
ಎಂಸಿಡಿಸಿಸಿ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಅಕ್ರಮ ನಡೆದಿದೆ. ಇದನ್ನ ಸ್ವತಃ ಸಚಿವ ರಾಜಣ್ಣ ಒಪ್ಪಿಕೊಂಡಿದ್ದಾರೆ. ಎಲ್ಲೆಲ್ಲಿ ಮತ ಸೇರಿಸಿದ್ದಾರೆ ಆ ಕ್ಷೇತ್ರಗಳಿಗೆ ಮರು ಚುನಾವಣೆ ಮಾಡಿ ಎಂದು ನ್ಯಾಯಾಲಯದಲ್ಲಿ ಕೇಳುತ್ತೇವೆ. ಸಹಕಾರ ಸಚಿವ ರಾಜಣ್ಣಗೆ ಯಾವ ನೈತಿಕತೆಯೂ ಉಳಿದಿಲ್ಲ. ನಾನು ಅವರ ರಾಜೀನಾಮೆ ಕೇಳುವುದಿಲ್ಲ, ಅದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ ಎಂದು ಕಿಡಿಕಾರಿದರು.

ರಾಜಣ್ಣ ಹೇಳಿಕೆಯನ್ನು ಕೋರ್ಟ್ಗೆ ಸಲ್ಲಿಸುತ್ತೇವೆ. ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟವಾಗಿ ಅಕ್ರಮ ನಡೆಸಿದೆ. ಸಹಕಾರ ಕ್ಷೇತ್ರವನ್ನೇ ಹಾಳು ಮಾಡಲು ರಾಜಣ್ಣ ಹೆಜ್ಜೆ ಇಟ್ಟಿದ್ದಾರೆ ಚುನಾವಣಾ ಅಕ್ರಮವನ್ನು ಹೇಗೆ ಮಾಡಬಹದು ಎಂಬುದನ್ನು ರಾಜಣ್ಣ ಹೇಳಿ ಕೊಟ್ಟಿದ್ದಾರೆ. ಈ ಬಗ್ಗೆ ನಾನು ಸದನದಲ್ಲೂ ಚರ್ಚೆ ಮಾಡುತ್ತೇನೆ, ಮತಗಳನ್ನು ಸರ್ಕಾರ ಸೇರಿಸದಿದ್ದರೆ ಇಬ್ಬರು ಶಾಸಕರು ಹಾಗೂ ಮಾಜಿ ಶಾಸಕ ಸೋತು ಹೋಗುತ್ತಿದ್ದರು. ಅವರೆಲ್ಲಾ ಗೆದ್ದಿರುವುದು ಒಂದೊಂದು ಮತಗಳಿಂದ. ಇದು ಅಕ್ರಮವಾಗಿ ಬಂದಿರುವ ಮತಗಳು ಎಂದು ಕಿಡಿಕಾರಿದರು.
ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಠಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು :

ಹೆಚ್.ಡಿ. ದೇವೇಗೌಡರಿಗಾಗಲಿ, ಕುಮಾರಸ್ವಾಮಿಯವರಿಗಾಗಲಿ, ನಿಖಿಲ್ ಅವರಿಗಾಗಲಿ ಈ ಆಸೆ, ಉದ್ದೇಶ ಇಲ್ಲ. ಆದರೆ ಜೆಡಿಎಸ್ ನ ಶಾಸಕರಿಗೆ, ಕಾರ್ಯಕರ್ತರಿಗೆ ನಿಖಿಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಉದ್ದೇಶವಿದೆ. ನಿಖಿಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು. ದೇವೇಗೌಡರ ನಂತರ ಕುಮಾರಸ್ವಾಮಿ ಹೇಗೆ ಪಕ್ಷ ಕಟ್ಟಿ ಮುಂದುವರೆಸಿದರೋ, ಅದೇ ರೀತಿ ನಿಖಿಲ್ ಕೂಡ ಮುಂದುವರೆಸುತ್ತಾರೆ. ನಿಖಿಲ್ ಅವರಿಗೆ ಆ ಶಕ್ತಿ ಇದೆ. ಆಗಸ್ಟ್ ನಲ್ಲಿ ಮೈಸೂರು ಜಿಲ್ಲೆಯಲ್ಲಿ ನಿಖಿಲ್ ಪ್ರವಾಸ ಮಾಡಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.





