ಶಿವಮೊಗ್ಗ ಜಿಲ್ಲೆಯ ಶಾಲೆಯಲ್ಲಿ ಕುಡಿಯುವ ನೀರಿಗೆ ವಿಷ: ಸಿಎಂ ಸಿದ್ದರಾಮಯ್ಯ ಕಳವಳ.

ಬೆಂಗಳೂರು : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!