ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ; ಗುಂಡೂರಾವ್ ಮಾಹಿತಿ.

ಬೆಂಗಳೂರು : ಹಾಸನ ಜಿಲ್ಲೆಯೂ ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ತಜ್ಞರ ಜತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ಎಂದು ಹೇಳಿದರು. ಮುಂದುವರೆದು, ವರದಿಯಲ್ಲಿ ಕರೋನಾದಿಂದ ಗುಣಮುಖರಾದವರಿಗೆ ಹೃದಯಾಘಾತವಾಗಿದೆ ಅಂತ ಇದೆ ಎಂದು ಹೇಳಿದರು.

ಕರೋನಾ ರೋಗದಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ. ಕರೋನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ, ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ. ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ. ಕರೋನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್ಎನ್ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಈ ವ್ಯಾಕ್ಸಿನ್ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ ಎಂದು ತಿಳಸಿದ್ದಾರೆ.

ಹೃದಯಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ. ಹೃದಯಾಘಾತದ ಬಗ್ಗೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಶಿಕ್ಷಣ ಇಲಾಖೆ ಮುಂದಿನ ವರ್ಷದಿಂದ ಪಠ್ಯ ಅಳವಡಿಕೆ ಮಾಡುತ್ತೆ ಎಂದು ಹೇಳಿದರು. ತಾಲೂಕು ಆಸ್ಪತ್ರೆಗಳಿಗೂ ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುತ್ತದೆ. ಸರ್ಕಾರಿ ನೌಕರರು, ಗುತ್ತಿಗೆ ನೌಕರರು ತಪಾಸಣೆ ಮಾಡಿಸಿಕೊಳ್ಳಬೇಕು. ಜನರ ಜೀವನಶೈಲಿ ಹೃದಯಘಾತಕ್ಕೆ ಕಾರಣವಾಗಿದೆ. ಶೇ 50 ಕ್ಕಿಂತ ಹೆಚ್ಚು ಧೂಮಪಾನಿಗಳಿಗೆ ಹೃದಯಘಾತವಾಗಿದೆ ಎಂದು ತಿಳಿಸಿದರು.

ಕರೋನಾಗಿಂತ ಮುಂಚೆ ಮತ್ತು ಕರೋನಾ ನಂತರ ಸಾಕಷ್ಟು ಬದಾಲಾವಣೆಯಾಗಿದೆ. ಒಬೆಸಿಟಿ, ಡಯಾಬಿಟಿಸ್ ಎಲ್ಲವೂ ಹೆಚ್ಚಾಗಿ ಕಂಡುಬಂದಿದೆ. ಈ ಕಾರಣದಿಂದ ಕರೋನಾ ರೋಗದ ಪರಿಣಾಮ ಸಾರ್ವಜನಿಕರ ಮೇಲೆ ಆಗಿದೆ. ಕರೋನಾ ಬಂದಾಗ ತೆಗೆದುಕೊಂಡ ಬೇರೆ ಬೇರೆ ಮೆಡಿಸನ್ನಿಂದ ಹೃದಯದ ಮೇಲೆ ಪರಿಣಾಮ ಬೀರಿದೆ. ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ವರದಿ ಕೈಸೇರಲಿದೆ ಎಂದರು. ಸರ್ಕಾರಿ, ಗುತ್ತಿಗೆ ನೌಕರರು ಮತ್ತು ಖಾಸಗಿ ಉದ್ಯೋಗಿಗಳು ವರ್ಷಕ್ಕೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ನಾವು ಸೂಚನೆ ನೀಡುತ್ತಿದ್ದೇವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮತಷ್ಟು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಭರವಸೆ ನೀಡಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು