ಕಳ್ಳನ ಜೊತೆಗೆ ರೂಮ್ ಶೇರ್ ಮಾಡಿದ್ದ ಪೇದೆ ಸಸ್ಪೆಂಡ್ .

– ಪೊಲೀಸ್‌ ಸಮವಸ್ತ್ರ ಧರಿಸಿದ ಕಳ್ಳ

ಬೆಂಗಳೂರು: ಕೈತುಂಬಾ ಸಂಬಳ ಇದ್ರೂ, ಕಳ್ಳನ ಜೊತೆ ರೂಮ್ ಶೇರ್ ಮಾಡಿ ಕರ್ತವ್ಯ ಲೋಪವೆಸಗಿದ್ದ ಪೊಲೀಸ್ ಪೇದೆಯನ್ನು ಕೆಲಸದಿಂದ ಅಮಾನತು ಮಾಡಿದ ಘಟನೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್‌ ಹೆಚ್.ಆರ್ ಸೋನಾರ್, ಕುಖ್ಯಾತ ಸಲೀಂ ಅಲಿಯಾಸ್ ಬಾಂಬೆ ಸಲೀಂ ಜೊತೆ ರೂಂ ಶೇರ್ ಮಾಡಿದ್ದ. ಖದೀಮ ಬಾಂಬೆ ಸಲೀಂನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ ಪೇದೆಯ ಕಳ್ಳಾಟ ಬಯಲಾಗಿದೆ.

ಸಲೀಂ ಮೊಬೈಲ್‌ನಲ್ಲಿ ಸೋನಾರ್‌ನ ಪೊಲೀಸ್ ಯೂನಿಫಾರ್ಮ್ ಧರಿಸಿದ್ದ ಫೋಟೊಗಳು ಪತ್ತೆಯಾಗಿವೆ. ಪೊಲೀಸ್ ಯೂನಿಫಾರ್ಮ್ ಹಾಕೊಂಡು ಪತ್ನಿಗೆ ಖದೀಮ ಸಲೀಂ ವಿಡಿಯೋ ಕಾಲ್ ಮಾಡಿರುವುದು ಬೆಳಕಿಗೆ ಬಂದಿದೆ.

ವಿಚಾರಣೆಯ ವೇಳೆ ಖದೀಮ ಸಲೀಂ, ಪೊಲೀಸ್ ಕಾನ್ಸ್ಟೇಬಲ್‌ ಸೋನಾರ್‌ನ ಮನೆಯಲ್ಲಿ ವಾಸವಿದ್ದ ವಿಚಾರ ಬಯಲಾಗಿದೆ. ಕಳ್ಳನ ಜೊತೆ ರೂಂ ಶೇರ್ ಮಾಡಿ ಕರ್ತವ್ಯ ಲೋಪವೆಸಗಿದ ಪೊಲೀಸ್ ಕಾನ್ಸ್ಟೇಬಲ್‌ ಸೋನಾರ್‌ನನ್ನು ಪೂರ್ವ ವಿಭಾಗ ಡಿಸಿಪಿ ದೇವರಾಜ್ ಕೆಲಸದಿಂದ ಅಮಾನತು ಮಾಡಿದ್ದಾರೆ.

ಇದೀಗ ಪೊಲೀಸರು ಸಲೀಂನ ಜೊತೆ ಪೊಲೀಸ್ ಪೇದೆ ಬರೀ ಸ್ನೇಹ ಮಾತ್ರ ಇಟ್ಟುಕೊಂಡಿದ್ನಾ ಅಥವಾ ಬೇರೆ ಲಿಂಕ್ ಇದ್ಯಾ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!