CSK ಮುಂದೆ RCB ಸಾಮಾನ್ಯ ತಂಡ ಎಂದು ಹೇಳಿ ಪಜೀತಿಗೆ ಸಿಲುಕಿಕೊಂಡ ಅಂಬಾಟಿ ರಾಯುಡು….

ಹೌದು ವೀಕ್ಷಕರೇ, ಸಿ ಎಸ್ ಕೆ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು, ಸಿಎಸ್‌ಕೆ ತಂಡವನ್ನು ಉತ್ತುಂಗಕ್ಕೇರಿಸುವ ಭರದಲ್ಲಿ ಆರ್‌ಸಿಬಿ ತಂಡವನ್ನು ಸಾಮಾನ್ಯ ಎಂದು ಹೇಳಿದ್ದಕ್ಕೆ, ಆರ್‌ಸಿಬಿ ಅಭಿಮಾನಿಗಳು.ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಂದಹಾಗೆ ಈ ರೀತಿಯಾಗಿ ಪಜಿತಿಗೆ ಸಿಲುಕಿರುವುದು ಹಾಗೂ ಆರ್‌ಸಿಬಿ ವಿರುದ್ಧ ಬೇಡದ ಹೇಳಿಕೆ ನೀಡುತ್ತಿರುವುದು ಇದು ಮೊದಲೆನಲ್ಲ.ಅಂದಹಾಗೆ, ಈ ಬಜೀತಿಗೆ ಕಾರಣವೇನೆಂದರೆ, 2025ರ ಐಪಿಎಲ್ ಸೀಸನ್ 18ರ 52ನೇ ಪಂದ್ಯಾವಳಿಯು ಆರ್‌ಸಿಬಿ ಹಾಗೂ ಸಿಎಸ್ಕೆ ತಂಡಗಳ ನಡುವೆ ನಡೆಯುತ್ತಿದ್ದು,ಈ ಪಂದ್ಯಕ್ಕೂ ಮುನ್ನ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ನೀಡಿದ ಹೇಳಿಕೆಯೇ ಇದಕ್ಕೆಲ್ಲ ಕಾರಣವಾಗಿದೆ.

ಚಾನೆಲ್ ಚರ್ಚೆಯೊಂದರಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಆರ್ಸಿಬಿ ಮತ್ತು ಸಿಎಸ್ಕೆ ನಡುವೆ ಯಾವುದೇ ಪೈಪೋಟಿಯಿಲ್ಲ. ಉಭಯ ತಂಡಗಳಿಂದ ಜಿದ್ದಾಜಿದ್ದಿನ ಕದನ ನಿರೀಕ್ಷೆಯನ್ನು ಸಹ ಮಾಡುವಂತಿಲ್ಲ. ಇಲ್ಲಿ ಆರ್ಸಿಬಿ ತಂಡವನ್ನು ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿಯಾಗಿ ಬಿಂಬಿಸಲಾಗಿದೆ. ಆದರೆ ಅಂತಹದ್ದೇನು ಇಲ್ಲ. ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿಯೇ ಇಲ್ಲ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಲವು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬಗ್ಗು ಬಡಿದಿದೆ. ಅಲ್ಲದೆ ಆರ್ಸಿಬಿ ವಿರುದ್ಧ ಸಿಎಸ್ಕೆ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಆರ್ಸಿಬಿ, ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿ ಎಂದು ನಾನಂತು ಭಾವಿಸುವುದಿಲ್ಲ.ನೀವು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದರಲ್ಲಿ ಅರ್ಥವಿದೆ. ಏಕೆಂದರೆ ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿ ಇದೆ. ಆದರೆ ಸಿಎಸ್ಕೆ ಮುಂದೆ ಆರ್ಸಿಬಿ ಸಾಮಾನ್ಯ ತಂಡ. ಹೀಗಾಗಿ ಉಭಯ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದು ಸರಿಯಲ್ಲ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಅಂದಹಾಗೆ ಅಂಬಾಟಿ ರಾಯುಡು ಆರ್ಸಿಬಿ ತಂಡವನ್ನು ಹೀಯಾಳಿಸಿ ಮಾತನಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ಆರ್ಸಿಬಿ ಹಾಗೂ ಅಭಿಮಾನಿಗಳನ್ನು ಗುರಿಯಾಗಿಸಿ ಹೇಳಿಕೆಗಳನ್ನು ನೀಡಿದ್ದರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಆರ್ಸಿಬಿ ಪ್ಲೇಆಫ್ ಹಂತಕ್ಕೇರುವ ಸನಿಹದಲ್ಲಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್ಸಿಬಿ ಪ್ಲೇಆಫ್ಗೇರಲಿದೆಯಾ ಕಾದು ನೋಡಬೇಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!