ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೂ ಸಹ RCB ಪ್ಲೇಆಫ್ಗೆ ಪ್ರವೇಶಿಸಿಲ್ಲ..!

ಇಂಡಿಯನ್ ಪ್ರೀಮಿಯರ್ ಲೀಗ್ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ.

ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದಿರುವ ಆರ್ಸಿಬಿ ತಂಡ ಇನ್ನೂ ಸಹ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಲ್ಲ. ಏಕೆಂದರೆ ಲೀಗ್ ಹಂತದಲ್ಲಿ ಇನ್ನೂ 18 ಪಂದ್ಯಗಳಿವೆ. ಈ ಮ್ಯಾಚ್ಗಳ ಮೂಲಕ 5 ತಂಡಗಳಿಗೆ 18 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶವಿದೆ. ಹೀಗಾಗಿಯೇ 16 ಅಂಕಗಳನ್ನು ಹೊಂದಿದ್ದರೂ ಆರ್ಸಿಬಿ ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ.

ಅತ್ತ ಕಡೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಒಟ್ಟು 20 ಅಂಕಗಳನ್ನು ಪಡೆಯಬಹುದು. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ 22 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಬಹುದು.

ಇನ್ನು ಪಂಜಾಬ್ ಕಿಂಗ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಅದೇ ರೀತಿ LSG ಹಾಗೂ DC ತಂಡಗಳು ಮುಂದಿನ 4 ಮ್ಯಾಚ್ಗಳಲ್ಲೂ ಗೆಲುವು ದಾಖಲಿಸಲು ಯಶಸ್ವಿಯಾದರೆ ಒಟ್ಟು 20 ಅಂಕಗಳನ್ನು ಪಡೆದುಕೊಳ್ಳಲಿದೆ.

ಇತ್ತ ಐದು ತಂಡಗಳಿಗೆ 16 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶ ಇರುವ ಕಾರಣ ಆರ್ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಬೇಕಿದ್ದರೆ ಮುಂದಿನ ಮೂರು ಮ್ಯಾಚ್ಗಳಲ್ಲಿ 2 ಗೆಲುವು ದಾಖಲಿಸುವುದು ಅನಿವಾರ್ಯ.

ಇನ್ನು ಆರ್ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ… LSG (ಮೇ.9), SRH (ಮೇ.13) ಹಾಗೂ KKR (ಮೇ.17). ಈ ತಂಡಗಳ ವಿರುದ್ಧದ ಗೆಲುವು ದಾಖಲಿಸಿದರೆ ಆರ್ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!