ಸರ್ಕಾರದ ವಿರುದ್ಧ ಪಟ್ಟು ಬಿಡದೆ ರೈತರ ಹೋರಾಟ, ಕಬ್ಬಿಗೆ 3500 ರೂ. ಬೆಂಬಲ ಬೆಲೆ ಕೊಡಲೇಬೇಕು

ಬೆಳಗಾವಿಯ ಗುರ್ಲಪುರದ ಬಳಿಕ ಬಾಗಲಕೋಟೆಯಲ್ಲಿ ಶುರುವಾದ ರೈತಾಕ್ರೋಶ ಮೂರು ದಿನಗಳಾದ್ರೂ ತಣ್ಣಗಾಗಿಲ್ಲ. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನೂರಾರು ರೈತರು ಇವತ್ತು ಮುಧೋಳ ಅಖಾಡಕ್ಕಿಳಿದಿದ್ದರು.

ಬೆಂಗಳೂರು: ರಾಜ್ಯದಲ್ಲಿ ಸಿಹಿ ಕಬ್ಬಿನ ಬೆಲೆಗಾಗಿ ಹೊತ್ತಿದ್ದ ಕಿಚ್ಚು ಇನ್ನೂ ಆರಿಲ್ಲ. ಈಗಾಗಲೇ ಸರ್ಕಾರ 3 ಸಾವಿರದ 300 ರೂ. ಘೋಷಣೆ ಮಾಡಿದೆ. ಇದನ್ನ ಕೆಲ ರೈತರು ಒಪ್ಪಿದ್ರೆ, ಇನ್ನೂ ಕೆಲ ಅನ್ನದಾತರು ನಮಗೆ 3 ಸಾವಿರದ 500 ರೂ. ಬೇಕೇ ಬೇಕು ಅಂತ ಪಟ್ಟು ಹಿಡಿದಿದ್ದಾರೆ. ವಿಜಯಪುರ, ಕಲಬುರ್ಗಿ ನಂತರ ಬಾಗಲಕೋಟೆ, ಬೀದರ್​ನಲ್ಲಿ ರೈತರ ಹೋರಾಟ ಮುಂದುವರೆದಿದ್ದು, ಪ್ರತಿಭಟನೆ ಮಾಡಿದ್ದಾರೆ.

ಕಬ್ಬಿಗೆ ₹3,500 ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಪ್ರತಿಭಟನೆ

ಬೆಳಗಾವಿಯ ಗುರ್ಲಪುರದ ಬಳಿಕ ಬಾಗಲಕೋಟೆಯಲ್ಲಿ ಶುರುವಾದ ರೈತಾಕ್ರೋಶ ಮೂರು ದಿನಗಳಾದ್ರೂ ತಣ್ಣಗಾಗಿಲ್ಲ. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನೂರಾರು ರೈತರು ಇವತ್ತು ಮುಧೋಳ ಅಖಾಡಕ್ಕಿಳಿದಿದ್ದರು. ಕಸಬಾ ಜಂಬಗಿ ಕ್ರಾಸ್​ನಲ್ಲಿ ಹೆದ್ದಾರಿ ತಡೆದು, ರಸ್ತೆ ಮೇಲೆ ಮುಳ್ಳು ಕಂಠಿ ಹಾಕಿ ಪ್ರತಿಭಟನೆ ನಡೆಸಿದ್ರು.

ಅಷ್ಟೇ ಅಲ್ಲ, ರಸ್ತೆ ಮಧ್ಯೆಯೇ ಅಡುಗೆ ಮಾಡಿ ರೈತರು ಧರಣಿ ಕುಳಿತಿದ್ರು. ಸರ್ಕಾರ ಸ್ಪಂದಿಸುವವರೆಗೂ ನಾವು ಹೋರಾಟ ನಿಲ್ಲಿಸಲ್ಲ ಅಂತ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು. ಅಲ್ಲದೇ, ಪ್ರತಿಭಟನೆ ಮಾಡ್ತಿದ್ದ ಕಬ್ಬು ಬೆಳೆಗಾರರಿಗೆ ಕಸಬಾ ರೈತರು ಕೂಡ ಸಾಥ್ ನೀಡಿದ್ರು. ಹೆದ್ದಾರಿ ತಡೆದಿದ್ದ ಪರಿಣಾಮ ಅನೇಕ ವಾಹನ ಸವಾರರಿಗೆ ಕಿರಿಕಿರಿ ಉಂಟಾಯ್ತು. ಸ್ಥಳಕ್ಕೆ ಪೊಲೀಸ್ ವಾಹನ ಬಂದ್ರೂ ಪಟ್ಟು ಬಿಡದ ಪ್ರತಿಭಟನೆ ಮುಂದುವೆರೆಸಿದ್ರು. ಬೀದರ್​ನಲ್ಲೂ ಕಬ್ಬು ಬೆಳೆಗಾರರ ಪ್ರತಿಭಟನೆ ತಾರಕಕ್ಕೇರಿತ್ತು. ಕೈಯಲ್ಲಿ ಕಬ್ಬು ಹಿಡಿದು ಬಂದಿದ್ದ ರೈತರು ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ರು. ಕೈಯಲ್ಲಿ ಸಿದ್ದರಾಮಯ್ಯ ಹಾಗೂ ಶಿವಾನಂದ್ ಪಾಟೀಲ್​ ಅವ್ರ ಶ್ರದ್ಧಾಂಜಲಿ ಬ್ಯಾನರ್ ಹಿಡಿದು ಆಕ್ರೋಶ ಹೊರಹಾಕಿದ್ರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಬ್ಯಾನರ್​ ಇಳಿಸುವಂತೆ ಸೂಚನೆ ಕೊಟ್ರು. ಇಷ್ಟಾದ್ರೂ ರೈತರ ಆಕ್ರೋಶ ತಣ್ಣಗಾಗಲಿಲ್ಲ.

Related Posts

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!