ಯೋಗೇಶ್‌ ಗೌಡ ಹ*ತ್ಯೆ ಪ್ರಕರಣದಲ್ಲಿ ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ !

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ ಗೌಡರ ಕೊಲೆ ಪ್ರಕರಣದ ಆರೋಪಿ ಆದ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಅಪರಾಧಿ ಎಂದು ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಘೋಷಿಸಿದ್ದು . ಶಿಕ್ಷೆಯ ಪ್ರಮಾಣವನ್ನು ಕೋರ್ಟ್‌ ನಾಳೆ ಪ್ರಕಟಿಸಲಿದೆ.

ಯೋಗೇಶ್‌ಗೌಡ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಪಟ್ಟ ಏರಲು ವಿನಯ್ ಕುಲಕರ್ಣಿ ಕಾರಣವಾಗಿದ್ದರು. ಒಪ್ಪಂದದಂತೆ ಒಂದು ವರ್ಷದ ಬಳಿಕ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕಿತ್ತು. ಅದರೆ ಅಧಿಕಾರ ಹಸ್ತಾಂತರ ಮಾಡದ್ದು ವಿನಯ್‌ ಕುಲಕರ್ಣಿ ಸಿಟ್ಟಿಗೆ ಕಾರಣವಾಗಿತ್ತು.

ಹೆಬ್ಬಳ್ಳಿ ಜಿಲ್ಲಾ ಪಂಚಾಯತ್‌ ಸ್ಥಾನಕ್ಕೆ ಯೋಗೇಶ್ ಗೌಡ ನಿಂತಾಗ ಎಲೆಕ್ಷನ್ ನಡೆಯಬೇಕಿದ್ದ ದಿನವೇ ಅವರನ್ನು ಬಂಧಿಸಲಾಗಿತ್ತು. ಪಿಎಸ್‌ಐ ಮೇಲೆ ಹಲ್ಲೆ ಎಸಗಿದ ಆರೋಪದ ಅಡಿ ಅವರನ್ನು ಬಂಧಿಸಲಾಗಿತ್ತು. ಹೀಗಿದ್ದರೂ ಜೈಲಿನಲ್ಲಿದ್ದಾಗಲೇ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರು. ಇದು ರಾಜಕೀಯ ದ್ವೇಷಕ್ಕೆ ಕಾರಣವಾಗಿತ್ತು.

ಚುನಾವಣೆಯಲ್ಲಿ ಗೆದ್ದು ಬಂದ ನಂತರ 2016ರ ಏಪ್ರಿಲ್‌ನಲ್ಲಿ ಜಿಲ್ಲಾ ಪಂಚಾಯತ್‌ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ ಕುಲಕರ್ಣಿ ಅವರ ಜೊತೆ ಮಾತಿನ ಚಕಮಕಿ ಕೂಡಾ ನಡೆದಿತ್ತು. ಇದು ವಿನಯ್ ಕುಲಕರ್ಣಿ ಅವರನ್ನು ಕೆರಳಿಸಿದ್ದರಿಂದ ಇವರ ನಡುವೆ ಮತ್ತಷ್ಟು ವೈಮನಸ್ಸಿಗೆ ಕಾರಣ ಆಗಿತ್ತು.

ಏಪ್ರಿಲ್ ಕಳೆದ ಬಳಿಕ ಜೂನ್‌ 15 ರಂದು ಯೋಗೇಶ್‌ ಗೌಡ ಧಾರವಾಡದ ಸಪ್ತಾಪೂರದ ಉದಯ್ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ರಾಜಕೀಯ ದ್ವೇಷದಿಂದಲೇ ಕೊಲೆ ನಡೆದಿದೆ ಎಂದು ಬಿಜೆಪಿ ಆರೋಪಗಳ ಸುರಿಮಳೆಗೈದಿತ್ತು. ಪೊಲೀಸರು ಕೂಡ ಎಫ್‌ಐಆರ್‌ನಲ್ಲಿ ಜಮೀನು ವಿವಾದದಿಂದಲೇ ಕೊಲೆ ನಡೆದಿದೆ ಎಂದು ದಾಖಲಿಸಿದ್ದರು.

2019ರಲ್ಲಿ ಬಿಎಸ್‌ವೈ ಸರ್ಕಾರ ರಚನೆಯಾದ ನಂತರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿದ  ಸಿಬಿಐ ವಿನಯ್ ಕುಲಕರ್ಣಿ ಅವರನ್ನು 15ನೇ ಆರೋಪಿಯನ್ನಾಗಿ ಮಾಡಿತ್ತು.

ಕೊಲೆಯ ಸಾಕ್ಷಿ ನಾಶ ಮಾಡಲು ವಿನಯ ಕುಲಕರ್ಣಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು ಎಂದು ಸಿಬಿಐ ತನಿಖೆಯಲ್ಲಿ ಹೇಳಿತ್ತು. ಈ ಕಾರಣಕ್ಕೆ ವಿನಯ್‌ ಕುಲಕರ್ಣಿ ಅವರನ್ನು 2020ರಲ್ಲಿ ಸಿಬಿಐ ಬಂಧನ ಮಾಡಿತ್ತು. ಅಲ್ಲದೇ ಪೊಲೀಸ್ ಎಫ್‌ಐಆರ್‌ನಲ್ಲಿ ಇರುವ ಆರೋಪಿಗಳು ಕೊಲೆ ಮಾಡಿಲ್ಲ ಎನ್ನುವ ವಿಚಾರವನ್ನು ಜಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿತ್ತು.

ಇದೀಗ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ಎಂದು ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!