ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೂರ್ವಭಾವಿಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ‘ಕಬಿನಿ ಜಲಾಶಯದಿಂದ ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು, ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಸರಗೂರು ತಹಶೀಲ್ದಾರ್ ರುಕಿಯಾ ಬೇಗಂ ಹಾಗೂ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.




