ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ನಿಂತ ಉದ್ಯಮಿ ಧೀರಜ್ ಜೈನ್

ದುಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ಉದ್ಯಮಿಯೊಬ್ಬರು ನಿಂತಿದ್ದಾರೆ.ಮಾನವೀಯತೆಯ ದೃಷ್ಟಿಯಿಂದ ಅಲ್ ಮಿಜಾನ್ ಗ್ರೂಪ್‌ನ ಅಧ್ಯಕ್ಷ ಯೋಗೇಶ್ ದೋಷಿ, ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತೀಯರಿಗೆ ತಮ್ಮ 64 ಅಪಾರ್ಟ್‌ಮೆಂಟ್‌ಗಳ ಸಂಪೂರ್ಣ ವಸತಿ ಕಟ್ಟಡವನ್ನು ತೆರೆದಿದ್ದಾರೆ.

ಭಾರತೀಯರಿಗೆ ಊಟ, ವಸತಿ ಸೌಕರ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತವಾಗಿ ಒದಗಿಸಿದ್ದಾರೆ. ಯುಎಇಯ ಇಂಡಿಯನ್ ಪೀಪಲ್ಸ್ ಫೋರಮ್ ಮತ್ತು ದುಬೈನಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದ ಸಮನ್ವಯದೊಂದಿಗೆ ಈ ಸೌಲಭ್ಯ ಒದಗಿಸಲಾಗಿದೆ. ಮಕ್ಕಳಿರುವ ಕುಟುಂಬಗಳು ಸೇರಿದಂತೆ 125 ಕ್ಕೂ ಹೆಚ್ಚು ಭಾರತೀಯರಿಗೆ ಕಷ್ಟದ ಸಮಯದಲ್ಲಿ ತಾತ್ಕಾಲಿಕ ಆಶ್ರಯ ಪಡೆಯಲು ಸಹಾಯ ಮಾಡಲಾಗಿದೆ ಎಂದು ಯೋಗೇಶ್‌ ತಿಳಿಸಿದ್ದಾರೆ.

ದುಬೈನಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಅಜ್ಮಾನ್‌ನಲ್ಲಿರುವ ಆಶ್ರಯ ಮನೆಯಲ್ಲಿ ಹಲವಾರು ಭಾರತೀಯ ಪ್ರಯಾಣಿಕರು ಆಶ್ರಯ ಪಡೆದಿದ್ದಾರೆ. ಯುಎಇ ಮೂಲದ ಉದ್ಯಮಿ ಧೀರಜ್ ಜೈನ್ ಅವರು ಈ ಆಶ್ರಯ ತಾಣವನ್ನು ತೆರೆದಿದ್ದಾರೆ. ಅವರು ತಮ್ಮ ದೊಡ್ಡ ತೋಟದ ಮನೆಯನ್ನು, ತಕ್ಷಣ ಮನೆಗೆ ಮರಳಲು ಸಾಧ್ಯವಾಗದ ಜನರಿಗೆ ತಾತ್ಕಾಲಿಕ ವಸತಿ ಸೌಕರ್ಯವಾಗಿ ಪರಿವರ್ತಿಸಿದ್ದಾರೆ.

ಹಣ ಅಥವಾ ಉಳಿದುಕೊಳ್ಳಲು ಸ್ಥಳವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಅನೇಕ ಪ್ರಯಾಣಿಕರಿಗೆ ಆಶ್ರಯದಲ್ಲಿ ಉಚಿತ ವಸತಿ ಮತ್ತು ಊಟವನ್ನು ಒದಗಿಸಲಾಗಿದೆ. ಹೋಟೆಲ್‌ಗಳು ಮತ್ತು ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಜನರನ್ನು ತೋಟದ ಮನೆಗೆ ಕರೆತರಲು ಅವರು ಆರು ರೋಲ್ಸ್ ರಾಯ್ಸ್ ವಾಹನಗಳು ಸೇರಿದಂತೆ 11 ಕಾರುಗಳನ್ನು ನಿಯೋಜಿಸಿದ್ದಾರೆ.

ಫೆ.28 ರಂದು ಅಮೆರಿಕ ಮತ್ತು ಇಸ್ರೇಲ್ ಎರಡೂ ಮಿತ್ರರಾಷ್ಟ್ರಗಳು ಇರಾನ್ ಮೇಲೆ ಜಂಟಿ ದಾಳಿ ನಡೆಸಿ, ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಕೊಂದ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಂಡಿದೆ. ಅಂದಿನಿಂದ ಇರಾನ್, ಇಸ್ರೇಲ್ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುತ್ತಿದೆ. ಎರಡೂ ಮಿತ್ರರಾಷ್ಟ್ರಗಳು ಇರಾನಿನ ಗುರಿಗಳ ಮೇಲೆ ದಾಳಿ ಮಾಡುತ್ತಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!