ಡಿಕೆ ಸುರೇಶ್ ಜನ ಮೆಚ್ಚಿದ ನಾಯಕ ನಾನು ಅವರ ಹೆಂಡ್ತಿ.

ರಾಮನಗರ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ ಎಂದು ಆಕೆ ವಿಡಿಯೊದಲ್ಲಿ ಹೇಳಿದ್ದಾರೆ. ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ.


ಆದರೆ ಸರಳವಾಗಿ ಹೋಗುವುದರಿಂದ ಎಲ್ಲರೂ ನನ್ನ ಪ್ರಶ್ನೆ ಮಾಡುತ್ತಾರೆ, ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ, ಜನರಿಗೆ ಸ್ಟೇಟಸ್ ಬೇಕು, ಹಾಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ ಎಂದು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಹರಿ ಬಿಟ್ಟಿದ್ದಾರೆ. ಫೇಸ್ಬುಕ್ನಲ್ಲಿ PavitraDksuresh Dodalahalli ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ಮಹಿಳೆ, ಏ.8ರಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ.

https://www.facebook.com/share/r/1B8GuTeTkH/


ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಸುರೇಶ್ ಅವರ ಪತ್ನಿ ಎಂದು ದುರುದ್ದೇಶದಿಂದ ಹೇಳಿಕೊಂಡು ಅಪಪ್ರಚಾರ ನಡೆಸುತ್ತಿರುವ ಮಹಿಳೆ, ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಹ್ನೆ ಸಹ ದುರುಪಯೋಗಪಡಿಸಿ ಕೊಂಡಿದ್ದಾರೆ. ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಕೀಲ ಪ್ರದೀಪ್ ತಿಳಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!