ಸೋದರಮಾವನಿಂದಲೇ ಕೊ*ಯಾದ ಬಾಲಕ ! ಕಾರಣವಾಯ್ತ ಫ್ರೀಫೈರ್ ಗೇಮ್​​ ಅಡಿಕ್ಷನ್ ?

ಬೆಂಗಳೂರು: ಫ್ರೀಫೈರ್ ಗೇಮ್​ ಚಟಕ್ಕೆ ಬಿದ್ದ14 ವರ್ಷದ ಬಾಲಕನನ್ನು ಆತನ ಮಾವನೇ ಕೊಲೆ ಮಾಡಿರುವಂತಹ ಭೀಕರ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ. ಸದ್ಯ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ನೆಲಮಂಗಲ, ಆಗಸ್ಟ್​ 08: ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವ ಕೊಲೆ (kill) ಮಾಡಿರುವಂತಹ ಘಟನೆ ಬೆಂಗಳೂರಿನ (bangaluru) ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ. ಸದ್ಯ ಪೊಲೀಸರು ಮಾವ ನಾಗಪ್ರಸಾದ್(50) ನನ್ನು ಬಂಧಿಸಿದ್ದಾರೆ. ಮೃತ ಬಾಲಕ ನಾಗಪ್ರಸಾದ್ ಸಹೋದರಿ ಶಿಲ್ಪಾ ಮಗ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

https://www.goodnews24x7.com/do-you-know-why-green-bangles-are-given-to-the-elders-on-the-day-of-varamahalakshmi-festival/ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?

ನಡೆದದ್ದೇನು?
ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.

ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್​, ನಂತರ ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್​​ನಲ್ಲಿ 3 ದಿನ ಕಾಲಕಳೆದಿದ್ದಾರೆ. ನಂತರ ಸೋಲದೇವನಹಳ್ಳಿ ಠಾಣೆಗೆ ಹೋಗಿ ಶರಣಾಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!