ರಾಮ–ಸೀತೆ ವೇಷದಲ್ಲಿ ಮಿಂಚಿದ ಮಕ್ಕಳು: ರಾಮನವಮಿಗೆ ಕಳೆ ತಂದ ಸಂಭ್ರಮ, ಶ್ರೀರಾಮ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ.

ಮೈಸೂರು: ಶ್ರೀ ರಾಮನು ಸತ್ಯಾ ತಾಳ್ಮೆ ಮತ್ತು ಧರ್ಮದ ಪ್ರತೀಕವಾಗಿದ್ದು ಆತನ ಜೀವನದ ಆದರ್ಶಗಳನ್ನು ಪಾಲಿಸುವುದು ರಾಮನವಮಿಯ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು

ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಕಲಾಉತ್ಸವ ಟ್ರಸ್ಟ್ ಮೈಸೂರು ಹಾಗೂ ಶ್ರೀ ಮಹಾಜನ ಸಭಾ ಟ್ರಸ್ಟ್ ಶ್ರೀರಾಮ ಮಂದಿರ ವತಿಯಿಂದ ಶ್ರೀ ರಾಮನವಮಿ ಅಂಗವಾಗಿ ಆಯೋಜಿಸಿದ ಮಕ್ಕಳಿಗಾಗಿ ಶ್ರೀರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು
ಪ್ರಸ್ತುತ ಸಮಾಜದಲ್ಲಿ ಶಾಂತಿ ಒಗ್ಗಟ್ಟು ಉಳಿಯಲು ರಾಮರಾಜ್ಯದ ಕಲ್ಪನೆ ಅಗತ್ಯವಿದೆ ರಾಮನವಮಿ ದಿನ ಮಾತ್ರವಲ್ಲದೆ ನಿತ್ಯ ರಾಮನ ಜಪಿಸುವುದರಿಂದ ಬದುಕು ಹಸನಾಗಲಿದೆ, ಇದು ರಾಮನ ಜನ್ಮದಿನ ಮಾತ್ರವಾಗಿರದೆ ವ್ಯಕ್ತಿಯ ಜೀವನಕ್ಕೆ ಅಗತ್ಯವಿರುವ ಸತ್ಯ ಧರ್ಮದ ದಾರಿದೀಪವಾಗಿದೆ ಎಂದರು, ರಾಮನು ಮರ್ಯಾದೆ ಪುರುಷೋತ್ತಮ ಎಂಬ ಪದವಿಯನ್ನು ಪಡೆದಿದ್ದು ಅವನ ಜೀವನದ ಪ್ರತಿಯೊಂದು ಕ್ಷಣವು ನಿಯಮ ಶಿಸ್ತು ಮತ್ತು ಧರ್ಮದ ಅನುಸರಣೆ ಎಂಬ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಅವನು ರಾಜಕುಮಾರನಾಗಿದ್ದರೂ ತಂದೆಯ ಮಾತಿಗೆ ಗೌರವ ನೀಡಿ ಅರಣ್ಯ ವಾಸವನ್ನು ಸ್ವೀಕರಿಸಿದಿದ್ದು ಪತ್ನಿ ಸೀತೆಯನ್ನು ರಕ್ಷಿಸಲು ಅನೇಕ ಕಷ್ಟಗಳನ್ನು ಎದುರಿಸುತ್ತಿದ್ದು ಮತ್ತು ಕೊನೆಗೆ ರಾವಣನನ್ನು ಸಂಹರಿಸಿ ಧರ್ಮವನ್ನು ಸ್ಥಾಪಿಸಿದ್ದು ಇವೆಲ್ಲವೂ ಅವನ ಆದರ್ಶ ವ್ಯಕ್ತಿತ್ವದ ಉದಾಹರಣೆಗಳಾಗಿವೆ ಎಂದರು

ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ರಾಮ ಸೀತೆ ವೇಷಧರಿಸಿ ಗಮನ ಸೆಳೆದರು
ಸ್ಪರ್ಧಿಸಿದ ಎಲ್ಲ ಮಕ್ಕಳಿಗೂ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ವಿತರಿಸಿ ನಂತರ ಪ್ರಸಾದ ವಿತರಿಸಲಾಯಿತು

ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ರಘುರಾಮ್ ವಾಜಪಾಯಿ, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ರಾಮ ಮಂದಿರದ ಮಾಧವ ರಾವ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಕಲ ಉತ್ಸವ ಟ್ರಸ್ಟ್ ಅಧ್ಯಕ್ಷ ಅಮಿತ್, ಜಿ ರಾಘವೇಂದ್ರ, ಜಗದೀಶ್, ಎಂ ಆರ್ ಬಾಲಕೃಷ್ಣ , ಟಿ ಎಸ್ ಅರುಣ್, ಚಕ್ರಪಾಣಿ, ನಿರೂಪಕ ಪುರುಷೋತ್ತಮ್, ವಿ ಎನ್ ಕೃಷ್ಣ, ಸುಚಿಂದ್ರ, ಎಸ್ ಎನ್ ರಾಜೇಶ್, ರಾಕೇಶ್, ದುರ್ಗಾ ಪ್ರಸಾದ್, ಶಿವು ಹಾಗೂ ಇನ್ನಿತರರು ಹಾಜರಿದ್ದರು

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!