ಮಂಡ್ಯದ ಗಂಡು​ ಅಂಬಿಗೂ ಕರ್ನಾಟಕ ರತ್ನ ನೀಡುವಂತೆ ಆಗ್ರಹ

ವಿಷ್ಣುವರ್ಧನ್ ಆಯ್ತು, ಈಗ ರೆಬಲ್ ಸ್ಟಾರ್​ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಂಬಿ ಅಭಿಮಾನಿಗಳು ಆಗ್ರಹಿಸಿದ್ದಾರೆ. ಇವತ್ತು ರೆಬಲ್ ಸ್ಟಾರ್​ ಅಭಿಮಾನಿಗಳ ಪರವಾಗಿ ಹಿರಿಯ ನಟಿ ತಾರಮ್ಮ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಇತ್ತಿಚೆಗೆ ಕರ್ನಾಟಕ ಸರ್ಕಾರ ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾ ದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಗೌರವ ಘೋಷಣೆ ಮಾಡಿದೆ. ಬೆನ್ನಲ್ಲೇ ರೆಬೆಲ್​ ಸ್ಟಾರ್ ಅಂಬರೀಶ್​ ಅವರಿಗೂ ‘ಕರ್ನಾಟಕ ರತ್ನ’ ನೀಡುವಂತೆ ಕೂಗು ಕೇಳಿ ಬಂದಿದೆ.

ಇವತ್ತು ಹಿರಿಯ ನಟಿ ತಾರಾ ಅನುರಾಧ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು. ಭೇಟಿ ವೇಳೆ ಅಂಬರೀಶ್ ಅವರಿಗೂ ಕರ್ನಾಟಕ ರತ್ನ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಅಂಬಿ ಫ್ಯಾನ್ಸ್​ ಪರ ತಾರಾ ಮನವಿ:ಅಂಬರೀಶ್​ಗೆ ಕರ್ನಾಟಕ ರತ್ನ ನೀಡಬೇಕು ಅನ್ನೋದು ಅಂಬಿ ಅಭಿಮಾನಿಗಳ ಒತ್ತಾಸೆ. ನೀವೂ ಕೂಡ (ಡಿಕೆ ಶಿವಕುಮಾರ್) ಅಂಬಿ ಅವರನ್ನ ತುಂಬಾ ಹತ್ತಿರದಿಂದ ಕಂಡಿದ್ದೀರಾ. ವಿಷ್ಣುವರ್ಧನ್​ ಹಾಗೂ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರೊದು ಬಹಳ ಸಂತೋಷದ ಸುದ್ದಿ. ಜೊತೆಗೆ ಅಂಬರೀಶ್​ಗೂ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ ಎಂದು ತಾರಾ ಅನುರಾಧ ಮನವಿ ಮಾಡಿಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!