Uncategorized Archives - Good News 24x7 https://www.goodnews24x7.com/category/uncategorized/ Kannada Fri, 04 Sep 2026 10:31:07 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Uncategorized Archives - Good News 24x7 https://www.goodnews24x7.com/category/uncategorized/ 32 32 ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು https://www.goodnews24x7.com/government-to-honour-fans-demand-abhimanyu-to-be-made-into-a-flag-elephant/ Fri, 04 Sep 2026 10:31:07 +0000 https://www.goodnews24x7.com/?p=9963 ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

The post ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು appeared first on Good News 24x7.

]]>

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ ಘೋಷಿಸಲಾಗಿದ್ದು, ದಸರಾ ಮೆರವಣಿಗೆಯಲ್ಲಿ ಅಭಿಮನ್ಯು ಭಾಗವಹಿಸುವುದಿಲ್ಲ ಎಂಬ ಸುದ್ದಿ ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿತ್ತು. ದಿಗ್ಗಜ ಆನೆ ಅರ್ಜುನನಿಗೆ ನೀಡಿದಂತೆ ಅಭಿಮನ್ಯುವಿಗೂ ಗೌರವಪೂರ್ಣ ವಿದಾಯ ನೀಡಬೇಕು ಹಾಗೂ ಕೊನೆಯ ಬಾರಿಗೆ ನಿಶಾನೆ ಆನೆಯಾಗಿ ಕೊಂಡೊಯ್ಯಬೇಕು ಎಂದು ಸಾರ್ವಜನಿಕರು ಮತ್ತು ವನ್ಯಜೀವಿ ಪ್ರಿಯರು ವ್ಯಾಪಕ ಒತ್ತಡ ತಂದಿದ್ದರು. ಜನರ ಈ ಭಾವನಾತ್ಮಕ ಬೇಡಿಕೆಗೆ ಸ್ಪಂದಿಸಿರುವ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, 2026ರ ದಸರಾ ಮಹೋತ್ಸವದಲ್ಲಿ ಅಭಿಮನ್ಯುಗೆ ನಿಶಾನೆ ಆನೆಯಾಗಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವಂತೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ದಸರಾ ಪರಂಪರೆಯಲ್ಲಿ ತನ್ನ ಶಿಸ್ತು ಹಾಗೂ ಧೈರ್ಯದಿಂದ ನಾಡಿನ ಜನರ ಪ್ರೀತಿ ಗಳಿಸಿರುವ ಅಭಿಮನ್ಯು, ಸಚಿವರ ಈ ಹೊಸ ಆದೇಶದಿಂದ ಮತ್ತೊಮ್ಮೆ ಗಜಪಡೆಯ ಮುಂಚೂಣಿಯಲ್ಲಿ ಕಂಗೊಳಿಸುವುದು ಖಚಿತವಾಗಿದ್ದು, ಅಭಿಮಾನಿಗಳಲ್ಲಿ ಹರ್ಷ ಮೂಡಿಸಿ

The post ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು appeared first on Good News 24x7.

]]>
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌ https://www.goodnews24x7.com/kichchas-daughter-raves-about-yashs-performance-in-toxic-saanvi-sudeep-says-there-is-magic-in-every-frame/ Sun, 30 Aug 2026 12:08:08 +0000 https://www.goodnews24x7.com/?p=9945 ‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

The post ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌ appeared first on Good News 24x7.

]]>

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ರಿಷಬ್‌ ಶೆಟ್ಟಿ, ರಕ್ಷಿತಾ ಪ್ರೇಮ್‌ ಹಾಗೂ ಸ್ವತಃ ಕಿಚ್ಚ ಸುದೀಪ್‌ ಸೇರಿದಂತೆ ಹಲವು ಗಣ್ಯರು ಸಿನಿಮಾದ ಅದ್ಧೂರಿ ಮೇಕಿಂಗ್‌ ಮತ್ತು ಯಶ್‌ ಪಟ್ಟ ಶ್ರಮವನ್ನು ಕೊಂಡಾಡಿದ್ದರು. ಈ ಸಾಲಿಗೆ ಸೇರಿರುವ ಸಾನ್ವಿ, ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಯಶ್‌ ಅಭಿನಯವನ್ನು ವಿಶೇಷವಾಗಿ ಹೊಗಳಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಅನಿಸಿಕೆ ಹಂಚಿಕೊಂಡಿರುವ ಸಾನ್ವಿ, ಯಶ್ ಸಾಧನೆಯನ್ನು ‘ಅದ್ಭುತ’ ಎಂಬ ಒಂದೇ ಪದದಲ್ಲಿ ಬಣ್ಣಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಯಶ್ ಕೇವಲ ಅಭಿನಯಿಸಿಲ್ಲ, ಬದಲಿಗೆ ಸಿನಿಮಾದ ಪ್ರತಿಯೊಂದು ಫ್ರೇಮ್‌ನಲ್ಲೂ ತಮ್ಮದೇ ಆದ ಮ್ಯಾಜಿಕ್ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಸಿನಿಮಾ ಮುಗಿದು ಎಂಡ್ ಕ್ರೆಡಿಟ್ಸ್ ಬಂದ ಮೇಲೆಯೂ ಮನಸ್ಸಿನಲ್ಲಿ ಹಾಗೇ ಉಳಿದುಕೊಳ್ಳುವಂತಹ ಅಭಿನಯ ಅವರದ್ದು ಎಂದಿರುವ ಅವರು, ತಾನೊಬ್ಬ ಎಷ್ಟು ಶ್ರೇಷ್ಠ ಹಾಗೂ ಕೌಶಲಪೂರ್ಣ ನಟ ಎಂಬುದನ್ನು ಯಶ್ ವಿಶ್ವಕ್ಕೆ ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ವತಃ ಸುದೀಪ್‌ ಅವರು ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದ ಬೆನ್ನಲ್ಲೇ, ಅವರ ಪುತ್ರಿ ಸಾನ್ವಿ ಕೂಡ ಯಶ್‌ ಅವರ ಮಾಸ್‌ ಆವತಾರ ಹಾಗೂ ನಟನೆಯನ್ನು ಕೊಂಡಾಡಿರುವುದು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ.

The post ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌ appeared first on Good News 24x7.

]]>
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ! https://www.goodnews24x7.com/fssai-displeased-everest-and-lg-asafoetida-powder-banned/ Sun, 30 Aug 2026 11:42:41 +0000 https://www.goodnews24x7.com/?p=9942 ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಪ್ರಸಿದ್ಧ ‘ಎವರೆಸ್ಟ್ ಫುಡ್ ಪ್ರಾಡಕ್ಟ್ಸ್’ ಹಾಗೂ ‘ಲಾಲ್ಜಿ ಗೋಧು (LG)’ ಕಂಪನಿಗಳ ಇಂಗಿನ ಪುಡಿ (Asafoetida) ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ಇತ್ತೀಚೆಗೆ ನಡೆದ ಪ್ರಯೋಗಾಲಯ ಪರೀಕ್ಷೆಗಳಲ್ಲಿ ಈ ಎರಡೂ…

The post FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ! appeared first on Good News 24x7.

]]>

ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಪ್ರಸಿದ್ಧ ‘ಎವರೆಸ್ಟ್ ಫುಡ್ ಪ್ರಾಡಕ್ಟ್ಸ್’ ಹಾಗೂ ‘ಲಾಲ್ಜಿ ಗೋಧು (LG)’ ಕಂಪನಿಗಳ ಇಂಗಿನ ಪುಡಿ (Asafoetida) ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ಇತ್ತೀಚೆಗೆ ನಡೆದ ಪ್ರಯೋಗಾಲಯ ಪರೀಕ್ಷೆಗಳಲ್ಲಿ ಈ ಎರಡೂ ಬ್ರ್ಯಾಂಡ್‌ಗಳ ಇಂಗಿನ ಮಾದರಿಗಳು ನಿಗದಿತ ಆಹಾರ ಸುರಕ್ಷತಾ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿದ್ದು, ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬುದು ದೃಢಪಟ್ಟಿದೆ.

ಸಾಮಾಜಿಕ ಜಾಲತಾಣದ ಅಧಿಕೃತ ಪೋಸ್ಟ್ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿರುವ FSSAI, ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಈ ಕಠಿಣ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ. ಜೊತೆಗೆ, ನಿಯಮಾವಳಿಗಳಿಗೆ ಅನುಗುಣವಾಗಿ ಉತ್ಪನ್ನದ ಗುಣಮಟ್ಟವನ್ನು ತಕ್ಷಣವೇ ಸುಧಾರಿಸಲು ಎರಡೂ ಸಂಸ್ಥೆಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

The post FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ! appeared first on Good News 24x7.

]]>
ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ? https://www.goodnews24x7.com/is-chinas-border-construction-work-the-cause-of-nepals-severe-floods/ Thu, 27 Aug 2026 09:51:39 +0000 https://www.goodnews24x7.com/?p=9936 ನೇಪಾಳದ ರಸುವಾ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಹಠಾತ್ ಭೀಕರ ಪ್ರವಾಹಕ್ಕೆ ಹಿಮಾಲಯ ಪ್ರದೇಶದಲ್ಲಿ ಚೀನಾ ಕೈಗೊಂಡಿರುವ ಮೂಲಸೌಕರ್ಯ ನಿರ್ಮಾಣ ಚಟುವಟಿಕೆಗಳೇ ಮುಖ್ಯ ಕಾರಣ ಎಂದು ‘ನೇಪಾಳ ಕರೆಸ್ಪಾಂಡೆನ್ಸ್’ ಎಂಬ ಪತ್ರಕರ್ತರ ಗುಂಪು ಗಂಭೀರ ಆರೋಪ ಮಾಡಿದೆ. ಚೀನಾ-ನೇಪಾಳ ಗಡಿಯ ಸೂಕ್ಷ್ಮ ಹಿಮನದಿ…

The post ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ? appeared first on Good News 24x7.

]]>

ನೇಪಾಳದ ರಸುವಾ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಹಠಾತ್ ಭೀಕರ ಪ್ರವಾಹಕ್ಕೆ ಹಿಮಾಲಯ ಪ್ರದೇಶದಲ್ಲಿ ಚೀನಾ ಕೈಗೊಂಡಿರುವ ಮೂಲಸೌಕರ್ಯ ನಿರ್ಮಾಣ ಚಟುವಟಿಕೆಗಳೇ ಮುಖ್ಯ ಕಾರಣ ಎಂದು ‘ನೇಪಾಳ ಕರೆಸ್ಪಾಂಡೆನ್ಸ್’ ಎಂಬ ಪತ್ರಕರ್ತರ ಗುಂಪು ಗಂಭೀರ ಆರೋಪ ಮಾಡಿದೆ. ಚೀನಾ-ನೇಪಾಳ ಗಡಿಯ ಸೂಕ್ಷ್ಮ ಹಿಮನದಿ ಪ್ರದೇಶಗಳಲ್ಲಿ ಚೀನಾ ನಡೆಸುತ್ತಿರುವ ಅವ್ಯಾಹತ ಕಾಮಗಾರಿಗಳು ಸ್ಥಳೀಯ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾನಿಗೊಳಿಸಿದ್ದು, ಇದು ಪುನರಾವರ್ತಿತ ಹಿಮಪಾತ ಹಾಗೂ ದಿಢೀರ್ ಪ್ರವಾಹಗಳಿಗೆ ದಾರಿಮಾಡಿಕೊಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.

ಟಿಬೆಟ್‌ನ ಗೈರಾಂಗ್ ಪಟ್ಟಣದ ಬಳಿ ಈ ಪ್ರವಾಹದ ಮೂಲವಿದೆ ಎಂದು ಹೇಳಲಾಗಿದ್ದು, ಕ್ಸಿನ್‌ಜಿಯಾಂಗ್-ಟಿಬೆಟ್ ವಲಯ ಹಾಗೂ ಗಡಿ ಪ್ರದೇಶಗಳಲ್ಲಿ ಚೀನಾ ನಿರ್ಮಿಸುತ್ತಿರುವ ‘ಕ್ಸಿಯಾಕಾಂಗ್ ವಸಾಹತುಗಳು’ ಈ ಪರಿಸರ ವಿಕೋಪಕ್ಕೆ ಕಾರಣವಾಗಿವೆ ಎಂದು ‘ನೇಪಾಳ ಕರೆಸ್ಪಾಂಡೆನ್ಸ್’ ತನ್ನ ಎಕ್ಸ್ (ಟ್ವಿಟರ್) ಪೋಸ್ಟ್‌ನಲ್ಲಿ ಉಲ್ಲೇಖಿಸಿದೆ. ಟಿಬೆಟ್‌ನ ಕೆರುಂಗ್ ಭಾಗದಲ್ಲಿ ಚೀನಾ ಅವಿಚಾರಿತವಾಗಿ ಬೆಟ್ಟಗಳನ್ನು ಕಡಿದು, ತ್ರಿಶೂಲಿ ನದಿಯ ನೈಸರ್ಗಿಕ ಹರಿವಿನ ಹಾದಿಯನ್ನೇ ಬದಲಾಯಿಸಿದೆ ಎಂಬ ದೂರು ಕೇಳಿಬಂದಿದೆ.

ಅಲ್ಲದೆ, ರಸುವಾ ಗಡಿಯ ಎರಡು ನದಿಗಳ ಸಂಗಮ ಕ್ಷೇತ್ರದಲ್ಲಿ ಕೆರುಂಗ್ ಬಂದರನ್ನು ನಿರ್ಮಿಸಲಾಗಿದ್ದು, ಈ ಬೃಹತ್ ರಚನೆಯು ನೇಪಾಳದ ಕಡೆಗೆ ಹರಿಯುವ ನೀರಿನ ವೇಗವನ್ನು ಹೆಚ್ಚಿಸಿ ಹಠಾತ್ ಪ್ರವಾಹದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಚೀನಾದ ಈ ಯೋಜನಾರಹಿತ ಕಾಮಗಾರಿಗಳನ್ನು “ಪರಿಸರದ ವಿರುದ್ಧ ಎಸಗಿದ ಉದ್ದೇಶಪೂರ್ವಕ ಅಪರಾಧ” ಎಂದು ಕರೆದಿರುವ ಪತ್ರಕರ್ತರ ಒಕ್ಕೂಟ, ನೇಪಾಳ ಸರ್ಕಾರವು ಬೀಜಿಂಗ್ ಆಡಳಿತದೊಂದಿಗೆ ಈ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದೆ.

The post ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ? appeared first on Good News 24x7.

]]>
ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ https://www.goodnews24x7.com/onion-shortage-and-fear-of-price-hike/ Thu, 27 Aug 2026 08:45:48 +0000 https://www.goodnews24x7.com/?p=9931 ಹಬ್ಬಗಳ ಆರಂಭವಾಗುತ್ತಿರುವ ಬೆನ್ನಲ್ಲೇ ಅಗತ್ಯ ವಸ್ತುವಾದ ಈರುಳ್ಳಿಯ ಬೆಲೆ ಗಗನಕ್ಕೇರುತ್ತಿದ್ದು, ಸಾರ್ವಜನಿಕರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಕೇಂದ್ರ ಸರ್ಕಾರವು ಬೆಲೆ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಮಾರುಕಟ್ಟೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಸದ್ಯ ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 25ರಿಂದ 50…

The post ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ appeared first on Good News 24x7.

]]>

ಹಬ್ಬಗಳ ಆರಂಭವಾಗುತ್ತಿರುವ ಬೆನ್ನಲ್ಲೇ ಅಗತ್ಯ ವಸ್ತುವಾದ ಈರುಳ್ಳಿಯ ಬೆಲೆ ಗಗನಕ್ಕೇರುತ್ತಿದ್ದು, ಸಾರ್ವಜನಿಕರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಕೇಂದ್ರ ಸರ್ಕಾರವು ಬೆಲೆ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಮಾರುಕಟ್ಟೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಸದ್ಯ ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 25ರಿಂದ 50 ರೂಪಾಯಿ ಇದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಈಗಾಗಲೇ 65 ರೂಪಾಯಿಗೆ ಮಾರಾಟವಾಗುತ್ತಿದೆ. ಮುಂಬರುವ ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ಪ್ರತಿ ಕೆಜಿಗೆ 100 ರೂಪಾಯಿಗೆ ತಲುಪುವ ಭೀತಿ ಎದುರಾಗಿದೆ. ಕರ್ನಾಟಕದ ಗದಗ, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಮುಂಗಾರು ಮಳೆಯ ಅಭಾವದಿಂದ ಬೆಳೆ ಕುಸಿದಿದ್ದರೆ, ಇನ್ನೊಂದೆಡೆ ಮಹಾರಾಷ್ಟ್ರದ ನಾಸಿಕ್ ಮತ್ತು ವಿದರ್ಭ ಭಾಗಗಳಲ್ಲಿ ತೀವ್ರ ಮಳೆಯಿಂದಾಗಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಅಕ್ಟೋಬರ್ ಮಧ್ಯಭಾಗದವರೆಗೆ ಹೊಸ ಈರುಳ್ಳಿ ಮಾರುಕಟ್ಟೆಗೆ ಬರುವ ಸಾಧ್ಯತೆಯಿಲ್ಲದಿರುವುದರಿಂದ ಪೂರೈಕೆಯಲ್ಲಿ ತೀವ್ರ ಅಭಾವ ಸೃಷ್ಟಿಯಾಗಿದೆ. ಜೊತೆಗೆ, ಕೇಂದ್ರ ಸರ್ಕಾರ ಸಂಗ್ರಹಿಸಿರುವ ಬಫರ್ ಸ್ಟಾಕ್ ಕೂಡ ಮಾರುಕಟ್ಟೆಯ ಬೃಹತ್ ಬೇಡಿಕೆಯನ್ನು ಪೂರೈಸಲು ಸಾಕಾಗುತ್ತಿಲ್ಲ. ಇದಲ್ಲದೆ ಡೀಸೆಲ್ ದರ ಏರಿಕೆಯಿಂದಾಗಿ ಅಕ್ಕಿ, ಬೇಳೆ, ಎಣ್ಣೆ ಮತ್ತು ಸಕ್ಕರೆಯಂತಹ ಅಗತ್ಯ ವಸ್ತುಗಳ ಸಾಗಣೆ ವೆಚ್ಚ ಹೆಚ್ಚಾಗಿದ್ದು, ಇದರ ನೇರ ಪರಿಣಾಮವಾಗಿ ಮುಂಬರುವ ದಿನಗಳಲ್ಲಿ ಹೋಟೆಲ್‌ಗಳಲ್ಲಿ ಈರುಳ್ಳಿ ದೋಸೆ, ಪಾನಿಪುರಿ ಹಾಗೂ ಮಸಾಲೆಪುರಿ ಮುಂತಾದ ಖಾದ್ಯಗಳ ದರ ಏರಿಕೆಯಾಗುವುದು ನಿಶ್ಚಿತವಾಗಿದೆ.

The post ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ appeared first on Good News 24x7.

]]>
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ https://www.goodnews24x7.com/voter-list-revision-sir-cm-dk-shivakumar-issues-strict-instructions-to-officials%e0%b2%ae%e0%b2%a4%e0%b2%a6%e0%b2%be%e0%b2%b0%e0%b2%b0-%e0%b2%aa%e0%b2%9f%e0%b3%8d%e0%b2%9f%e0%b2%bf-%e0%b2%aa/ Thu, 04 Jun 2026 13:19:57 +0000 https://www.goodnews24x7.com/?p=9590 ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

The post ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ appeared first on Good News 24x7.

]]>

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ ಪ್ರಕ್ರಿಯೆ ಯಶಸ್ವಿಯಾಗಬೇಕು. ಯಾವುದೇ ಒಬ್ಬ ಅರ್ಹ ನಾಗರಿಕನೂ ತನ್ನ ಅತ್ಯಮೂಲ್ಯ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು” ಎಂದು ತಿಳಿಸಿದರು. ಸಾರ್ವಜನಿಕರ ನೆರವಿಗಾಗಿ ತಕ್ಷಣವೇ ‘ಹೆಲ್ಪ್ ಡೆಸ್ಕ್’ ಸ್ಥಾಪಿಸಲು ಮತ್ತು ಜಾಗೃತಿ ಮೂಡಿಸಲು ಪ್ರತ್ಯೇಕ ಅಧಿಕಾರಿಗಳ ತಂಡವನ್ನು ನೇಮಿಸುವಂತೆ ಸೂಚಿಸಿದರು. ಇದೇ ವೇಳೆ, ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾನೂನಿನ ಚೌಕಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಇದರೊಂದಿಗೆ, ಎನ್‌ಆರ್‌ಐಗಳಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಹಾಗೂ ಉದ್ಯೋಗ ಸೃಷ್ಟಿ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

The post ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ appeared first on Good News 24x7.

]]>
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ ! https://www.goodnews24x7.com/if-i-am-cm-i-will-give-rs-3000-to-women-rs-2000-to-men-mla-yatnal-if-i-am-cm-i-will-give-rs-3000-to-women-rs-2000-to-men-mla-yatnal/ Fri, 03 Apr 2026 05:20:17 +0000 https://www.goodnews24x7.com/?p=9091   ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

The post ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ ! appeared first on Good News 24x7.

]]>

 

ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು ಆರೋಪಿಸಿದರು. ಮರಣೋತ್ತರ ಪ್ರಮಾಣಪತ್ರದ ಶುಲ್ಕ 25 ರೂಪಾಯಿಯಿಂದ 100 ರೂಪಾಯಿಗೆ ಏರಿಕೆಯಾಗಿರುವುದನ್ನು ಮತ್ತು ಪ್ರತಿ ಯೂನಿಟ್ ವಿದ್ಯುತ್ ದರ 7 ರೂಪಾಯಿ 20 ಪೈಸೆಗೆ ಏರಿರುವುದನ್ನು ಅವರು ಉಲ್ಲೇಖಿಸಿದರು.

ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಬೇಕು, ಕೇವಲ 2,000 ರೂಪಾಯಿ ನೀಡುವ ಯೋಜನೆಗಳಲ್ಲ ಎಂದು ಪ್ರತಿಪಾದಿಸಿದರು. ಸುಮಾರು ಮೂರು ಲಕ್ಷ ಸರ್ಕಾರಿ ಹುದ್ದೆಗಳು ಖಾಲಿಯಿದ್ದರೂ ಅವುಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಯತ್ನಾಳ್ ದೂರಿದರು. 2028ರ ವೇಳೆಗೆ ಬದಲಾವಣೆ ತರಲು ವೀರಣ್ಣ ಚರಂತಿಮಠ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು.

 

The post ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ ! appeared first on Good News 24x7.

]]>
ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ ! https://www.goodnews24x7.com/mysores-falcon-tyres-ltd-former-owner-andarmysores-falcon-tyres-ltd-former-owner-andar/ Thu, 02 Apr 2026 14:17:59 +0000 https://www.goodnews24x7.com/?p=9083     ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

The post ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ ! appeared first on Good News 24x7.

]]>

 

 

ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ

ಈ ಕಳ್ಳನಿಗೆ ಇದೇನು ಹೊಸತಲ್ಲ ಇದು 2 ನೇ ಭಾರಿ ಅಂದರ್ ಆಗಿರುವುದು. ಹಿಂದೆ 2016 ರಲ್ಲಿ ರೈಲ್ವೆ ಸಂಭಂದಿತ ಕಳ್ಳತನದ ಆರೋಪದಲ್ಲಿ ತನ್ನ 59 ನೇ ಹುಟ್ಟುಹಬ್ಬದಂದೇ ಬಂಧಿಯಾಗಿದ್ದ. ಎರಡು ತಿಂಗಳ ಜೈಲುವಾಸದ ನಂತರ ಜಾಮೀನಿನ ಮೇಲೆ ಹೊರಬಂದಿದ್ದನು.

ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯನ್ನು ಒಳಗೊಂಡ ಬಹುಕೋಟಿ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕೈಗಾರಿಕೋದ್ಯಮಿ ಪವನ್ ರುಹಿಯಾ ನನ್ನು ಪಶ್ಚಿಮ ಬಂಗಾಳ ಪೊಲೀಸರ ಸೈಬರ್ ಅಪರಾಧ ವಿಭಾಗ ಮಂಗಳವಾರ ಬಂಧಿಸಿದೆ.

ಬಿಧಾನ್‌ನಗರ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ನಂತರ ಕೋಲ್ಕತ್ತಾದ ಹೊರವಲಯದಲ್ಲಿರುವ ನ್ಯೂ ಟೌನ್‌ನಲ್ಲಿರುವ ಹೋಟೆಲ್ ಬಳಿ ನಿನ್ನೆ ಅಂದರೆ ಏಪ್ರಿಲ್ 1 ರಂದು ರುಹಿಯಾನನ್ನು ಬಂಧಿಸಲಾಯಿತು.

ಸೈಬರ್ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಕಂಡುಬಂದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ, ಇದರಲ್ಲಿ 315 ಕೋಟಿ ರೂ.ಗಳ ಆದಾಯವು ಶೆಲ್ ಕಂಪನಿಗಳು ಮತ್ತು ರುಹಿಯಾ ಕುಟುಂಬಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಂದ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣದಲ್ಲಿ ಆರೋಪಿ ಮತ್ತು ಆತನ ಕುಟುಂಬ ಸದಸ್ಯರಿಗೆ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ಕಲ್ಕತ್ತಾ ಹೈಕೋರ್ಟ್ ಇಂದು ಬೆಳಿಗ್ಗೆ ರದ್ದುಗೊಳಿಸಿದ ನಂತರ ಈ ಬಂಧನವಾಗಿದ್ದು, ಪೊಲೀಸ್ ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ.

ದೇಶಾದ್ಯಂತ ವಿವಿಧ ಆನ್‌ಲೈನ್ ಹಗರಣಗಳ ಆದಾಯವನ್ನು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಇಟ್ಟ ಆರೋಪದ ಮೇಲೆ ಕಲ್ಕತ್ತಾ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೈಗಾರಿಕೋದ್ಯಮಿ, ರುಹಿಯಾ ನ ಮಗ ರಾಘವ್ ಮತ್ತು ಮಗಳು ಪಲ್ಲವಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು.

ತನಿಖಾಧಿಕಾರಿಗಳ ಪ್ರಕಾರ, ಈ ಪ್ರಕರಣವು ಮೊಬೈಲ್ ಅಪ್ಲಿಕೇಶನ್ ಮೂಲಕ ಕಾರ್ಯನಿರ್ವಹಿಸುವ ನಕಲಿ ಹೂಡಿಕೆ ಯೋಜನೆಯ ಮೂಲಕ ಹಿರಿಯ ನಾಗರಿಕರೊಬ್ಬರಿಗೆ ಸುಮಾರು 93 ಲಕ್ಷ ರೂ.ಗಳನ್ನು ವಂಚಿಸಿದ ಪ್ರಕರಣವಾಗಿದೆ. ಈ ಹಣವನ್ನು ಬಹು ಶೆಲ್ ಕಂಪನಿ ಖಾತೆಗಳ ಮೂಲಕ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

“ಇದು ದೇಶಾದ್ಯಂತ ವ್ಯಾಪಕ ಪರಿಣಾಮ ಬೀರುವ ದೊಡ್ಡ ಅಂತರರಾಜ್ಯ ಸೈಬರ್ ವಂಚನೆ ದಂಧೆಯ ಭಾಗವಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿ ಮತ್ತು ಅವನ ಸಹಚರರು ವಿದೇಶಗಳಲ್ಲಿ ಹಣವನ್ನು ವಂಚಿಸಲು ಮತ್ತು ಅಕ್ರಮವಾಗಿ ವರ್ಗಾಯಿಸಲು ಬಹು-ಹಂತದ ಬ್ಯಾಂಕಿಂಗ್ ಚಾನೆಲ್‌ಗಳು ಮತ್ತು ಕ್ರಿಪ್ಟೋಕರೆನ್ಸಿಗಳನ್ನು ಬಳಸುತ್ತಿದ್ದರು” ಎಂದು ಸೈಬರ್ ಅಪರಾಧ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ರುಹಿಯಾ ನನ್ನು ಬುಧವಾರ ಬಿಧಾನ್‌ನಗರ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ.

The post ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ ! appeared first on Good News 24x7.

]]>
ಅವಧಿಗೂ ಮುನ್ನವೇ ಫೋಟೋ ಶೂಟ್: ಭಾರೀ ಚರ್ಚೆ! https://www.goodnews24x7.com/photo-shoot-before-term-huge-debatephoto-shoot-before-term-huge-debate/ Wed, 25 Mar 2026 13:19:36 +0000 https://www.goodnews24x7.com/?p=8982   ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆಯ ಸುದ್ದಿ ಸದ್ದು ಮಾಡುತ್ತಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಅವಧಿಗೂ ಮುನ್ನವೇ 16ನೇ ವಿಧಾನಸಭೆಯ ಎಲ್ಲಾ ಸದಸ್ಯರ ಗ್ರೂಪ್​ ಫೋಟೋ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಬದಲಾವಣೆಯೋ? ಸ್ಪೀಕರ್ ಬದಲಾವಣೆಯೋ…

The post ಅವಧಿಗೂ ಮುನ್ನವೇ ಫೋಟೋ ಶೂಟ್: ಭಾರೀ ಚರ್ಚೆ! appeared first on Good News 24x7.

]]>

 

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆಯ ಸುದ್ದಿ ಸದ್ದು ಮಾಡುತ್ತಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಅವಧಿಗೂ ಮುನ್ನವೇ 16ನೇ ವಿಧಾನಸಭೆಯ ಎಲ್ಲಾ ಸದಸ್ಯರ ಗ್ರೂಪ್​ ಫೋಟೋ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಬದಲಾವಣೆಯೋ? ಸ್ಪೀಕರ್ ಬದಲಾವಣೆಯೋ ಅಥವಾ ಸಂಪುಟ ಪುನರ್ ರಚನೆಯೋ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಸರ್ಕಾರದ ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾಕಂದ್ರೆ, ಸಾಮಾನ್ಯವಾಗಿ ವಿಧಾನಸಭೆ ಅವಧಿ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ ಸ್ಪೀಕರ್ ಸಮ್ಮುಖದಲ್ಲಿ ಶಾಸಕರ ಗ್ರೂಪ್ ಫೋಟೋ ತೆಗೆದುಕೊಳ್ಳುವುದು ಸಂಪ್ರದಾಯವಾಗಿದೆ. ಆದ್ರೆ, ಅವಧಿಗೂ ಮುನ್ನವೇ ಸ್ಫೀಕರ್ ಯುಟಿ ಖಾದರ್, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಶಾಸಕರ ಫೋಟೋ ಶೂಟ್ ಮಾಡಿಸಿರುವುದು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಸಿಎಂ ಬದಲಾವಣೆ, ಸ್ಪೀಕರ್ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆಯ ಮುನ್ಸೂಚನೆಯೇ ಎಂಬ ಗೊಂದಲ ಮತ್ತು ಅನುಮಾನಗಳನ್ನು ಶಾಸಕರಲ್ಲಿ ಹುಟ್ಟುಹಾಕಿದೆ. ಹೌದು.. ಶೀಘ್ರದಲ್ಲೇ ಸಂಪುಟಕ್ಕೆ ಸರ್ಜರಿಯಾಗಲಿದ್ದು, ಸ್ಪೀಕರ್ ಖಾದರ್‌ ಅವರು ಸಹ ಸಂಪುಟ ಸೇರುವ ಸಾಧ್ಯತೆಯಿದ ಹೀಗಾಗಿಯೇ ವಿಧಾನಸಭೆ ಮುಕ್ತಾಯಕ್ಕೂ ಮೊದಲೇ ಫೋಟೋ ಶೂಟ್‌ ಮಾಡಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಅವಧಿಗೂ ಮುನ್ನವೇ 16 ವಿಧಾನಸಭೆಯ ಸದಸ್ಯರ ಗ್ರೂಪ್ ಫೋಟೋ ಹಿಂದಿನ ಮರ್ಮ ಏನು ಎನ್ನುವ ಬಗ್ಗೆ ಶಾಸಕರಲ್ಲಿಯೂ ಗೊಂದಲ ಉಂಟಾಗಿದೆ. ವಿಧಾನಸೌಧದ ಪಡಸಾಲೆಗಳಲ್ಲಿ ಕೂಡ ಇದೇ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಪರಸ್ಪರ ಶಾಸಕರು ಕಾರಣಗಳನ್ನು ಊಹಿಸುತ್ತಿದ್ದಾರೆ. ಫೋಟೋ ಶೂಟ್ ಹಿಂದೆ ಏನಾದರೂ ರಾಜಕೀಯ ಸಂದೇಶವಿದೆಯೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

 

ಕೆಲವರು ಈ ಬೆಳವಣಿಗೆಯನ್ನು ಮುಖ್ಯಮಂತ್ರಿ ಬದಲಾವಣೆಯ ಮುನ್ಸೂಚನೆ ಎಂದು ವ್ಯಾಖ್ಯಾನಿಸುತ್ತಿದ್ದಾರೆ. ಸಿಎಂ ಬದಲಾವಣೆ ಸಂಭವಿಸಿದರೆ, ಸಂಪುಟದಲ್ಲಿ ಹಾಗೂ ವಿವಿಧ ಹುದ್ದೆಗಳಲ್ಲಿ ಮಹತ್ತರ ಬದಲಾವಣೆಗಳು ಸಂಭವಿಸಬಹುದು. ಇದೇ ಕಾರಣಕ್ಕಾಗಿ ಮುಂಚಿತವಾಗಿ ನೆನಪಿಗಾಗಿ ಫೋಟೋ ಶೂಟ್ ನಡೆಸಲಾಗಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಇನ್ನೂ ಕೆಲವರು ಇದು ಸ್ಪೀಕರ್ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆಗೆ ಮುನ್ನ ನಡೆಯುವ ಸಿದ್ಧತೆಯಾಗಿರಬಹುದೇ ಎಂಬ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಸಂಪುಟ ಪುನಾರಚನೆಯಲ್ಲಿ ಸ್ಪೀಕರ್ ಯುಟಿ ಖಾದರ್​​ಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಸಹ ಗ್ರೀನ್ ಸಿಗ್ನಲ್ ಕೊಟ್ಟಿರುವ ಸಾಧ್ಯತೆಗಳಿವೆ. ಹೀಗಾಗಿ ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಸ್ಪೀಕರ್‌ಗೆ ಮುನ್ಸೂಚನೆ ಸಿಕ್ಕಿರುವುದರಿಂದಲೇ ಈ ಫೋಟೋ ಶೂಟ್ ಮಾಡಿಸಿದ್ದಾರೆಯೇ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ರಾಜ್ಯ ಸರ್ಕಾರದ ಸಂಪುಟ ಪುನರ್‌ರಚನೆ ಚರ್ಚೆ ನಡೆಯುತ್ತಿದೆ. ಈಗಾಗಲೇ ಆಕಾಂಕ್ಷಿಗಳು ಸಭೆಗಳನ್ನು ನಡೆಸಿ ಸಂಪುಟ ಪುನರ್‌ರಚನೆಗೆ ಒತ್ತಡ ಹೇರುತ್ತಿದ್ದಾರೆ. ಹೈಕಮಾಂಡ್ ನಾಯಕರಿಗೆ ಪತ್ರವನ್ನು ಬರೆದಿದ್ದು, ಮೊದಲ ಬಾರಿ ಶಾಸಕರಾಗಿರುವವರು ನಮಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ‌. ಅಲ್ಲದೇ ಎರಡು ವರ್ಷ ಪೂರ್ಣಗೊಳಿಸಿರುವ ಸಚಿವರನ್ನು ಬಿಟ್ಟು ಇನ್ನುಳಿದ ಎರಡುವರೆ ವರ್ಷ ಅವಧಿಗೆ ಬೇರೆಯವರನ್ನ ಸಚಿವರನ್ನಾಗಿ ಮಾಡಬೇಕೆನ್ನುವುದು ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆಯೇ ಸ್ಪೀಕರ್ ಯು.ಟಿ ಖಾದರ್ ಅವರು ಶಾಸಕರ ಫೋಟೋಶೂಟ್ ನಡೆಸಿದ್ದಾರೆ.

ವಿಪಕ್ಷದ ಕೆಲವು ಶಾಸಕರು ಫೋಟೋ ಶೂಟ್ ಬಗ್ಗೆ ನಾನಾ ವ್ಯಾಖ್ಯಾನ ನೀಡುತ್ತಿದ್ದಾರೆ. ಹೌದು..ಅವಧಿ ದಿಢೀರ್ ಆಗಿ ಸ್ಪೀಕರ್ ಫೋಟೋ ಶೂಟ್ ಮಾಡಿಸಿಕೊಂಡ ಉದ್ದೇಶ ಏನು ಎಂಬುವುದು ಕುತೂಹಲವಾಗಿದೆ. ಇದು ಸಂಪುಟ ಪುನಾರಚನೆ ಆಗಲಿದೆ ಎಂಬ ಸುಳಿವು ಆಗಿರಬಹುದು ಎನ್ನುತ್ತಾರೆ.ಇನ್ನು ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಕುರಿತು ವಿಪಕ್ಷ ಬಿಜೆಪಿ ಸಹ ಟ್ವೀಟ್ ಮಾಡಿದ್ದು, ಇದು ಸಿಎಂ ಸಿದ್ದರಾಮಯ್ಯ ಔಟ್​ಗೋಯಿಂಗ್ ಫೋಟೋಶೂಟ್ ಅಲ್ವಾ? ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿ ಪೋಸ್ಟ್ ಮಾಡಿದೆ.

ಗ್ರೂಪ್ ಫೋಟೋಗೆ 3 ಕಾರಣ ಕೊಟ್ಟ ಬಿಜೆಪಿ ಶಾಸಕ
ಕರ್ನಾ ಟಕ ವಿಧಾನಸಭೆಯ ಸಭಾಧ್ಯಕ್ಷರು ಯು. ಟಿ.ಖಾದರ್ ತಮ್ಮ ಅವಧಿಯಲ್ಲಿ ವಿಶಿಷ್ಟ ಕೆಲಸಗಳನ್ನು ಮಾಡುವುದರಲ್ಲಿ ಇವರಿಗೆ ವಿಪರೀತ ಉಮೇದು. ರಾಜ್ಯದ ಮಾಜಿ ಧೀಮಂತ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯನವರು 50 ರ ದಶಕದಲ್ಲಿ ಕೇವಲ 1.50 ಕೋಟಿ ಹಣದಲ್ಲಿ ನಿರ್ಮಿಸಿದ ಭವ್ಯ ವಿಧಾನಸೌಧಕ್ಕೆ 84 ಲಕ್ಷ ರೂ. ವೆಚ್ಚದಲ್ಲಿ ಹೊಸ ಬಾಗಿಲನ್ನು ನಿರ್ಮಿಸಿದ ಹೆಗ್ಗಳಿಕೆ ನಮ್ಮ ಈ ಸಭಾಧ್ಯಕ್ಷರದ್ದು. ಹಳೆಯ ಬಾಗಿಲು ಹಾಳಾಗಿ ಹೋಗಿತ್ತೇ? ಶಿಥಿಲವಾಗಿತ್ತೇ? ಗೆದ್ದಲು ತಿಂದಿತ್ತೇ? ಅಥವಾ ಯಾರಾದರೂ ಬಾಗಿಲು ಹಳೆದಾಗಿದೆ, ಬದಲಾಯಿಸಿ ಎಂದು ಕೇಳಿದ್ದರೇ?. ಹೊಸ ಬಾಗಿಲು ಹಾಕಿಸುವುದಕ್ಕೆ ಕಾರಣ ಯಾರಿಗೂ ಗೊತ್ತಿಲ್ಲ. ಈಗ ಮತ್ತೊಂದು ಹೊಸ ಕಾರ್ಯ ಮಾಡಲು ನಮ್ಮ ಸಭಾಧ್ಯಕ್ಷರು ಇಳಿದಿದ್ದಾರೆ. ವಿಧಾನ ಸಭೆಯ ಎಲ್ಲಾ ಸದಸ್ಯರ ಗ್ರೂಪ್ ಫೋಟೋ ಯೋಜಿಸಲಾಗಿದೆ. ಸಾಮಾನ್ಯವಾಗಿ ಶಾಸಕರ ಗ್ರೂಪ್ ಫೋಟೋ ತೆಗೆಯುವುದು ಐದು ವರ್ಷ ಅವಧಿಯ ಕೊನೆಯಲ್ಲಿ. ಅಂದರೆ 2028 ಮಾರ್ಚ್- ಏಪ್ರಿಲ್ ತಿಂಗಳಲ್ಲಿ. ಹೀಗಿದ್ದಾಗ ಈ ಗ್ರೂಪ್ ಫೋಟೋ ಅಗತ್ಯವೇನಿತ್ತು? ಹಾಗೆ ಯೋಚಿಸಿದಾಗ ಕಾರಣಗಳು ಈ ಕೆಳಕಂಡಂತಿರಬಹುದು.

 

ಈ ಅಧಿವೇಶನದ ನಂತರ ಖಾದರ್ ರವರು ಸಭಾಧ್ಯಕ್ಷರ ಸ್ಥಾನದಿಂದ ಸಚಿವ ಸ್ಥಾನಕ್ಕೆ ಹೋಗುವ ಇರಾದೆ ಹೊಂದಿರಬಹುದು. ಮತ್ತು ಅದಕ್ಕೆ ಹಸಿರು ನಿಶಾನೆಯೂ ದೊರಕಿರಬಹುದು.
ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬದಲಾಗುತ್ತಾರೆಯೇ? ಅವರು ಮುಖ್ಯಮಂತ್ರಿ ಆಗಿರುವಾಗ ಒಂದು ಫೋಟೋ ಇರಲಿ ಎಂದೇ? ಅಥವಾ
ಮಧ್ಯಂತರ ಚುನಾವಣೆ ನಡೆಯುತ್ತದೆಯೇ? ಈ ಮೇಲಿನ ಮೂರು ಕಾರಣಗಳಲ್ಲಿ ಯಾವುದು ಈ ಮಧ್ಯಂತರ ಗ್ರೂಪ್ ಫೋಟೋಗೆ ಕಾರಣ?
ಒಟ್ಟಿನಲ್ಲಿ ಅವಧಿಗೂ ಮುನ್ನವೇ 16ನೇ ವಿಧಾನಸಭೆ ಸದಸ್ಯರ ಗ್ರೂಫ್​ ಫೋಟೋ ಶೂಟ್ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬದಲಾವಣೆಯಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

 

The post ಅವಧಿಗೂ ಮುನ್ನವೇ ಫೋಟೋ ಶೂಟ್: ಭಾರೀ ಚರ್ಚೆ! appeared first on Good News 24x7.

]]>
ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! https://www.goodnews24x7.com/gold-silver-cash-seized-during-lokayukta-raidgold-silver-cash-seized-during-lokayukta-raid/ Thu, 05 Mar 2026 12:51:14 +0000 https://www.goodnews24x7.com/?p=8682   ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

The post ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! appeared first on Good News 24x7.

]]>

 

ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಮಂಡ್ಯದ ಬಂಡಿಗೌಡ ಬಡಾವಣೆಯಲ್ಲಿರುವ ಎಇಇ ಸತೀಶ್ ಅವರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾಗ, ಎಇಇ ಸತೀಶ್ ಮತ್ತು ಅವರ ಪತ್ನಿ ಮೌನವಾಗಿದ್ದರು ಎಂದು ವರದಿಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

The post ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! appeared first on Good News 24x7.

]]>