ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!