ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!

 

ಕರ್ನಾಟಕದಲ್ಲಿ ಲೆಪ್ಟೋಸ್ಪೈರೋಸಿಸ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗಿವೆ. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಬ್ಯಾಕ್ಟೀರಿಯಾ ಸೋಂಕು. ಜ್ವರ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು. ಕಲುಷಿತ ನೀರು ಮತ್ತು ಮಣ್ಣಿನ ಸಂಪರ್ಕದಿಂದ ಹರಡುತ್ತದೆ. ರೋಗ ತಡೆಗಟ್ಟಲು ನೈರ್ಮಲ್ಯ ಕಾಪಾಡುವುದು, ಶುದ್ಧ ನೀರು ಕುಡಿಯುವುದು ಮತ್ತು ಮುನ್ನೆಚ್ಚರಿಕೆ ಕ್ರಮಗಳು ಇಲ್ಲಿವೆ.

ರಾಜ್ಯದಲ್ಲಿ ಲೆಪ್ಟೋಸ್ಪೈರೋಸಿಸ್ ಸೋಂಕಿನ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸುಮಾರು 30 ಮಂದಿ ಮೃತಪಟ್ಟಿದ್ದಾರೆ. ಪ್ರತಿ ವರ್ಷವೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಎಬ್ಬಿಸಿದೆ .ವರ್ಷವಾರು ಅಂಕಿಅಂಶಗಳನ್ನು ಗಮನಿಸಿದರೆ 2020ರಲ್ಲಿ 544 ಪ್ರಕರಣಗಳು ದಾಖಲಾಗಿದ್ದರೆ, 2021ರಲ್ಲಿ 906 ಪ್ರಕರಣಗಳು ಕಂಡುಬಂದಿವೆ. ಬಳಿಕ 2022ರಲ್ಲಿ 3,174 ಪ್ರಕರಣಗಳು, 2023ರಲ್ಲಿ 5,404 ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 5,088 ಪ್ರಕರಣಗಳು ವರದಿಯಾಗಿದ್ದು, 2025ರಲ್ಲಿ ಈ ಸಂಖ್ಯೆ 6,525ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಮಾತ್ರವೇ 19 ಮಂದಿ ಈ ಸೋಂಕಿನಿಂದ ಮೃತಪಟ್ಟಿದ್ದಾರೆ.

ಲೆಪ್ಟೋಸ್ಪೈರೋಸಿಸ್ ಒಂದು ಝೂನೋಟಿಕ್ ಬ್ಯಾಕ್ಟೀರಿಯಾ ಸೋಂಕಾಗಿದ್ದು, ಸೋಂಕಿತ ಪ್ರಾಣಿಗಳ ಮೂತ್ರದ ಸಂಪರ್ಕದಿಂದ ಅಥವಾ ಅದರಿಂದ ಮಾಲಿನ್ಯಗೊಂಡ ನೀರು ಮತ್ತು ಮಣ್ಣಿನ ಸಂಪರ್ಕದಿಂದ ಹರಡುತ್ತದೆ. ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿರುವುದರಿಂದ ಇದನ್ನು ಡೆಂಗ್ಯೂ ಅಥವಾ ಮಲೇರಿಯಾ ಎಂದು ತಪ್ಪಾಗಿ ಗುರುತಿಸುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಸೋಂಕು ತಗುಲಿದ ನಂತರ ಸಾಮಾನ್ಯವಾಗಿ 2 ರಿಂದ 14 ದಿನಗಳೊಳಗೆ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಆರಂಭಿಕ ಲಕ್ಷಣಗಳು
ಜ್ವರ,ತೀವ್ರ ತಲೆನೋವು ,ದೇಹ ನೋವು, ವಿಶೇಷವಾಗಿ ಕಾಲು ಮತ್ತು ಬೆನ್ನು ಭಾಗದಲ್ಲಿ ಚಳಿ ಅಥವಾ ನಡುಕ, ವಾಂತಿ ಅಥವಾ ಅಸ್ವಸ್ಥತೆ ,ಕಣ್ಣು ಕೆಂಪಾಗುವುದು,ದೌರ್ಬಲ್ಯ ಮತ್ತು ದೇಹ ಸೊರಗು ,ಹೊಟ್ಟೆ ನೋವು ,ಗಂಭೀರ ಲಕ್ಷಣಗಳು ಮೂತ್ರಪಿಂಡ ಸಮಸ್ಯೆ (ಕಿಡ್ನಿ ಫೇಲ್ಯರ್)ಯಕೃತ್ ಹಾನಿಯಿಂದ ಕಾಮಳೆ, ಉಸಿರಾಟದ ತೊಂದರೆ ಅಥವಾ ಶ್ವಾಸಕೋಶ ಸಮಸ್ಯೆಗಳು ಮೆದುಳಿನ ಸೋಂಕು (ಮೆನಿಂಜೈಟಿಸ್)ಒಳರಕ್ತಸ್ರಾವ

ನೆರೆ ನೀರು ಅಥವಾ ಕಲುಷಿತ ನೀರಿನಲ್ಲಿ ಬರಿಗಾಲಿನಲ್ಲಿ ನಡೆಯುವುದನ್ನು ತಪ್ಪಿಸಬೇಕು.ಕೃಷಿ ಕೆಲಸ ಅಥವಾ ಕಸ ವಿಲೇವಾರಿ ಮಾಡುವಾಗ ಬೂಟು, ಕೈಗವಸು ಧರಿಸಬೇಕು.
ಕಲುಷಿತ ನೀರಿನ ಸಂಪರ್ಕದ ನಂತರ ಕೈ ಕಾಲುಗಳನ್ನು ಚೆನ್ನಾಗಿ ತೊಳೆಯಬೇಕು.ಗಾಯ ಅಥವಾ ಕತ್ತರಿದ ಜಾಗಗಳನ್ನು ಮುಚ್ಚಿಕೊಂಡಿರಬೇಕು.ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ ಇಲಿಗಳ ನಿಯಂತ್ರಣ ಮಾಡಬೇಕು.
ಶುದ್ಧವಾದ ನೀರನ್ನೇ ಕುಡಿಯಬೇಕು.ಕಲುಷಿತ ನೀರಿನ ಸಂಪರ್ಕದ ನಂತರ ಜ್ವರ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ರೋಗದ ಈ ಎಲ್ಲಾ ಲಕ್ಷಣಗಳ ಹೊರತಾಗಿಯೂ ಸರಿಯಾದ ನಿರ್ಧಾರಕ್ಕೆ ಲ್ಯಾಬ್ ಪರೀಕ್ಷೆಗಳು ಅಗತ್ಯ. ಐಜಿಎಂ ಎಲಿಸಾ ಪರೀಕ್ಷೆ ಮೂಲಕ ಆರಂಭಿಕ ತಪಾಸಣೆ ನಡೆಸಲಾಗುತ್ತದೆ. ಮೈಕ್ರೋಸ್ಕೋಪಿಕ್ ಅಗ್ಗ್ಲುಟಿನೇಶನ್ ಟೆಸ್ಟ್ ಮುಖ್ಯ ಪರೀಕ್ಷೆಯಾಗಿದ್ದು, ವಿಶೇಷ ಪ್ರಯೋಗಾಲಯಗಳಲ್ಲಿ ನಡೆಸಲಾಗುತ್ತದೆ. ಆರಂಭಿಕ ಹಂತದಲ್ಲಿ ಪಿಸಿಆರ್ ಪರೀಕ್ಷೆಯಿಂದ ಬ್ಯಾಕ್ಟೀರಿಯಾ ಡಿಎನ್‌ಎ ಪತ್ತೆ ಮಾಡಬಹುದು. ಚಿಕಿತ್ಸೆ ವಿಳಂಬವಾದರೆ ಈ ಸೋಂಕು ಪ್ರಾಣಾಪಾಯಕ್ಕೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

Related Posts

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

You Missed

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ