CM ಸಿದ್ದರಾಮಯ್ಯ ದೆಹಲಿಯಲ್ಲಿ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಭೇಟಿ.

ದೆಹಲಿ :- CM ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ, ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಪತ್ರದ ವಿವರ ಹೀಗಿದೆ
ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.


ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.
ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ 70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ. ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿ ದ್ದಾರೆ.

ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿಗಳ ಭೂ ಸ್ವಾಧೀನದ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೋರಿದೆ

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್