ರಸ್ತೆ ದಾಟುತಿದ್ದ ವೃದ್ಧನಿಗೆ BMTC ಬಸ್ ಡಿಕ್ಕಿ ಹೊಡೆದು ವೃದ್ಧನ ಸಾ*ವು

ನಗರದಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. ಬಿಎಂಟಿಸಿ ಬಸ್​ನಿಂದ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಉಸಿರು ಚೆಲ್ಲಿದ್ದಾರೆ.

ವೃದ್ಧ ಶಂಕರ್ ನಾರಾಯಣ್ (76) ಜೀವ ಕಳೆದುಕೊಂಡವರು. ಓ ಫಾರ್ಮ್ ಕಡೆಯಿಂದ ಚನ್ನಸಂದ್ರ ಕಡೆಗೆ ಬರುತ್ತಿದ್ದ ಬಿಎಂಟಿಸಿ ಬಸ್ ವೃದ್ಧನಿಗೆ ಡಿಕ್ಕಿ ಹೊಡೆದಿತ್ತು. ನಿನ್ನೆ ರಾತ್ರಿ 8:30ರ ಸುಮಾರಿಗೆ ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ವೃದ್ಧನಿಗೆ ಗುದ್ದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು.

ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶಂಕರ್ ನಾರಾಯಣ್ ಜೀವ ಬಿಟ್ಟಿದ್ದಾರೆ. ಸದ್ಯ ಈ ಸಂಬಂಧ ಬಿಎಂಟಿಸಿ ಬಸ್ ಡ್ರೈವರ್​ ಗಂಗರಾಜುನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಹದೇವಪುರ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!