ಇರಾನ್‌ಗೆ ಚೀನಾ ಶಸ್ತ್ರಾಸ್ತ್ರ ನೆರವು: ಷಿ ಜಿನ್‌ಪಿಂಗ್‌ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ವಾರ್ನಿಂಗ್!

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ಇರಾನ್‌ಗೆ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಗಳನ್ನು ಪೂರೈಸಲು ಮುಂದಾಗಿರುವ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಚೀನಾ ಇರಾನ್‌ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಿದರೆ ಊಹಿಸಲಾಗದ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ನೇರವಾಗಿಯೇ ಷಿ ಜಿನ್‌ಪಿಂಗ್‌ ಅವರಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಅಮೆರಿಕದ ಎಫ್-15 ಯುದ್ಧ ವಿಮಾನ ಹಾಗೂ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳನ್ನು ಇರಾನ್ ಹೊಡೆದುರುಳಿಸಿದ್ದು, ಇದಕ್ಕೆ ಚೀನಾದ ತಂತ್ರಜ್ಞಾನ ಹಾಗೂ ಭುಜದ ಮೇಲೆ ಇಟ್ಟು ಹಾರಿಸುವ ಕ್ಷಿಪಣಿಗಳೇ ಕಾರಣ ಎಂದು ಅಮೆರಿಕದ ಗುಪ್ತಚರ ವರದಿಗಳು ಶಂಕಿಸಿವೆ. ಅಲ್ಲದೆ, ರಾಕೆಟ್ ಇಂಧನಕ್ಕೆ ಬಳಸುವ ಸೋಡಿಯಂ ಪರ್ಕ್ಲೋರೇಟ್ ಅನ್ನು ಚೀನಾ ರಹಸ್ಯವಾಗಿ ಇರಾನ್‌ಗೆ ರವಾನಿಸಿರುವುದು ಪತ್ತೆಯಾಗಿದೆ.

ಈ ಆರೋಪಗಳನ್ನು ವಾಷಿಂಗ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ತಿರಸ್ಕರಿಸಿದ್ದರೂ, ಅಮೆರಿಕದ ಯುದ್ಧ ವಿಮಾನಗಳ ನಿಖರ ಮಾಹಿತಿಯನ್ನು ಚೀನಾ ಇರಾನ್‌ಗೆ ಸೋರಿಕೆ ಮಾಡುತ್ತಿದೆ ಎಂಬ ಆಘಾತಕಾರಿ ಅಂಶಗಳು ಹೊರಬಂದಿವೆ.

ಹಾರ್ಮುಜ್ ಜಲಸಂಧಿಯಲ್ಲಿ ನೆಲಬಾಂಬ್ ಅಳವಡಿಸಿ ಜಾಗತಿಕ ತೈಲ ಸಾರಿಗೆಯನ್ನು ತಡೆಯಲು ಯತ್ನಿಸುತ್ತಿರುವ ಇರಾನ್ ವಿರುದ್ಧ ಕೆಂಡಾಮಂಡಲವಾಗಿರುವ ಟ್ರಂಪ್, “ಯಾರು ಎಷ್ಟೇ ಬಲಪ್ರಯೋಗ ಮಾಡಿದರೂ ಈ ಸಂಘರ್ಷದಲ್ಲಿ ಅಮೆರಿಕವೇ ಗೆಲ್ಲಲಿದೆ; ಇರಾನ್ ರಾಜಿ ಮಾಡಿಕೊಳ್ಳದಿದ್ದರೆ ಅದನ್ನು ಸಂಪೂರ್ಣ ನಾಶಪಡಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ. ಚೀನಾದ ಈ ತೆರೆಮರೆಯ ಪ್ರಚೋದನೆಯು ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳಿಗೆ ದೊಡ್ಡ ಬೆದರಿಕೆಯಾಗಿದ್ದು, ಜಾಗತಿಕ ಶಾಂತಿಯನ್ನು ಕದಡುವ ಸಾಧ್ಯತೆ ಇದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!