ದಾಖಲೆ ಬರೆಯಲು ಸಿದ್ಧರಾದ್ರು ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಕರ್ನಾಟಕದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಒಬ್ಬರಾಗಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಹೊಸದೊಂದು ದಾಖಲೆ ಬರೆಯುವ ಸುವರ್ಣ ಅವಕಾಶ ಒದಗಿ ಬಂದಿದೆ. ಅದನ್ನು ಬಳಸಿಕೊಳ್ಳಲಿರುವ ಅವರು ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲಿದ್ದಾರೆ. ಅಂದಹಾಗೆ ಆ ದಾಖಲೆ ಯಾವುದು?

 

 

 

 

 

ಹೌದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಜೂನ್ ತಿಂಗಳಲ್ಲಿಯೇ ಬಾಗಿನ ಅರ್ಪಿಸಲಿದ್ದಾರೆ. ಇದಕ್ಕೆ ಕಾರಣ ಅವಧಿಪೂರ್ವ ಮುಂಗಾರು ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಭಾರಿ ಮಳೆಯಾಗುತ್ತಿರುವುದು.
ಜೂನ್ 30ರಂದು, ಅಂದರೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್​ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದಾರೆ. ಈ ಬಗ್ಗೆ ಈಗಾಗಲೇ ಕೆಆರ್​ಎಸ್ ಡ್ಯಾಂ ಆಡಳಿತ ಮತ್ತು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿವೆ.

ಜೂನ್ ತಿಂಗಳಲ್ಲೇ ಭರ್ತಿಯಾದ ಕೆಆರ್​ಎಸ್ ಡ್ಯಾಂ
ಕೆಆರ್​ಎಸ್ ಡ್ಯಾಂಸಾಮಾನ್ಯವಾಗಿ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತಾರೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದ್ದು, ಸಿದ್ದರಾಮಯ್ಯನವರಿಗೆ ಹೊಸ ಅವಕಾಶ ದೊರೆತಿದೆ.

 

 

 

 

 

 

 

ಕೆಆರ್​ಎಸ್ ಡ್ಯಾಂ ನೀರಿನ ಮಟ್ಟದ ವಿವರ
ಶನಿವಾರ ಬೆಳಗ್ಗಿನ ಮಾಹಿತಿಯ ಪ್ರಕಾರ, ಕೆಆರ್​​ಎಸ್ ಡ್ಯಾಂ 123.25 ಅಡಿ ಭರ್ತಿಯಾಗಿದೆ. ಅಂದರೆ, 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್​ಎಸ್ ಜಲಾಶಯ ಪೂರ್ಣ ಭರ್ತಿಯಾಗಲು ಇನ್ನು ಒಂದು ಅಡಿ ಅಷ್ಟೇ ಬಾಕಿ ಇದೆ. ಅದು ಇಂದೇ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಲಿದೆ. ಇದರೊಂದಿಗೆ, 93 ವರ್ಷಗಳ ಬಳಿಕ ಇದೇ ಮೊದಲ ಬಾರಿ ಜೂನ್​ ತಿಂಗಳಲ್ಲೇ ಕೆಆರ್​ಎಸ್ ಡ್ಯಾಂ ಭರ್ತಿಯಾದಂತಾಗಲಿದೆ.

ಕೆಆರ್​ಎಸ್​ಗೆ ಮುಖ್ಯಮಂತ್ರಿಯಿಂದ ಬಾಗಿನ ಅರ್ಪಣೆ ಶುರುವಾಗಿದ್ದು ಯಾವಾಗ?
1979 ರಿಂದ ಕೆಆರ್​ಎಸ್ ಡ್ಯಾಂನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಪದ್ದತಿ ಆರಂಭವಾಗಿತ್ತು. ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸ್ ಅವರು ಬಾಗಿನ ಅರ್ಪಿಸುವ ಮೂಲಕ ಆ ಪದ್ದಗೆ ನಾಂದಿ ಹಾಡಿದ್ದರು. ಆದರೆ, ಅಂದಿನಿಂದ ಇಂದಿನವರೆಗೂ ಯಾವೊಬ್ಬ ಮುಖ್ಯಮಂತ್ರಿಗೂ ಜೂನ್ ತಿಂಗಳಲ್ಲೇ ಬಾಗಿನ ಅರ್ಪಿಸುವ ಅವಕಾಶ ಒದಗಿ ಬಂದಿಲ್ಲ.

ಇದೀಗ ಸೋಮವಾರ ಸಿಎಂ ಸಿದ್ದರಾಮಯ್ಯ ಕೆಆರ್​​ಎಸ್​ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಡ್ಯಾಂ ಅವಧಿಗೂ ಮುನ್ನವೇ ತುಂಬುತ್ತಿರುವುದು ರೈತರ ಮುಖದಲ್ಲೂ ಮಂದಹಾಸ ಮೂಡಿಸಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!