ನಗರದಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. ಬಿಎಂಟಿಸಿ ಬಸ್ನಿಂದ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಉಸಿರು ಚೆಲ್ಲಿದ್ದಾರೆ.
ವೃದ್ಧ ಶಂಕರ್ ನಾರಾಯಣ್ (76) ಜೀವ ಕಳೆದುಕೊಂಡವರು. ಓ ಫಾರ್ಮ್ ಕಡೆಯಿಂದ ಚನ್ನಸಂದ್ರ ಕಡೆಗೆ ಬರುತ್ತಿದ್ದ ಬಿಎಂಟಿಸಿ ಬಸ್ ವೃದ್ಧನಿಗೆ ಡಿಕ್ಕಿ ಹೊಡೆದಿತ್ತು. ನಿನ್ನೆ ರಾತ್ರಿ 8:30ರ ಸುಮಾರಿಗೆ ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ವೃದ್ಧನಿಗೆ ಗುದ್ದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶಂಕರ್ ನಾರಾಯಣ್ ಜೀವ ಬಿಟ್ಟಿದ್ದಾರೆ. ಸದ್ಯ ಈ ಸಂಬಂಧ ಬಿಎಂಟಿಸಿ ಬಸ್ ಡ್ರೈವರ್ ಗಂಗರಾಜುನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.






