ಸಂಬಂಧ ಕೇಂದ್ರದೊಂದಿಗೆ ಚರ್ಚೆಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು,ಮಾ.3(ಕೆಎಂಶಿ)-ಅಮೆರಿಕ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿ ರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರಕಾರದ ಜೊತೆ ಮಾತನಾಡುತ್ತೇ ನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಮಾತನಾಡಿದ ಅವರು, ನಾನು ದುಬೈ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸಂಪರ್ಕಿಸಿ, ಮಾತನಾಡಿ ದ್ದಲ್ಲದೆ, ಅವರಿಗೆ ಧೈರ್ಯ ತುಂಬಿರುವುದಾಗಿ ತಿಳಿಸಿದರು. ಕೆಲವರು ಹೋಟೆಲ್‌ನಲ್ಲಿ ತಂಗಿದ್ದು, ಅವರಲ್ಲಿ ಕೆಲವರು ಆತಂಕ ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದರು. ಪ್ರಧಾನಿ ಮೋದಿಜೀ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‌ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ಧೈರ್ಯ ಹೇಳಿದ್ದೇನೆ.




