ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ!

ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

https://www.facebook.com/reel/3798106020489452

ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಆಸ್ಪತ್ರೆಯಲ್ಲಿಯೇ ಸಮಾರಂಭ ನಡೆಸಬೇಕೆಂದು ವರನ ಕುಟುಂಬ ಮನವಿ ಮೇರೆಗೆ ಇಲ್ಲಿಯೇ ಮದುವೆ ನಡೆಸಿದ್ದೇವೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇಂದು (ಶನಿವಾರ) ಅವನಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸುಧೀಶ್ ಕರುಣಾಕರನ್ ತಿಳಿಸಿದ್ದಾರೆ.

Related Posts

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!