ಎಲ್‌ಪಿಜಿ ತೂಕ ಕಡಿತ ಇಲ್ಲ: 14.2 ಕೆಜಿ ಸಿಲಿಂಡರ್‌ ಯಥಾಸ್ಥಿತಿ ಎಂದು ಕೇಂದ್ರ.

ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಎದುರಾಗಿರುವ ಕಾರಣ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮನೆಗಳಿಗೆ 14.2 ಕೆಜಿ ಸಿಲಿಂಡರ್‌ಗಳಲ್ಲಿ ಕೇವಲ 10 ಕೆಜಿ ಎಲ್‌ಪಿಜಿ ಪೂರೈಸುವ ಬಗ್ಗೆ ಯೋಚಿಸುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇದನ್ನು ಅಲ್ಲಗಳೆದಿದ್ದು, ಯಾವುದೇ ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ ಮಾಡಿದೆ.
ಸಾಮಾನ್ಯವಾಗಿ 14.2 ಕೆಜಿ ತೂಕದ ಸಿಲಿಂಡರ್ 35-40 ದಿನಗಳಿಗೆ ಸಾಕಾಗುತ್ತದೆ. ಅಂದರೆ 10 ಕೆಜಿ ಎಲ್‌ಪಿಜಿಯನ್ನು ಒಂದು ತಿಂಗಳವರೆಗೆ ಬಳಸಿಕೊಳ್ಳಬಹುದು. ಇದರಿಂದ ಗ್ಯಾಸ್‌ನಲ್ಲಿ ಕೊಂಚ ಉಳಿತಾಯವಾಗಿ, ಹೆಚ್ಚು ಮನೆಗಳಿಗೆ ಪೂರೈಸಬಹುದು ಎಂದು ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾತುಗಳು ಹರಿದಾಡುತ್ತಿವೆ.

ಈ ಬೆನ್ನಲ್ಲೇ ಇದಕ್ಕೆ ಸ್ಪಷ್ಟೀಕರಣ ನೀಡಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ‘ಇದೆಲ್ಲಾ ಕೇವಲ ಊಹಾಪೋಹ. ಇಂಥ ವದಂತಿಗಳಿಗೆ ಯಾವುದೇ ಹೇಳಿಕೆ ಅಥವಾ ವಿವರಣೆ ಕೊಡಲು ಸಾಧ್ಯವಿಲ್ಲ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದು ಮನವಿ ಮಾಡಿದ್ದಾರೆ.
ನಮ್ಮ ತೈಲ ಸಂಗ್ರಹ ಮೂರನೇ ಎರಡರಷ್ಟು ಭರ್ತಿ: ಸಚಿವ ಗೋಪಿ
ಮಧ್ಯಪ್ರಾಚ್ಯ ಬಿಕ್ಕಟ್ಟು, ಬೆಲೆ ಏರಿಕೆ ಸೇರಿ ನಾನಾ ಅಡೆತಡೆಗಳ ನಡುವೆಯೂ ದೇಶದಲ್ಲಿ ಮೂರನೇ ಎರಡಷ್ಟು ತೈಲ ನಂಗ್ರಹಗಳು ತುಂಬಿವೆ ಎಂದು ಕೇಂದ್ರ ಸಚಿವ ಸುರೇಶ್‌ ಗೋಪಿ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಮೇಲ್ಮನೆಯಲ್ಲಿ ಲಿಖಿತ ರೂಪದಲ್ಲಿ ಮಾಹಿತಿ ನೀಡಿರುವ ಅವರು, ‘ 9.5 ದಿನಗಳ ಪೂರೈಕೆಗೆ ಅನುಕೂಲವಾಗುವಂತೆ ವಿನ್ಯಾಸ ಮಾಡಲಾದ ತೈಲ ಸಂಗ್ರಹಗಳು ಮೂರನೇ ಎರಡರಷ್ಟು ತುಂಬಿದೆ. ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ 53.3 ಲಕ್ಷ ಟನ್‌ ಸಾಮರ್ಥ್ಯದೊಂದಿಗೆ ಮೂರು ಪೆಟ್ರೋಲಿಯಂ ಸಂಗ್ರಹಗಳನ್ನು ಸ್ಥಾಪಿಸಿತ್ತು. ಇವುಗಳಲ್ಲಿ ಸುಮಾರು 33.7 ಲಕ್ಷ ಟನ್‌ ಕಚ್ಚಾ ದಾಸ್ತಾನು ಇದೆ. ಒಟ್ಟಾರೆ ಸಂಗ್ರಹ ಸಾಮರ್ಥ್ಯದ ಶೇ.64ರಷ್ಟಿದೆ’ ಎಂದಿದ್ದಾರೆ.

ಶೇ.88ರಷ್ಟು ಕಚ್ಚಾ ತೈಲಗಳ ಆಮದು ಅವಲಂಬಿಸಿರುವ ಭಾರತ ಕಚ್ಚಾ ತೈಲವನ್ನು ಸಂಗ್ರಹಿಸಲು ಕರ್ನಾಟಕದ ಮಂಗಳೂರು, ಪಾದೂರು ಜತೆಗೆ ಆಂಧ್ರಪ್ರದೇಶದ ವಿಶಾಪಟ್ಟಣದಲ್ಲಿ ತೈಲ ಸಂಗ್ರಹ ಕೇಂದ್ರಗಳನ್ನು ನಿರ್ಮಿಸಿತ್ತು.

3 ವಾರದಲ್ಲಿ 3.5 ಲಕ್ಷ ಪಿಎನ್‌ಜಿ ಸಂಪರ್ಕ: ಕೇಂದ್ರ
ಎಲ್‌ಪಿಜಿ ಬಿಕ್ಕಟ್ಟಿನ ಕಾರಣ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್‌ ಗ್ಯಾಸ್) ಬಳಕೆ ಉತ್ತೇಜಿಸುತ್ತಿರುವ ಕೇಂದ್ರ ಸರ್ಕಾರ, ಕಳೆದ 3 ವಾರಗಳಲ್ಲಿ ಸುಮಾರು 3.5 ಲಕ್ಷ ಹೊಸ ವಾಣಿಜ್ಯ ಮತ್ತು ದೇಶೀಯ ಪಿಎನ್‌ಜಿ ಸಂಪರ್ಕಗಳನ್ನು ನೀಡಿದೆ. ಇದೇ ವೇಳೆ, ಹೊಸದಾಗಿ 1.9 ಲಕ್ಷ ಜನರು ಈ ಅವಧಿಯಲ್ಲಿ ಪಿಎನ್‌ಜಿಗೆ ಶಿಫ್ಟ್‌ ಆಗಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಕಾರ್ಯದರ್ಶಿ ಸುಜಾತಾ ಶರ್ಮಾ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿ, ‘ಎಲ್‌ಪಿಜಿ ಲಭ್ಯತೆ ಇನ್ನೂ ಕಳವಳಕಾರಿಯಾಗಿದೆ. ಆದರೆ ಸಿಲಿಂಡರ್‌ ಕ್ಷಾಮ ಉಂಟಾಗಿಲ್ಲ. ಪರಿಸ್ಥಿತಿ ನಿಯಂತ್ರಿಸಲು ಪೂರೈಕೆ ಅಧಿಕಗೊಳಿಸಲಾಗಿದೆ. ಪಿಎನ್‌ಜಿ ಸಂಪರ್ಕಕ್ಕೆ ಉತ್ತೇಜನ ನೀಡಲಾಗುತ್ತಿದೆ’ ಎಂದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!