ಗ್ರಾಮದಲ್ಲಿ ಕೆ.ಆರ್.ಪೇಟೆ, ಆ.12- ಹೃದಯಾಘಾತದಿಂದ ಇಂಜಿನಿಯ ರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕರೋಟಿ ನಡೆದಿದೆ.
ಗ್ರಾಮದ ನಿವಾಸಿ ನವೀನ್ (21) ಸಾವನ್ನಪ್ಪಿದವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದ ಈತ ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ್ದ. ಈ ವೇಳೆ ನವೀನ್ಗೆ ಹಠಾತ್ ಹೃದಯಾಘಾತವಾಗಿದ್ದು, ಪೋಷಕರು ಕಿಕ್ಕೇರಿ ಸರ್ಕಾರಿ ಆಸ್ಪತ್ರೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡದೆ, ಚನ್ನರಾಯಪಟ್ಟಣ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಚನ್ನರಾಯಪಟ್ಟಣಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ನವೀನ್ ಸಾವನ್ನಪ್ಪಿದ್ದಾನೆ.
ಪೋಷಕರ ಆಕ್ರಂದನ: ಮಗನಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕಿಕ್ಕೇರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಬದುಕುಳಿಯುತ್ತಿದ್ದ ಎಂದು ನವೀನ್ ಪೋಷಕರು ಆರೋಪಿಸಿದರು.





