ಕಬಿನಿ ಹಾಗೂ ನುಗು ಜಲಾಶಯಗಳಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭೇಟಿ

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಇಂದು ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೂರ್ವಭಾವಿಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ‘ಕಬಿನಿ ಜಲಾಶಯದಿಂದ ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು, ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಸರಗೂರು ತಹಶೀಲ್ದಾರ್ ರುಕಿಯಾ ಬೇಗಂ ಹಾಗೂ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!