ಮಹಿಳಾ ಪ್ರೀಮಿಯರ್ ಲೀಗ್ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ 4 ಪಂದ್ಯಗಳನ್ನು ಗೆದ್ದು, 2 ಪಂದ್ಯ ಸೋತು, ಮೆಗ್ ಲ್ಯಾನಿಂಗ್ ನೇತೃತ್ವದ ತಂಡ 8 ಅಂಕಗಳನ್ನು ಹೊಂದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.




