ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ!

ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ED ದಾಳಿ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಿದ ಆರೋಪವನ್ನೂ ಎದುರಿಸುತ್ತಿರುವ ಸಂಸ್ಥೆಯ ಹಣಕಾಸು ವ್ಯವಹಾರಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರು ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವೆಲಪರ್ಸ್​ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ED ಅಧಿಕಾರಿಗಳು ಸಂಸ್ಥೆಯ ಕಚೇರಿ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ.

ದೆಹಲಿಯಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ
1999ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ವಸತಿ, ವಾಣಿಜ್ಯ, ರಿಟೇಲ್ ಹಾಗೂ ಇತರೆ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಸಂಸ್ಥೆ ಕೈಗೊಂಡಿದೆ. ಇದೀಗ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿರುವ ಕಚೇರಿ ಹಾಗೂ ಸಂಸ್ಥಾಪಕರ ಮನೆ ಮೇಲೂ ದಾಳಿ ನಡೆಸಿದೆ.

ಬೆಳಗ್ಗೆ ದೆಹಲಿ ಕಚೇರಿಯಿಂದ ಬಂದ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ಆರು ವಾಹನಗಳಲ್ಲಿ ಆಗಮಿಸಿ ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಇಡಿ ತಂಡ, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ.

ಇದೇ ರೀತಿ ಹಣಕಾಸಿನ ಪ್ರಕರಣದಲ್ಲಿ ಇಡಿಯು ಈಗಾಗಲೇ 2022ರಲ್ಲಿ ದಾಳಿ ನಡೆಸಿದ್ದು, 2023ರಲ್ಲಿ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಅಲ್ಲದೇ ಗ್ರಾಹಕರಿಂದ ಅಪಾರ್ಟ್ಮೆಂಟ್‌ಗಾಗಿ ಹಣ ಪಡೆದು ಅದನ್ನು ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಆರೋಪವೂ ಕೇಳಿಬಂದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನು ಪರಿ

Related Posts

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…

You Missed

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!