ಧೋನಿಯ 15 ವರ್ಷಗಳ ದಾಖಲೆ ಮುರಿದ ರಿಂಕು ಸಿಂಗ್

IPL 2026 LSG vs KKR: ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್​ಗಳಲ್ಲಿ 155 ರನ್ ಬಾರಿಸಿ ಪಂದ್ಯ ಟೈ ಗೊಳಿಸಿದ್ದರು. ಬಳಿಕ ನಡೆದ ಸೂಪರ್ ಓವರ್​ನಲ್ಲಿ ಕೆಕೆಆರ್ ತಂಡ ಜಯ ಸಾಧಿಸಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಿಂಕು ಸಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 83 ರನ್ ಬಾರಿಸಿದರು.

ಈ 83 ರನ್​ಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ 6ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ರಿಂಕು ಸಿಂಗ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.
2011 ರ ಐಪಿಎಲ್​ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಮಹೇಂದ್ರ ಸಿಂಗ್ ಧೋನಿ ಅಜೇಯ 70 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಆರನೇ ಕ್ರಮಾಂಕದಲ್ಲಿ ಅತ್ಯಧಿಕ ವೈಯುಕ್ತಿಕ ಸ್ಕೋರ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು
ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 83 ರನ್ ಬಾರಿಸುವ ಮೂಲಕ ರಿಂಕು ಸಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ 15 ವರ್ಷಗಳ ಹಿಂದೆ ಮಹೇಂದ್ರ ಸಿಂಗ್ ಧೋನಿ ಬರೆದಿದ್ದ ದಾಖಲೆಯನ್ನು ರಿಂಕು ಅಳಿಸಿ ಹಾಕಿದ್ದಾರೆ.

Related Posts

ವಂದೇ ಭಾರತ್‌ ರೈಲಿಗಿಂತಲೂ ಉದ್ದದ ಸಿಹಿ ತಿಂಡಿ! ವಿಶ್ವ ದಾಖಲೆ ಬರೆದ ಇಟಾಲಿಯನ್ ‘ತಿರಾಮಿಸು’.

ಲಂಡನ್‌ನಲ್ಲಿ ಇತ್ತೀಚೆಗೆ ಬಾಣಸಿಗರ ಗುಂಪೊಂದು ಅಚ್ಚರಿಯ ಸಾಧನೆ ಮಾಡಿದೆ. ವಿಶ್ವದ ಅತಿ ದೊಡ್ಡ ಇಟಾಲಿಯನ್ ಸಿಹಿ ತಿಂಡಿ ‘ತಿರಾಮಿಸು’ (Tiramisu) ತಯಾರಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ. ಈ ಖಾದ್ಯದ ಉದ್ದ ಬರೋಬ್ಬರಿ 440.6 ಮೀಟರ್ (1,445 ಅಡಿ) ಇದ್ದು,…

ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ*

ಹಾಸನದ 25ರ ಯುವ ಸಾಫ್ಟ್‌ವೇರ್ ಇಂಜಿನಿಯರ್ ಶ್ವೇತಾ ಮೆದುಳಿನಲ್ಲಿ ತೀವ್ರ ರಕ್ತಸ್ರಾವದಿಂದ ಹಠಾತ್ ನಿಧನರಾಗಿದ್ದಾರೆ. ಮನೆಯಲ್ಲಿ ಕುಸಿದುಬಿದ್ದ ನಂತರ ಕೋಮಾಕ್ಕೆ ಜಾರಿದ ಶ್ವೇತಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದರು. ಕುಟುಂಬದಲ್ಲಿ ಈ ಘಟನೆ ಆತಂಕ ಮೂಡಿಸಿದೆ. ಪೋಷಕರು ಅಂಗಾಂಗ ದಾನಕ್ಕೆ ಮುಂದಾದರೂ, ಆರೋಗ್ಯ…

You Missed

ಧೋನಿಯ 15 ವರ್ಷಗಳ ದಾಖಲೆ ಮುರಿದ ರಿಂಕು ಸಿಂಗ್

ಧೋನಿಯ 15 ವರ್ಷಗಳ  ದಾಖಲೆ ಮುರಿದ ರಿಂಕು ಸಿಂಗ್

ವಂದೇ ಭಾರತ್‌ ರೈಲಿಗಿಂತಲೂ ಉದ್ದದ ಸಿಹಿ ತಿಂಡಿ! ವಿಶ್ವ ದಾಖಲೆ ಬರೆದ ಇಟಾಲಿಯನ್ ‘ತಿರಾಮಿಸು’.

ವಂದೇ ಭಾರತ್‌ ರೈಲಿಗಿಂತಲೂ ಉದ್ದದ ಸಿಹಿ ತಿಂಡಿ! ವಿಶ್ವ ದಾಖಲೆ ಬರೆದ ಇಟಾಲಿಯನ್ ‘ತಿರಾಮಿಸು’.

ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ*

ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ*

ಎಲ್‌ಎಸ್‌ಜಿ ಮಾಡಿದ ‘ಸೂಪರ್’ ಎಡವಟ್ಟು: ಲಖನೌ ಸೋಲಿನ ರಹಸ್ಯ ಬಿಚ್ಚಿಟ್ಟ ಡೇಲ್ ಸ್ಟೇನ್!

ಎಲ್‌ಎಸ್‌ಜಿ ಮಾಡಿದ ‘ಸೂಪರ್’ ಎಡವಟ್ಟು: ಲಖನೌ ಸೋಲಿನ ರಹಸ್ಯ ಬಿಚ್ಚಿಟ್ಟ ಡೇಲ್ ಸ್ಟೇನ್!

ಪಶ್ಚಿಮ ಬಂಗಾಳದಲ್ಲಿ 100 ಕಚ್ಚಾ ಬಾಂಬ್‌ ಪತ್ತೆ: ಎನ್‌ಐಎ ತನಿಖೆಗೆ ಚುನಾವಣಾ ಆಯೋಗ ಆದೇಶ.

ಪಶ್ಚಿಮ ಬಂಗಾಳದಲ್ಲಿ 100 ಕಚ್ಚಾ ಬಾಂಬ್‌ ಪತ್ತೆ: ಎನ್‌ಐಎ ತನಿಖೆಗೆ ಚುನಾವಣಾ ಆಯೋಗ ಆದೇಶ.

ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ.

ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ.