಲಿಲ್ಲ. ಸುನೀತಾ ಅವರು ಹಾಜರಾಗುತ್ತಿದ್ದರು. ಇಬ್ಬರೂ ಮತ್ತೆ ಒಂದಾಗುತ್ತಿದ್ದಾರೆ ಎಂದೇ ಹೇಳಲಾಗಿತ್ತು.
ಈ ಜೋಡಿ 37 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸುನೀತಾ ತಮ್ಮ ಯೂಟ್ಯೂಬ್ ವ್ಲಾಗ್‌ನಲ್ಲಿ ವಿಚ್ಛೇದನದ ಬಗ್ಗೆ ಮಾತನಾಡಿದ ಕೆಲವು ವಾರಗಳ ನಂತರ ಈ ವರದಿ ಬಂದಿದೆ. ಸುನೀತಾ ಬಾಂದ್ರಾ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ





