ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಉದ್ಘಾಟನೆಗೆ ಮೊದಲು 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ ಹೋಗಲು ಈ ರ್ಯಾಂಪ್ ಸಹಾಯ ಮಾಡುತ್ತದೆ. ಆದರೆ, ಇದರಿಂದ ಮೆಖ್ರಿ ಸರ್ಕಲ್‌ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಎಂದು ಟ್ರಯಲ್ ರನ್‌ನಲ್ಲಿ ತಿಳಿದುಬಂದಿದೆ.

700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್‌ ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.

ಮೇಖ್ರಿ ಸರ್ಕಲ್ ರಸ್ತೆಯನ್ನು ವಿಸ್ತರಿಸಲು ಬಿಬಿಎಂಪಿ ಈಗಾಗಲೇ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ಗುರುತಿಸಿದೆ. ರಸ್ತೆ ವಿಸ್ತರಣೆಯಾದರೆ, ಆರ್.ಟಿ.ನಗರ, ಜಯಮಹಲ್ ಮತ್ತು ವಸಂತ ನಗರದ ಕಡೆಗೆ ಹೋಗುವ ವಾಹನಗಳು ಮೇಖ್ರಿ ಸರ್ಕಲ್‌ನಲ್ಲಿ ಫ್ರೀ ಲೆಫ್ಟ್ ತೆಗೆದುಕೊಳ್ಳಬಹುದು. ಇದರಿಂದ ಟ್ರಾಫಿಕ್ ಕಡಿಮೆಯಾಗುತ್ತದೆ. ಏರ್‌ಪೋರ್ಟ್, ನಾಗವಾರ (ಹೊಸ ರಾಂಪ್ ಮೂಲಕ) ಮತ್ತು ಭೂಪಸಂದ್ರದಿಂದ ಬರುವ ಟ್ರಾಫಿಕ್ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಸೇರುವುದರಿಂದ ಅಲ್ಲಿಯೂ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೆಬ್ಬಾಳ ಜಂಕ್ಷನ್‌ನಲ್ಲಿ ರಾಂಪ್ ನಿರ್ಮಾಣದಿಂದ ಟ್ರಾಫಿಕ್ ಕಡಿಮೆಯಾಗಲಿದೆ. ಆದರೆ, ಮೆಖ್ರಿ ಸರ್ಕಲ್‌ನಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ. “ರಾಂಪ್ ತೆರೆಯುವುದರಿಂದ ವಾಹನಗಳು ಹೆಬ್ಬಾಳ ಜಂಕ್ಷನ್ ಅನ್ನು ಸುಲಭವಾಗಿ ದಾಟಲು ಸಹಾಯವಾಗುತ್ತದೆ. ಆದರೆ, ಟ್ರಯಲ್ ರನ್ ಸಮಯದಲ್ಲಿ, ಮೇಖ್ರಿ ಸರ್ಕಲ್ ಅಂಡರ್‌ಪಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವುದನ್ನು ನಾವು ಗಮನಿಸಿದ್ದೇವೆ. ಇದು ಇತರ ರಸ್ತೆಗಳ ಮೇಲೆ ಪರಿಣಾಮ ಬೀರೀತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!