ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!

ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ ಚಿನ್ನ ಖರೀದಿದಾರರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆಯೇ ಬೆಂಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಗ್ರಾಹಕರು, ವಿಶೇಷವಾಗಿ ಮಹಿಳೆಯರು ಚಿನ್ನ ಖರೀದಿಗೆ ಮುಗಿಬೀಳುತ್ತಿದ್ದಾರೆ.

ಬೆಲೆ ಇಳಿಕೆಯಾಗಿದ್ದಕ್ಕೆ ಹಲವು ಮಹಿಳಾ ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ, ಮಧ್ಯಮ ವರ್ಗದ ಜನರಿಗೆ ಇದು ಚಿನ್ನ ಖರೀದಿಸುವ ಉತ್ತಮ ಅವಕಾಶವೆಂದು ಅಭಿಪ್ರಾಯಪಟ್ಟಿದ್ದಾರೆ. ಈ ಬೆಲೆ ಕುಸಿತಕ್ಕೆ ಜಾಗತಿಕ ಆರ್ಥಿಕ ಕಾರಣಗಳಿವೆ ಎಂದು ಅರ್ಥಶಾಸ್ತ್ರಜ್ಞ ಡಾ. ಎಸ್.ಆರ್. ಕೇಶವ್ ವಿಶ್ಲೇಷಿಸಿದ್ದಾರೆ. ಯುಎಸ್ ಡಾಲರ್ ಬಲವರ್ಧನೆ, ಅಮೆರಿಕಾದ ಫೆಡರಲ್ ರಿಸರ್ವ್ ಬಡ್ಡಿ ದರಗಳನ್ನು ಕಡಿಮೆ ಮಾಡದಿರುವ ನಿರ್ಧಾರ ಮತ್ತು ಗೋಲ್ಡ್ ಪೇಪರ್‌ಗಳಲ್ಲಿ ಹೂಡಿಕೆ ಮಾಡಿದವರು ಲಾಭ ಗಳಿಸಿ ವಿಥ್ ಡ್ರಾ ಮಾಡುತ್ತಿರುವುದು ಪ್ರಮುಖ ಕಾರಣಗಳಾಗಿವೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕುಸಿತದ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!