ಎಸ್​ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ…

ಮಾಜಿ ಸಿಎಂ ಎಸ್​ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿದ ಕೊಡುಗೆಗೆ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.

ಎಸ್.ಎಂ.ಕೃಷ್ಣ ಅವರ ಸಾವಿನಿಂದ ನಾನು ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ.

ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!