‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು

‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಈ ಹೇಳಿಕೆಯು ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ದಿನಕ್ಕೊಂದು ಸ್ವರೂಪ, ತಂತ್ರಗಾರಿಕೆ, ಕ್ಷಣಕ್ಕೊಂದು ತಿರುವು ಪಡೆಯುತ್ತಲೇ ಇದೆ. ಹಳ್ಳಿಯಿಂದ ಹಿಡಿದು ದೆಹಲಿಯ ತನಕ ಪಟ್ಟದ ರಾಜಕಾರಣ ಜೋರಾಗಿ ನಡೆಯುತ್ತಿದೆ. ಕಳೆದ ಹತ್ತು ದಿನಗಳಿಂದ ಮಂಡಿ ನೋವಿನಿಂದ ಓಡಾಡಲು ಅಸಾಧ್ಯವಾದರೂ ಕುಳಿತಲ್ಲೇ ಇರುವಂತಾಗಿದ್ದರೂ ಸಿಎಂ ಸಿದ್ದರಾಮಯ್ಯ ಉರುಳಿಸುತ್ತಿರುವ ದಾಳ ಅಸಾಧ್ಯವಾದ್ದು. ಸಿಎಂ ಸಿದ್ದರಾಮಯ್ಯ ಇದೀಗ ಮನಸ್ಸಿನ ಮಾತೊಂದನ್ನು ಬಿಚ್ಚಿಟ್ಟಿದ್ದು ಕಾಂಗ್ರೆಸ್​ನ ಆಂತರಿಕ ರಾಜಕಾರಣ ಅಷ್ಟು ಸುಲಭ ಇಲ್ಲ ಎಂಬುದನ್ನು ಬಿಂಬಿಸಿದೆ.

 

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ, ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಎಂಬ ದಾಖಲೆಯ ಖ್ಯಾತಿ ತಮಗೇ ಸಿಗಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಸುದೀರ್ಘ ಅವಧಿಗೆ ಸಿಎಂ ಆಗಿ ಸ್ಥಾನ ಅಲಂಕರಿಸಿದ್ದರು. ಬರೋಬ್ಬರಿ ಏಳು ವರ್ಷ ಏಳು ತಿಂಗಳ ಕಾಲ ದೇವರಾಜ ಅರಸು ಸಿಎಂ ಆಗಿ ಅಧಿಕಾರ ನಡೆಸಿದ್ದರು. ದೇವರಾಜ ಅರಸು ಬಳಿಕ ಐದು ವರ್ಷ ಪೂರ್ಣಾವಧಿ ಮುಗಿಸಿದ ಸಿಎಂ ಅಂದರೆ ಅದು ಸಿದ್ದರಾಮಯ್ಯ. ಇದೀಗ ದೇವರಾಜ ಅರಸು ಅವರ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆಯನ್ನು ಮುರಿಯುವುದಕ್ಕೆ ಸಿದ್ದರಾಮಯ್ಯ ಇನ್ನೂ ಕೆಲವು ತಿಂಗಳು ಅಧಿಕಾರದಲ್ಲಿ ಮುಂದುವರಿಯಲೇಬೇಕಿದೆ. ಡಿಸಂಬರ್ ವರೆಗೆ ಸಿದ್ದರಾಮಯ್ಯ ಅನಾಯಾಸವಾಗಿ ಅಧಿಕಾರದಲ್ಲಿ ಮುಂದುವರಿದರೆ ದೇವರಾಜ ಅರಸು ದಾಖಲೆ ಮುರಿದು ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿ ಸಿದ್ದರಾಮಯ್ಯಗೆ ಸಿಗಲಿದೆ. ಇದರ ಬಗ್ಗೆ ತನಗೆ ನಂಬಿಕೆ ಇದೆ ಎಂದಿರುವ ಸಿದ್ದರಾಮಯ್ಯ ಮಾತು ಹೊಸ ಕಿಚ್ಚು ಹಚ್ಚಿಸಿದೆ.

ಸಿದ್ದರಾಮಯ್ಯ ಹೀಗೆ ದಾಖಲೆಯ ಅವಧಿಯ ಬಗ್ಗೆ ಪ್ತಸ್ತಾಪ ಮಾಡುತ್ತಿದ್ದಂತೆಯೇ ಸಿದ್ದರಾಮಯ್ಯ ಆಪ್ತ ಸಚಿವರು ಹಿತೈಷಿಗಳು ಜೈ ಎಂದಿದ್ದಾರೆ.

 

ಸಿದ್ದರಾಮಯ್ಯ ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಡಿಕೆಶಿವಕುಮಾರ್ ಗೆ ಬಿಟ್ಟು ಕೊಡುತ್ತಾರೆ ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್​ನ ಆಂತರಿಕ ವಲಯದಲ್ಲಿ ಚರ್ಚೆಯಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಅಲ್ಲಗಳೆದಿರುವ ಡಾ. ಜಿ ಪರಮೇಶ್ವರ್, ಅಂತಹ ಯಾವುದೇ ಸೂತ್ರದ ಬಗ್ಗೆ ತಮಗೆ ಗೊತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಪೂರ್ಣ ಅವಧಿಗೆ ಸಿಎಂ ಆಗಿರಲಿ ಎಂದಿದ್ದಾರೆ‌. ಎಂಬಿ ಪಾಟೀಲ್, ಎಚ್​ಸಿ ಮಹದೇವಪ್ಪ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.

  • Related Posts

    ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

      ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

    ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

    ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!