ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ!

ಮಂಡ್ಯ: ಇಂದು ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯ ಶೃಂಗಾರಗೊಂಡಿದೆ. ಕನ್ನಂಬಾಡಿ ಕಟ್ಟೆ ಹಸಿರು ತಳಿರು-ತೋರಣ ಹೂಗಳಿಂದ ಹಾಗೂ ಕನ್ನಡ ಬಾವುಟಗಳಿಂದ ಕಂಗೊಳಿಸುತ್ತಿದ್ದು ನೋಡುಗರನ್ನು ಸೆಳೆಯುವಂತ್ತಿದೆ.

ಕೆಆರ್ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಐತಿಹಾಸಕ ದಾಖಲೆ ಬರೆದಿದೆ. ಡ್ಯಾಂ ನಿರ್ಮಾಣ ಆದಾಗಿನಿಂದ ಜೂನ್ ತಿಂಗಳಲ್ಲಿ ಇದುವರೆಗೂ ತುಂಬಿರಲಿಲ್ಲ. ಆದರೆ 93 ವರ್ಷಗಳ ನಂತರ ಮೊಟ್ಟ ಮೊದಲ ಬಾರಿಗೆ ಈಗ ಕೆಆರ್ಎಸ್ ಭರ್ತಿಯಾಗಿದೆ. 124.80 ಅಡಿಗಳ ಗರಿಷ್ಠ ಮಟ್ಟ ಸಂಪೂರ್ಣ ಭರ್ತಿ ಆಗಿದ್ದು ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ.

ಈ ಹಿನ್ನೆಲೆಯಲ್ಲಿ ಇಂದು 11.30ಕ್ಕೆ ಅಭಿಜಿತ್ ಶುಭ ಮುಹೂರ್ತದಲ್ಲಿ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಣೆ ಮಾಡಲಿದ್ದಾರೆ. ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಲಿದೆ. ಸಿದ್ದರಾಮಯ್ಯಗೆ ನಾಲ್ಕನೇ ಬಾರಿಗೆ ಬಾಗಿನ ಅರ್ಪಿಸುವ ಸೌಭಾಗ್ಯ ದೊರಕಿದೆ. ಇದಾದ ಬಳಿಕ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.

ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಸಾಂದರ್ಭಿಕ ಚಿತ್ರ
ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಜೂನ್ನಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸುತ್ತಿರುವ ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಆಗಲಿದ್ದಾರೆ. 1979 ರಂದು ಡಿ ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಕಾರ್ಯಕ್ರಮ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಜೂನ್ನಲ್ಲಿ ಯಾರು ಬಾಗಿನ ಸಲ್ಲಿಸಿರಲಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ನೂತನ ದಾಖಲೆ ಬರೆಯಲಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!