ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಜನಪ್ರಿಯ ನಿರೂಪಕಿ ಅನುಶ್ರೀ ಅವರು ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​ನಲ್ಲಿ ಅನುಶ್ರೀ ಅವರ ಮದುವೆ ನಡೆಯಲಿದೆ. ತುಂಬಾ ಸರಳವಾಗಿರುವ ಅವರ ವಿವಾಹ ಆಮಂತ್ರಣ ಪತ್ರಿಕೆಯ ಫೋಟೋ ಲಭ್ಯವಾಗಿದೆ. ಅನೇಕ ಸೆಲೆಬ್ರಿಟಿಗಳು ಅನುಶ್ರೀ ಮದುವೆಗೆ ಸಾಕ್ಷಿಯಾಗಲಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು.

ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್ ಅವರ ಮದುವೆ ನಡೆಯಲಿದೆ. ಈಗಾಗಲೇ ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಅನುಶ್ರೀ ಮದುವೆಯ ಆಹ್ವಾನ ಪತ್ರಿಕೆ ತುಂಬಾ ಸರಳವಾಗಿದೆ.ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಆಹ್ವಾನ ಪತ್ರಿಕೆಯಲ್ಲಿ ಬರೆಯಲಾಗಿದೆ. ಆ.28ಕ್ಕೆ ರೋಷನ್ ಜೊತೆ ನಿರೂಪಕಿ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ. ಅಂದು ಬೆಳಗ್ಗೆ 10.56ಕ್ಕೆ ಮಾಂಗಲ್ಯ ಧಾರಣೆ ಆಗಲಿದೆ. ಬೆಂಗಳೂರಿನ ಹೊರವಲಯದ ರೆಸಾರ್ಟ್​​ನಲ್ಲಿ ಮದುವೆ ನಡೆಯಲಿದೆ.

ಬಣ್ಣದ ಲೋಕದಲ್ಲಿ ಅನುಶ್ರೀ ಅವರು ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಕಿರುತೆರೆಯ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಹಲವು ವೇದಿಕೆ ಕಾರ್ಯಕ್ರಮಗಳ ನಿರೂಪಣೆ ಕೂಡ ಮಾಡಿದ್ದಾರೆ. ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಚಿತ್ರರಂಗದಲ್ಲಿ ಅವರ ಸ್ನೇಹಿತರ ಬಳಗ ದೊಡ್ಡದು. ಅಲ್ಲದೇ, ರಾಜಕೀಯ ಕ್ಷೇತ್ರದವರ ಜೊತೆಗೂ ನಂಟು ಹೊಂದಿದ್ದಾರೆ. ಹಾಗಾಗಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಲಿದ್ದಾರೆ.

https://www.instagram.com/reel/DNNZBnLv3qD/?utm_source=ig_web_copy_link&igsh=MzRlODBiNWFlZA==

ಅನುಶ್ರೀ ಅವರ ಮದುವೆ ಯಾವಾಗ ಎಂಬ ಪ್ರಶ್ನೆ ಆಗಾಗ ಕೇಳಿಬರುತ್ತಿತ್ತು. ಅದಕ್ಕೆ ತಕ್ಕಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಹಲವು ಅಂತೆ-ಕಂತೆಗಳು ಹರಿದಾಡುತ್ತಿದ್ದವು. ಈ ಮೊದಲು ಕೂಡ ಅನುಶ್ರೀ ಮದುವೆ ಬಗ್ಗೆ ಕೆಲವು ಗಾಸಿಪ್ ಹಬ್ಬಿದ್ದವು. ಆದರೆ ಅವು ನಿಜವಾಗಲಿಲ್ಲ. ಈ ಬಾರಿ ಮದುವೆಯ ಸುದ್ದಿ ಖಚಿತವಾಗಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.
ಈ ಮೊದಲು ನಡೆದ ಕಾರ್ಯಕ್ರಮವೊಂದರಲ್ಲಿ ಅನುಶ್ರೀ ಮತ್ತು ರೋಷನ್ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಪೂಜೆ ಮಾಡಿಸುವಾಗ ಕೆಲವರು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಎಲ್ಲ ಕಡೆಗಳಲ್ಲಿ ಅದು ವೈರಲ್ ಆಯಿತು. ಈ ಫೋಟೋ ಫ್ಯಾನ್ ಪೇಜ್​ಗಳಲ್ಲಿ ಹರಿದಾಡುತ್ತಿದೆ. ಒಟ್ಟಿನಲ್ಲಿ ಅನುಶ್ರೀ ಅವರು ಮದುವೆ ಆಗುತ್ತಿರುವ ವಿಚಾರ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!