ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್

ನಟ ದರ್ಶನ್​​ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್​ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್​ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್​ಗೆ ಬಿಗ್ ರಿಲೀಫ್ ದೊರೆತಂತಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ (Darshan) ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೊಲೆ ಆರೋಪಿ ದರ್ಶನ್​ಗೆ ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ಕೊಟ್ಟಿದೆ.
ದರ್ಶನ್ ಮನವಿಗೆ ಸ್ಪಂದಿಸಿದ ಕೋರ್ಟ್ ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ದರ್ಶನ್ ಮಾಡಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿದೆ. ದರ್ಶನ್​ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಲು ಅನುಮತಿ ನೀಡಿದೆ. ಆದರೆ, ಜೈಲಿನ ಕೈಪಿಡಿ ಅನುಸರಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ. ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.

ವಿಷ ಕೊಡಿ ಎಂದಿದ್ದ ದರ್ಶನ್: ತೀರ್ಪಿಗೂ ಮುನ್ನ ವಿಚಾರಣೆ ವೇಳೆ ಜಡ್ಜ್ ಬಳಿ ಮನವಿ ಮಾಡಿದ್ದ ದರ್ಶನ್, ‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ, ನನಗೆ ಮಾತ್ರ ವಿಷ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ಮನವಿ ಮಾಡಿದ್ದರು. ಆಗ ಜಡ್ಜ್ ‘ನೀವು ಹಾಗೆಲ್ಲಾ ಹೇಳುವಂತಿಲ್ಲ’ ಎಂದಿದ್ದರು.

ವಿಷ ಕೊಡಿ ಎಂದಿದ್ದೇಕೆ ದರ್ಶನ್? ಸುಪ್ರೀಂ ಕೋರ್ಟ್​ ಖಡಕ್ ಸೂಚನೆಯ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲಿನಂತೆ ವಿಐಪಿ ಸೌಲಭ್ಯ ಸಿಗುತ್ತಿರಲಿಲ್ಲ. ರಾಜಾತಿಥ್ಯ ಸಿಗುತ್ತಿರಲಿಲ್ಲ. ಜೈಲಿನಲ್ಲಿ ಓರ್ವ ಸಾಮಾನ್ಯ ಖೈದಿಯಂತೆ ಪರಿಗಣಿಸಲಾಗುತ್ತಿತ್ತು. ಜೈಲಿನ ಖೈದಿಗಳ ಕೊಠಡಿಯಿಂದಲೂ ಹೊರಗೆ ಬರಲಾಗುತ್ತಿರಲಿಲ್ಲ. ಇದರಿಂದ ನರಕಯಾತನೆ ಅನುಭವಿಸುತ್ತಿರುವ ದರ್ಶನ್ ವಿಷ ಕೊಡಿ ಎಂದು ಮನವಿ ಮಾಡಿದ್ದರು. ಇದೀಗ ಕೋರ್ಟ್ ಸಹ ದರ್ಶನ್ ಬಗ್ಗೆ ತುಸು ಕನಿಕರ ತೋರಿದ್ದು, ಹಾಸಿಗೆ ದಿಂಬು ಹಾಗೂ ಜೈಲಿನಲ್ಲಿ ಓಡಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್​ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!