ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಿ ಎಂದ ಸ್ನೇಹಮಯಿ ಕೃಷ್ಣ.

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಒತ್ತಾಯಿಸಿದರು.

ಬೆಂಗಳೂರು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆ ಮುಂದುವರೆಸಿ ಅಂತಿಮ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ. ಹಾಗೆಯೇ ಅಂತಿಮ ವರದಿ ಸಲ್ಲಿಸಿದ ನಂತರ ಬಿ ರಿಪೋರ್ಟ್ ಬಗ್ಗೆ ತೀರ್ಪು ನೀಡುವುದಾಗಿ ತಿಳಿಸಿ ವಿಚಾರಣೆಯನ್ನ ಮೇ 7ಕ್ಕೆ ಮುಂದೂಡಿಕೆ ಮಾಡಿತು.

ಈ ಕುರಿತು ಮಾತನಾಡಿದ ಸ್ನೇಹಮಯಿ ಕೃಷ್ಣ, ತನಿಖಾಧಿಕಾರಿಗಳಿಗೆ ತನಿಖೆಯ ಬಗ್ಗೆಯೇ ತಿಳಿದಿಲ್ಲ. ಸಿಎಂ ಕುಟುಂಬ ರಕ್ಷಿಸಲು ತನಿಖೆ ಪೂರ್ಣಗೊಳಿಸದೆ ವರದಿ ಸಲ್ಲಿಸಿದ್ದರು. ಹೀಗಾಗಿ ಅಂತಿಮ ವರದಿ ಸಲ್ಲಿಕೆ ಮಾಡಲು ಕೋರ್ಟ್ ಸೂಚನೆ ನೀಡಿದೆ. ಇಂದು ಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ, ಅಧಿಕಾರ ದುರುಪಯೋಗಪಡಿಸಿಕೊಂಡು ಕೇಸ್ ಮುಚ್ಚಿ ಹಾಕಲು ಯತ್ನಿಸಿದರೇ ಆ ಪ್ರಯತ್ನಕ್ಕೆ ನಾನು ಅವಕಾಶ ಮಾಡಿ ಕೊಡುವುದಿಲ್ಲ. ನನ್ನ ಬಳಿ ಇರುವ ದಾಖಲೆ ಇಟ್ಟಿಕೊಂಡು ಸಿಎಂಗೆ ಶಿಕ್ಷೆ ಕೊಡಿಸುತ್ತೇವೆ ಸಿಎಂ ಮೊದಲು ರಾಜೀನಾಮೆ ಕೊಟ್ಟ ತನಿಖೆಗೆ ಸಹಕರಿಸಲಿ. ನನ್ನ ಹೋರಾಟ ಮುಂದುವರೆಸುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು