![]()
ಹಂಚೀಪುರ ಗ್ರಾಮದ ಮಹದೇವಪ್ಪ ಎಂಬುವರ ಜಮೀನಿನಲ್ಲಿರುವ ಗುಂಡಿಗೆ ಗಂಡು ಕಾಡಾನೆ ಬಿದ್ದಿತ್ತು. ಇದನ್ನು ಕಂಡ ಸ್ಥಳೀಯ ರೈತರೊಬ್ಬರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದ್ದರು. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ಆನೆ ಮೇಲಕ್ಕೆ ಬರುವಂತೆ ಮಾಡಿದ್ದಾರೆ.

ಆಕ್ರೋಶಗೊಂಡಿರುವ ಕಾಡಾನೆ ಮೇಲೆ ಬಂದ ಮೇಲೆ ಅಟ್ಟಾಡಿಸಿಕೊಂಡು ಬಂದಿದೆ. ಸದ್ಯ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಯನ್ನು ಕಾಡಿನತ್ತ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.





