ಕಾರು ಪಡೆದು ವಂಚನೆ ಆರೋಪ… ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ಧ ಪ್ರಕರಣ ದಾಖಲು…

ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ರಾಜಿಯಾ ಖಾನಂ ಎಂಬುವರು ಪ್ರಕರಣ ದಾಖಲಿಸಿದ್ದಾರೆ. ಫಾರ್ಚುನರ್ ಕಾರನ್ನ ವೈಯುಕ್ತಿಕ ಕಾರಣಕ್ಕೆ ಪಡೆದಿದ್ದ ಪ್ರದೀಪ್ ಸಿಂಗ್ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲವೆಂದು ಎಫ್.ಐ.ಆರ್.ನಲ್ಲಿ ದಾಖಲಿಸಿದ್ದಾರೆ.

ರಾಜಿಯಾ ಖಾನಂ ರವರು ಖಾಸಗಿ ಫೈನಾನ್ಸ್ ನಲ್ಲಿ 21 ಲಕ್ಷ ಸಾಲ ಪಡೆದು ಸೆಕೆಂಡ್ ಹ್ಯಾಂಡ್ ಫಾರ್ಚುನರ್ ಕಾರು ಖರೀದಿಸಿದ್ದರು. ರಾಜಿಯಾ ಖಾನಂ ರವರ ಮೈದುನ ಕಾರನ್ನ ಬಳಸುತ್ತಿದ್ದರು. 2024 ನವೆಂಬರ್ ನಲ್ಲಿ ಪ್ರದೀಪ್ ಸಿಂಗ್ ತಮ್ಮ ವೈಯುಕ್ತಿಕ ಬಳಕೆಗೆ ಪಡೆದಿದ್ದರು. ನಂತರ ಕಾರನ್ನ ಹಿಂದಿರುಗಿಸದೆ ಸಂಪರ್ಕಕ್ಕೆ ಸಿಕ್ಕಿಲ್ಲ. ಕಾರಿನಲ್ಲೇ ಒರಿಜಿನಲ್ ಡಾಕ್ಯುಮೆಂಟ್ಸ್ ಇಟ್ಟಿದ್ದರೆಂದು ಹೇಳಿಕೆ ನೀಡಿರುವ ರಾಜಿಯಾ ಖಾನಂ ರವರು ಪ್ರದೀಪ್ ಸಿಂಗ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!