9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು : ಸಿಎಂ ಸಿದ್ದರಾಮಯ್ಯ ಪ್ರಶಂಸೆ

9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು : ಸಿಎಂ ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶತಮಾನ ಕಂಡ ಮೈಸೂರು ವೈದ್ಯಕೀಯ ಕಾಲೇಜು 9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಹೆಗ್ಗಳಿಕೆ ಹೊಂದಿದೆ. ಪ್ರಪಂಚದಾದ್ಯಂತ ಈ ಕಾಲೇಜಿನಲ್ಲಿ ಕಲಿತ ವೈದ್ಯರು ವಿಸ್ತರಿಸಿಕೊಂಡಿದ್ದಾರೆ ಎಂದರು.

ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಹೆಚ್ಚು ಪರಿಣಿತಿ ಮತ್ತು ಅನುಭವ ಇರುತ್ತದೆ ಎನ್ನುವುದು ನನ್ನ ಭಾವನೆ. ಸರ್ಕಾರಿ ಆಸ್ಪತ್ರೆಗೆ ಬರುವವರು ಹೆಚ್ಚಿನವರು ಬಡವರು. ಇವರು ವೈದ್ಯರನ್ನು ದೇವರಂತೆ ಕಾಣುತ್ತಾರೆ ಎಂದರು.ವೈದ್ಯಕೀಯ ಕ್ಷೇತ್ರದ್ದು ಎರಡು ರೀತಿಯ ಜವಾಬ್ದಾರಿ ಇದೆ. ರೋಗ ಬಂದ ನಂತರ ಚಿಕಿತ್ಸೆ ಕೊಡುವುದು ಮತ್ತು ರೋಗ ಬರದಂತೆ ತಡೆಯುವುದೂ ಕೂಡ ವೈದ್ಯಕೀಯ ಕ್ಷೇತ್ರದ ಜವಾಬ್ದಾರಿ ಆಗಿದೆ ಎಂದರು.

ವೈದ್ಯರು ಸಮಾಜದ ಆಸ್ತಿ. ಇನ್ನೂ ಹೆಚ್ಚಿನ ವೈದ್ಯರು ಈ ಕಾಲೇಜಿನಿಂದ ಹೊರಗೆ ಬಂದು ಜನರ ಆಸ್ತಿ ಆಗಲಿ.‌ ಸೇವೆ, ಶುಚಿತ್ವ ಮತ್ತು ಗುಣಮಟ್ಟದಲ್ಲಿ ಯಾವುದಕ್ಕೂ ಕಡಿಮೆ ಇಲ್ಲದಂತೆ ಮೈಸೂರು ವೈದ್ಯಕೀಯ ಕಾಲೇಜು ಪ್ರಗತಿ ಕಾಣಲಿ ಎಂದು ಹಾರೈಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ವೈದ್ಯಕೀಯ ಶಿಕ್ಷಣ ಸಚಿವರರಾದ ಶರಣ ಪ್ರಕಾಶ್ ಪಾಟೀಲ್, ಶಾಸಕರುಗಳಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಹಿರಿಯ ಐಪಿಎಸ್ ಅಧಿಕಾರಿ ಬೋರಲಿಂಗಯ್ಯ ಸೇರಿ‌ ಹಲವು ಪ್ರಮುಖರು ಉಪಸ್ಥಿತರಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!