Good News 24×7 https://www.goodnews24x7.com/ Kannada Fri, 06 Mar 2026 12:31:45 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Good News 24×7 https://www.goodnews24x7.com/ 32 32 UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್ https://www.goodnews24x7.com/anuj-agnihotri-ranks-first-in-upsc-exam/ Fri, 06 Mar 2026 12:22:08 +0000 https://www.goodnews24x7.com/?p=8739 ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

The post UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್ appeared first on Good News 24x7.

]]>

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ.

2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ ಐಎಎಸ್, ಐಪಿಎಸ್, ಐಎಫ್‌ಎಸ್ ಹಾಗೂ ಸೆಂಟ್ರಲ್ ಸರ್ವಿಸ್ ವಿಭಾಗದ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದೆ. ಒಟ್ಟು 958 ಅಭ್ಯರ್ಥಿಗಳ ಪಟ್ಟಿಯನ್ನು ಯುಪಿಎಸ್‌ಸಿ ಪ್ರಕಟಿಸಿದೆ.

ಫಲಿತಾಂಶದಲ್ಲಿ ರಾಜಸ್ಥಾನದ ಅನುಜ್‌ ಅಗ್ನಿಹೋತ್ರಿ ದೇಶಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ರಾಜೇಶ್ವರಿ ಸುವೆ 2ನೇ ರ‍್ಯಾಂಕ್ ಮತ್ತು ಆಕಾಶ್ ಧುಲ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಟಾಪ್ 10 ಸ್ಥಾನ ಪಡೆದವರ ಪಟ್ಟಿ:
ಅನುಜ್‌ ಅಗ್ನಿಹೋತ್ರಿ
ರಾಜೇಶ್ವರಿ ಸುವೆ
ಆಕಾಶ್ ಧುಲ್
ರಾಘವ್ ಜುಂಜುನ್ವಾಲಾ
ಇಶಾನ್ ಭಟ್ನಾಗರ್
ಜಿನ್ನಿಯಾ ಅರೋರಾ
ಎ.ಆರ್. ರಾಜಾ ಮೊಹೈದೀನ್
ಪಕ್ಷಲ್ ಸೆಕ್ರೆಟ್ರಿ
ಆಸ್ಥಾ ಜೈನ್
ಉಜ್ವಲ್ ಪ್ರಿಯಾಂಕ್

The post UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್ appeared first on Good News 24x7.

]]>
ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು? https://www.goodnews24x7.com/what-did-bengaluru-get-in-the-budget/ Fri, 06 Mar 2026 12:05:01 +0000 https://www.goodnews24x7.com/?p=8731 ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

The post ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು? appeared first on Good News 24x7.

]]>

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ,
ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ
ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ ಸಲ್ಲಿಸಿದ್ದು, ಐದು ನಗರ ಪಾಲಿಕೆಗಳ ರಸ್ತೆ ಮತ್ತು ಮೂಲಭೂತ ಸೌಕರ್ಯಕ್ಕೆ 1,255 ಕೋಟಿ ನೀಡಲಾಗಿದೆ.
ನಾಲ್ಕನೇ ಹಂತದ ವೈಟ್ ಟಾಪಿಂಗ್ ಗೆ ಅನುಮೋದನೆ – 450km ಉದ್ದ ವೈಟ್ ಟಾಪಿಂಗ್ ಗೆ 3,000 ಕೋಟಿ
ನಗರದ ಮುಖ್ಯ ಮತ್ತು ಉಪಮುಖ್ಯ ರಸ್ತೆ ಅಭಿವೃದ್ಧಿಗೆ 1,936 ಕೋಟಿ
ಸಿಲ್ಕ್ ಬೋರ್ಡ್ ಟು ಕೆಆರ್ ಪುರಂ ಮೆಟ್ರೋ ವರೆಗಿನ ರಿಂಗ್ ರಸ್ತೆ ಅಭಿವೃದ್ಧಿಗೆ 450 ಕೋಟಿ
ನಗರದ ರಾಜಕಾಲುವೆ ಅಭಿವೃದ್ಧಿಗೆ 273 ಕೋಟಿ
ಅಂತರ್ಜಲ, ವಿಪತ್ತು ಯೋಜನೆಗೆ ವಿಶ್ವ ಬ್ಯಾಂಕ್ ನಿಂದ 2000 ಸಾವಿರ ಕೋಟಿ ಸಾಲ (ಕಳೆದ ವರ್ಷದ್ದೇ ಮುಂದುವರಿಕೆ)
ಜಿಬಿಎ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮುನ್ಸಿಪಲ್ ಬಾಂಡ್ ಬಳಸಿ ಸಾಲ ಪಡೆಯಲು ಅವಕಾಶ
ಬಹು ನಿರೀಕ್ಷಿತ ನಗರ ಸ್ಯಾಟಲೈಟ್ ಮಾಸ್ಟರ್ ಪ್ಲ್ಯಾನ್ (RMP)ಗೆ ಸರ್ಕಾರ ಅನುಮೋದನೆ
26-27ನೇ ಸಾಲಿನಲ್ಲಿ ನಗರದಲ್ಲಿ 41km ವ್ಯಾಪ್ತಿಗೆ ನಮ್ಮ ಮೆಟ್ರೋ ವಿಸ್ತರಣೆ
ORRCA ಸಿಎಸ್ ಆರ್ ಫಂಡ್ ಜೊತೆಗೆ ಸರ್ಕಾರದಿಂದ ನಗರದ ರಿಂಗ್ ರಸ್ತೆಯಲ್ಲಿ ಮೆಟ್ರೋ ವಯಾಡಕ್ಟ್ ಪಾದಾಚಾರಿ ಮಾರ್ಗ ನಿರ್ಮಾಣ
ಬೆಂಗಳೂರಿಗೆ ಕಾವೇರಿ 6ನೇ ಹಂತದ ಕಾವೇರಿ ನೀರು ಯೋಜನೆ ಜಾರಿ – 6,939 ಕೋಟಿ
ಬೆಂಗಳೂರು ಸುರಂಗ ಮಾರ್ಗಕ್ಕೆ ಮೊದಲ ಹಂತದ 17,780 ಕೋಟಿ (ಹೆಬ್ಬಾಳ ಟು ಸಿಲ್ಕ್ ಬೋರ್ಡ್)
ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗಿನ ಎಲೆವೆಟೆಡ್ ಹಾಗೂ ಸುರಂಗ ಮಾರ್ಗಕ್ಕೆ 2,250 ಕೋಟಿ
ಬೆಂಗಳೂರು ಟ್ರಾಫಿಕ್ ತಗ್ಗಿಸಲು ನೆಲಮಂಗಲ – ತಾವರೆಕೆರೆ – ಬಿಡದಿ ನಡುವೆ ಮಧ್ಯಂತರ ರಿಂಗ್ ರಸ್ತೆ ನಿರ್ಮಾಣಕ್ಕೆ ಪ್ಲ್ಯಾನ್

ದಾವಣಗೆರೆಗೆ ಬಜೆಟ್‌ನಲ್ಲಿ ಪ್ರತ್ಯೇಕವಾಗಿ ಅನುದಾನ

ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಪ್ರತ್ಯೇಕವಾಗಿ ಅನುದಾನ ಘೋಷಣೆ ಮಾಡಾಗಿದೆ. ಇದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಗೆಲ್ಲುವ ತಂತ್ರ ಎನ್ನಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ವಿಶೇಷ ಅನುದಾನ ಘೋಷಣೆ ಮಾಡಲಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುತ್ತಿರುವ ಭಾಗಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.

ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ ಅನುಷ್ಠಾನ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಲಾಗಿದೆ. ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ.
ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಒತ್ತು!

2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ. ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣ ಮಾಡಲಾಗಿದೆ. 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ.

ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುತ್ತಿದೆ.

ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುತ್ತದೆ.

ಬೆಂಗಳೂರು ನಗರಾಭಿವೃದ್ಧಿಗೂ ಬಜೆಟ್​​ನಲ್ಲಿ ಒತ್ತು

ಬೆಂಗಳೂರನ್ನ ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರ ಮಾಡುವ ಉದ್ದೇಶ ಇದೆ ಎಂದು ಸರ್ಕಾರ ಹೇಳಿದೆ. ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ 1,255 ಕೋಟಿ ರೂ.ಗಳ ಮೊತ್ತದ ವಾರ್ಡ್ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. 1,700 ಕೋಟಿ ರೂ.ಗಳ ಮೊತ್ತದಲ್ಲಿ 158 ಕಿ.ಮೀ. ಉದ್ದರ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ. 1,936 ಕೋಟಿ ರೂ.ಗಳ ಮೊತ್ತದ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಅಭಿವೃದ್ಧಿ, ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ 450 ಕೋಟಿ ರೂ.ಗಳ ಯೋಜನೆ, 273 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ರಾಜಕಾಲುವೆಗಳ ಮೇಲ್ದರ್ಜೆಗೇರಿಸುವುದು ಮತ್ತು ಕರೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ಬೆಂಗಳೂರಿಗೆ ಬಂಪರ್, ಐದು ಪಾಲಿಕೆ ಮಾಡಿ ವಿಂಗಡಣೆ!

ಈ ಬಾರಿ ರಾಜ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಬಂಪರ್​ ಘೋಷಣೆ ಮಾಡಲಾಗಿದೆ. ಐದು ಪಾಲಿಕೆ ಮಾಡಿ ವಿಂಗಡಣೆ ಮಾಡಲಗಿದೆ. 2025-26ನೇ ಸಾಲಿಗೆ ಬೆಂಗಳೂರು ಅಭಿವೃದ್ಧಿಗೆ 3 ಸಾವಿರ ಕೋಟಿ ಬದಲು, 7ಸಾವಿರ ಕೋಟಿಗೆ ಅನುದಾನ ಹೆಚ್ಚಳ ಮಾಡಲಾಗಿದೆ. 3 ಸಾವಿರ ಕೋಟಿ ವೆಚ್ಚದಲ್ಲಿ 450 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. 175 ಜಂಕ್ಷನ್ ಸೌಂದರ್ಯೀಕರಣ, 500 ಕಿ.ಮೀ ಪಾದಚಾರಿ ಮಾರ್ಗ ಮೇಲ್ದರ್ಜೆಗೆ, 100 ಸ್ಕೈ ವಾಕ್ ನಿರ್ಮಾಣದ ಉದ್ದೇಶ ಇದೆ.

ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧಾರ

ಈ ಬಾರಿ ಬಜೆಟ್​ನಲ್ಲಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಮುಖ್ಯ ಎಂದು ಸರ್ಕಾರ ಹೇಳಿದೆ.

ಮತ್ತೆ ಟನಲ್ ರಸ್ತೆಗಾಗಿ 2,250 ಕೋಟಿ ಘೋಷಣೆ

ಬೆಂಗಳೂರಿನಲ್ಲಿ ಮತ್ತೆ ಟನಲ್ ರಸ್ತೆಗಾಗಿ 2,250 ಕೋಟಿ ಘೋಷಣೆ ಮಾಡಲಾಗಿದೆ. ಹೆಬ್ಬಾಳ ಜಂಕ್ಷನ್‌ನಿಂದ ಮೇಖ್ರಿ ಸರ್ಕಲ್ ವರೆಗೆ ಸುರಂಗ ಮಾರ್ಗ ಹಾಗೂ ಮೇಲ್ ಸೇತುವೆ ರಸ್ತೆ ನಿರ್ಮಾಣಕ್ಕೆ ಬಿಡಿಎ ಮೂಲಕ ಮಾಡಲು 2,250 ಕೋಟಿ ವೆಚ್ಚವಾಗಲಿದ್ದು, ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ.

ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ

ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ ಮಾಡುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಮೈಸೂರು ಮೃಗಾಲಯ ಹಾಗೂ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಪಿಪಿಪಿ ಮಾದರಿಯಲ್ಲಿ ಪ್ರಕೃತಿ ನಿರೂಪಣ ಕೇಂದ್ರ ಸ್ಥಾಪನೆ, ಬೆಂಗಳೂರಿನ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ಜೈವಿಕ ಉದ್ಯಾನ ನಿರ್ಮಾಣ ಮಾಡಲಾಗುತ್ತದೆ.

ಸಮುದಾಯಗಳ ಆರ್ಥಿಕಾಭಿವೃದ್ಧಿಗೆ ಪ್ರತ್ಯೇಕ ನಿಗಮಗಳ ಸ್ಥಾಪನೆ

ಕುಂಬಾರ, ತಿಗಳ, ಗಾಣಿಗ, ಕೊಡವ, ಉಪ್ಪಾರ, ಈಡಿಗ, ಕಾಡುಗೊಲ್ಲ ಸಮುದಾಯಗಳ ಆರ್ಥಿಕಾಭಿವೃದ್ಧಿಗೆ ಪ್ರತ್ಯೇಕ ನಿಗಮಗಳ ಸ್ಥಾಪನೆ ಮಾಡಲು ಈ ಬಾರಿ ಬಜೆಟ್​​ನಲ್ಲಿ ತೀರ್ಮಾನ ಮಾಡಲಾಗಿದೆ. ಸವಿತಾ ಸಮಾಜದವರು ಸೆಲೂನ್‌ಗಳನ್ನ ತೆರೆಯಲು ಶೇ 4 ರ ಬಡ್ಡಿದರದಲ್ಲಿ ಹತ್ತು ಲಕ್ಷ ರೂ ವರೆಗೆ ಸಾಲ ಮತ್ತು ಸಹಾಯಧನ ನೀಡಲಾಗುತ್ತದೆ. ಬೆಂಗಳೂರು, ಮೈಸೂರು ದೋಬಿ ಘಾಟ್‌ಗಳಲ್ಲಿ ತಲಾ 75 ಲಕ್ಷ ರೂ ವೆಚ್ಚದಲ್ಲಿ ಆಧುನಿಕ ಲಾಂಡ್ರಿಗಳ ಸ್ಥಾಪನೆ ಮತ್ತು ಮಡಿವಾಳ ಸಮುದಾಯದ ನಿರುದ್ಯೋಗಿಗಳಿಗೆ ಆಧುನಿಕ ಲಾಂಡ್ರಿ ಸ್ಥಾಪನೆಗೆ ಶೇ 4. ರ ಬಡ್ಡಿ ದರದಲ್ಲಿ ಐದು ಲಕ್ಷರೂವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.

The post ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು? appeared first on Good News 24x7.

]]>
ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ! https://www.goodnews24x7.com/trisha-vijay-are-roaming-around-without-a-mask/ Fri, 06 Mar 2026 12:00:18 +0000 https://www.goodnews24x7.com/?p=8732 ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

The post ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ! appeared first on Good News 24x7.

]]>

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ ಸಾಧ್ಯತೆ ಇದೆ.

ನಟ ದಳಪತಿ ವಿಜಯ್ ಅವರ ರಾಜಕೀಯ ಜೀವನಕ್ಕಿಂತಲೂ ವೈಯಕ್ತಿಕ ಜೀವನದ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ತ್ರಿಷಾ ಜೊತೆಗಿನ ಒಡನಾಟ. ಈಗಾಗಲೇ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಕೂಡ ಸಂಗೀತಾ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ತ್ರಿಷಾ ಮತ್ತು ವಿಜಯ್ ಅವರು ಖುಲ್ಲಂ ಖುಲ್ಲಾ ಜೊತೆಯಾಗಿ ತಿರುಗಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಅದನ್ನು ಕಂಡು ಅಭಿಮಾನಿಗಳು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಿನಿಮಾ ಕಲಾವಿದರು ರಾಜಕೀಯದಲ್ಲಿ ಯಶಸ್ಸು ಕಂಡ ಸಾಕಷ್ಟು ಉದಾಹರಣೆ ತಮಿಳುನಾಡಿನಲ್ಲಿದೆ. ದಳಪತಿ ವಿಜಯ್ ಅವರು ಟಿವಿಕೆ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಇಳಿದಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ. ಅದಕ್ಕಾಗಿ ಅವರು ಎಲ್ಲ ರೀತಿಯಿಂದಲೂ ತಯಾರಿ ಮಾಡಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ತ್ರಿಷಾ ಜೊತೆ ಕಾಣಿಸಿಕೊಂಡಿದ್ದು ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ.

ದಳಪತಿ ವಿಜಯ್ ಅವರ ಹೆಸರು ತ್ರಿಷಾ ಜೊತೆ ತಳುಕು ಹಾಕಿಕೊಂಡಾಗಲೆಲ್ಲ ಅಭಿಮಾನಿಗಳು ರಕ್ಷಣೆಗೆ ಬರುತ್ತಿದ್ದರು. ವಿಜಯ್ ಮತ್ತು ತ್ರಿಷಾ ಕೇವಲ ಸ್ನೇಹಿತರು ಎಂದು ಫ್ಯಾನ್ಸ್ ವಾದ ಮಾಡುತ್ತಿದ್ದರು. ಗಾಸಿಪ್​​ನಿಂದ ವಿಜಯ್ ಅವರ ರಾಜಕೀಯದ ಭವಿಷ್ಯಕ್ಕೆ ತೊಂದರೆ ಆಗದಿರಲಿ ಎಂದು ಅಭಿಮಾನಿಗಳು ಇಷ್ಟೆಲ್ಲ ಮಾಡುತ್ತಿದ್ದರು. ಆದರೆ ವಿಜಯ್ ಅವರು ಅದನ್ನೆಲ್ಲ ಈಗ ಗಾಳಿಗೆ ತೂರಿದ್ದಾರೆ.

ಇನ್ನೂ ಕೆಲವು ಅಭಿಮಾನಿಗಳು ವಿಜಯ್ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಒಂದು ವೇಳೆ ವಿಜಯ್ ಮತ್ತು ತ್ರಿಷಾ ನಡುವೆ ಸಂಬಂಧ ಇರುವುದೇ ಹೌದಾದರೆ ಅದು ಇಂದಿಲ್ಲ ನಾಳೆ ಬಹಿರಂಗ ಆಗಲೇಬೇಕು. ಅದನ್ನು ರಾಜಕೀಯ ವಿರೋಧಿಗಳು ದಾಳವಾಗಿ ಉಪಯೋಗಿಸಿಕೊಳ್ಳುವುದಕ್ಕೂ ಮುನ್ನವೇ ಸ್ವತಃ ವಿಜಯ್ ಅವರು ಈಗ ಬಹಿರಂಗಪಡಿಸಿದ್ದಾರೆ ಎಂಬುದು ಕಟ್ಟಾ ಅಭಿಮಾನಿಗಳ ವಾದ.

ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಈ ಸಂದರ್ಭದಲ್ಲೇ ವಿಜಯ್ ಅವರು ತ್ರಿಷಾ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ರೀತಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅವರಿಬ್ಬರು ತಮ್ಮ ಸಂಬಂಧವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂಬುದು ನೆಟ್ಟಿಗರವಾದ.

The post ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ! appeared first on Good News 24x7.

]]>
2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು? https://www.goodnews24x7.com/what-did-the-people-of-the-state-get-in-the-2026-budget/ Fri, 06 Mar 2026 11:47:36 +0000 https://www.goodnews24x7.com/?p=8725 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

The post 2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು? appeared first on Good News 24x7.

]]>

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು ಇಂದು ಮಂಡನೆಯಾಗಲಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಮೇಲಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಹಾಗೂ ದೇಶದಲ್ಲಿ ಎರಡನೇ ಅತಿ ಹೆಚ್ಚು ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ತಮ್ಮ ಆಯ-ವ್ಯಯ ಲೆಕ್ಕ ಬಿಚ್ಚಿಟ್ಟಿದ್ದಾರೆ .

ರಾಜ್ಯದ ಕೆಲ ದೇವಸ್ಥಾನಗಳಿಗೂ ಬಜೆಟ್ ನಲ್ಲಿ ಸಿಹಿ ಸುದ್ದಿ ಸಿಕ್ಕಿದೆ. ಕುಕ್ಕೆ ಶ್ರೀ ಸುಬ್ರಮಣ್ಯ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪನೆ ಮಾಡಲಾಗಿದೆ. ಹೊರ ರಾಜ್ಯದ ಪುಣ್ಯ ಕ್ಷೇತ್ರಗಳಲ್ಲಿರುವ ಮುಜರಾಯಿ ಅಧೀನದ ಛತ್ರಗಳ ನವೀಕರಣ, ವಾರಣಾಸಿಯ ಛತ್ರ, ಮಂತ್ರಾಲಯ ಶ್ರೀ ರಾಘವೇಂದ್ರ ದೇವಸ್ಥಾನದ ಛತ್ರ, ಶ್ರೀಶೈಲಂ ಕ್ಷೇತ್ರದ ಛತ್ರ, ತುಳಜಾಪುರ ಕ್ಷೇತ್ರದ ಛತ್ರ ನವೀಕರಣಕ್ಕೆ ನಿರ್ಧಾರ ಮಾಡಿದ್ದಾರೆ. ಮುಜರಾಯಿ ವ್ಯಾಪ್ತಿಯ 259 ಕಲ್ಯಾಣಿಗಳನ್ನು ಪುಮಶ್ಚೇತನಕ್ಕೆ ಕ್ರಮ, ಕಾಶ್ಮೀರದ ಮಾತಾ ವೈಷ್ಣೋದೇವಿ ಯಾತ್ರಿಕರಿಗೆ 5 ಸಾವಿರ ಧನಸಹಾಯ, ಡಿಬಿಟಿ ಮೂಲಕ ಯಾತ್ರಿಕರಿಗೆ ಹಣ ಸಂದಾಯ ಮಾಡಲು ಒಪ್ಪಿಗೆ ನೀಡಲಾಗಿದೆ.

ಈ ವರ್ಷ 2026-27ನೇ ಸಾಲಿನ ರಾಜ್ಯ ಬಜೆಟ್​​ ಮಂಡನೆ ಮಾಡಲಾಗಿದೆ. ಈ ಬಾರಿ ಇಲಾಖೆಗಳಿಗೆ ರೆವಿನ್ಯೂ ಟಾರ್ಗೆಟ್ ನೀಡಲಾಗಿದೆ.

ಸಾರಿಗೆ ಇಲಾಖೆಗೆ: 15500 ಕೋಟಿ ಟಾರ್ಗೆಟ್
ನೊಂದಣಿ ಮುದ್ರಾಂಕ: 29000 ಕೋಟಿ ಟಾರ್ಗೆಟ್
ಅಬಕಾರಿ ಇಲಾಖೆಗೆ: 45000 ಕೋಟಿ ಟಾರ್ಗೆಟ್
ಗಣಿ ಇಲಾಖೆಗೆ: 11000 ಕೋಟಿ ಟಾರ್ಗೆಟ್
ವಾಣಿಜ್ಯ ಇಲಾಖೆಗೆ: 125000 ಕೋಟಿ ಟಾರ್ಗೆಟ್

 

ಬಜೆಟ್ ನಲ್ಲಿ ಕನ್ನಡ ಚಿತ್ರರಂಗಕ್ಕೆ ಕಿರು ಕಾಣಿಕೆ ಕೊಟ್ಟ ರಾಜ್ಯ ಸರ್ಕಾರ!

ಈ ವರ್ಷದ ಬಜೆಟ್​​ನಲ್ಲಿ ಕನ್ನಡ ಚಿತ್ರರಂಗಕ್ಕೆ ರಾಜ್ಯ ಸರ್ಕಾರ ಕಿರು ಕಾಣಿಕೆ ಕೊಟ್ಟಿದೆ. ಫಿಲ್ಮಿ ಸಿಟಿ ಯಲ್ಲಿ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಸಿದ್ದರಾಮಯ್ಯ ಚಿತ್ರರಂಗಕ್ಕೆ ಸಿನಿಮಿತ್ರನ ಕಾಣಿಕೆ ಕೊಟ್ಟಿದ್ದಾರೆ. ಚಿತ್ರರಂಗದ ನೆರವಿಗೆ “ಸಿನಿ ಮಿತ್ರ” ಡಿಜಿಟಲ್ ವ್ಯವಸ್ಥೆ ಜಾರಿಗೆ ಅಸ್ತು ಎನ್ನಲಾಗಿದೆ. ಉತ್ತಮ ಚಿತ್ರಗಳಿಗೆ ಸಬ್ಸಿಡಿಗಾಗಿ 20 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಆದರೆ ಮೈಸೂರಿನ ಫಿಲ್ಮಿ ಸಿಟಿ ಕೆಲಸ ಆರಂಭಿಸುವ ಬಗ್ಗೆ ಬಜೆಟ್ ನಲ್ಲಿ ಸುಳಿವು ಇಲ್ಲ, ಈ ಬಾರಿಯ ಬಜೆಟ್ ನಲ್ಲೂ ಜನತಾ ಟಾಕೀಸ್ ಬಗ್ಗೆ ಸರ್ಕಾರ ಗಮನ ಹರಿಸಿಲ್ಲ.

ರಾಜ್ಯ ಬಜೆಟ್​​ನಲ್ಲಿ ಈ ಬಾರಿ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ?

ಈ ಬಾರಿಯ 2026-27 ನೇ ಸಾಲಿನ ಬಜೆಟ್​​ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ ಘೋಷಣೆ ಮಾಡಿದ್ದಾರೆ ನೋಡಿ.
ಪಶುಸಂಗೋಪನೆ – 4084 ಕೋಟಿ
ಕೃಷಿ ಮತ್ತು ತೋಟಗಾರಿಕೆ – 8373 ಕೋಟಿ
ಆಹಾರ, ನಾಗರೀಕ ಸರಬರಾಜು – 7942 ಕೋಟಿ
ಲೊಕೋಪಯೋಗಿ – 11424 ಕೋಟಿ
ಸಮಾಜ ಕಲ್ಯಾಣ ಇಲಾಖೆ- 18612 ಕೋಟಿ
ಕಂದಾಯ ಇಲಾಖೆ- 19845 ಕೋಟಿ
ಆರೋಗ್ಯ ಕುಟುಂಬ ಕಲ್ಯಾಣ – 17818 ಕೋಟಿ
ಶಿಕ್ಷಣ ಇಲಾಖೆ- 47224 ಕೋಟಿ
ಮಹಿಳಾ ಮಕ್ಕಳ ಕಲ್ಯಾಣ – 34929 ಕೋಟಿ
ಇಂಧನ ಇಲಾಖೆ- 29947 ಕೋಟಿ
ಗ್ರಾಮೀಣಾಭಿವೃದ್ಧಿ ಇಲಾಖೆ- 26559 ಕೋಟಿ
ನೀರಾವರಿ- 22436 ಕೋಟಿ
ನಗರಾಭಿವೃದ್ಧಿ,ವಸತಿ ಇಲಾಖೆ- 22203 ಕೋಟಿ

ಒಳಾಡಳಿತ ಬಂದರು- 23100 ಕೋಟಿ
ಇತರೆ ವೆಚ್ಚ- 172757 ಕೋಟಿ

ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ಹಣ ಮೀಸಲಿಟ್ಟ ಸರ್ಕಾರ

ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ಸರ್ಕಾರ ಹಣ ಮೀಸಲಿಟ್ಟಿದೆ. ಹಾಗಾದ್ರೆ ಯಾವೆಲ್ಲಾ ಯೋಜನೆ ಎಷ್ಟು ಅನುದಾನ ಮೀಸಲಿಟ್ಟಿದ್ದಾರೆ?
ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಹಣ ಮೀಸಲು
ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ಮೀಸಲು
ಗೃಹ ಜ್ಯೋತಿ ಯೋಜನೆಗೆ ಈ ವರ್ಷ 10,578 ಕೋಟಿ ಮೀಸಲು
ಶಕ್ತಿ ಯೋಜನೆಗೆ 5,300 ಕೋಟಿ ಹಣ ಮೀಸಲು
ಯುವ ನಿಧಿಗೆ ಯಾವುದೇ ಅನುದಾನ ಮೀಸಲಿಡದ ಸರ್ಕಾರ

The post 2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು? appeared first on Good News 24x7.

]]>
ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! https://www.goodnews24x7.com/the-reason-why-young-people-are-dying-is-not-the-covid-vaccine-at-all-doctor-reveals-the-real-truththe-reason-why-young-people-are-dying-is-not-the-covid-vaccine-at-all-doctor-reveals-the-real-truth/ Fri, 06 Mar 2026 11:35:34 +0000 https://www.goodnews24x7.com/?p=8713 ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಮರಣಗಳಿಗೆ ಕೋವಿಡ್-19 ಲಸಿಕೆ ಕಾರಣವಾಗಿರಬಹುದೇ? ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮಗಳಲ್ಲಿ…

The post ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! appeared first on Good News 24x7.

]]>

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಮರಣಗಳಿಗೆ ಕೋವಿಡ್-19 ಲಸಿಕೆ ಕಾರಣವಾಗಿರಬಹುದೇ? ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿವೆ. ವೈಜ್ಞಾನಿಕ ಅಧ್ಯಯನಗಳು ಈ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಎಸ್.ಡಿ.ಎಂ ಕ್ಷೇಮವನದ ಮುಖ್ಯ ಸ್ವಾಸ್ಥ್ಯ ಅಧಿಕಾರಿ ಡಾ. ನರೇಂದ್ರ ಕೆ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಹಾಗಾದರೆ ಕೋವಿಡ್ ಲಸಿಕೆಗೂ ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಸಾವಿಗೂ ಸಂಬಂಧವಿದೆಯೇ? ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತವಾಗುವುದಕ್ಕೆ ಕಾರಣವೇನು? ಎಂಬುದನ್ನು ತಿಳಿದುಕೊಳ್ಳಿ.

ಇತ್ತೀಚಿಗೆ ಭಾರತದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ರೀತಿಯ ಮರಣಗಳಿಗೆ ಕೋವಿಡ್- 19 ಲಸಿಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಏನೂ ಅರಿಯದ ಜನ ಇದನ್ನು ಸತ್ಯ ಎಂದು ನಂಬಿದ್ದಾರೆ. ಆದರೆ ವೈಜ್ಞಾನಿಕ ಅಧ್ಯಯನಗಳು ಈ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡಿದೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಂಯುಕ್ತವಾಗಿ ನಡೆಸಿದ ಅಧ್ಯಯನದ ಪ್ರಾಥಮಿಕ ಫಲಿತಾಂಶಗಳು ಇದಕ್ಕೆ ಸ್ಪಷ್ಟ ಉತ್ತರ ನೀಡಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಎಸ್.ಡಿ.ಎಂ ಕ್ಷೇಮವನದ ಮುಖ್ಯ ಸ್ವಾಸ್ಥ್ಯ ಅಧಿಕಾರಿ ಡಾ. ನರೇಂದ್ರ ಕೆ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ.

ಕೋವಿಡ್ ಲಸಿಕೆಗೂ ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಸಾವಿಗೂ ಸಂಬಂಧವಿದೆಯೇ?
ಡಾ. ನರೇಂದ್ರ ಕೆ ಶೆಟ್ಟಿ ಹೇಳುವ ಪ್ರಕಾರ, ಅಧ್ಯಯನದ ಪ್ರಾಥಮಿಕ ಫಲಿತಾಂಶಗಳು ಕೋವಿಡ್- 19 ಲಸಿಕೆ ಮತ್ತು ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಮರಣಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂಬುದನ್ನು ವಿಶ್ಲೇಷಿಸಿದೆ. ಬದಲಾಗಿ, ಯುವಜನರಲ್ಲಿ ಕಾಣಿಸಿಕೊಳ್ಳುವ ಆಕಸ್ಮಿಕ ಹೃದಯಾಘಾತ ಮತ್ತು ಹಠಾತ್ ಆಗಿ ಸಂಭವಿಸುವ ಸಾವು (Sudden Cardiac Death – SCD) ಅನೇಕ ಕಾರಣಗಳಿಂದ ಉಂಟಾಗುತ್ತಿರಬಹುದು ಎಂದು ವಿವರಿಸಿದೆ. ಪಾಶ್ಚಾತ್ಯ ದೇಶಗಳಲ್ಲಿ ನಡೆದ ಹಲವು ಅಧ್ಯಯನಗಳು ಹೃದಯ ಸ್ನಾಯುಕೋಶದ ರೋಗಗಳು (ಕಾರ್ಡಿಯೊಮಯೋಪಥಿಗಳು) ಮತ್ತು ಹೃದಯದ ವಿದ್ಯುದ್ವಿಚಲನ ವ್ಯತ್ಯಯಗಳು (ಅರಿದಮಿಯಾಸ್) ಯುವಜನತೆಯಲ್ಲಿ ಹೆಚ್ಚುತ್ತಿರುವ ಪ್ರಮುಖ ಕಾರಣಗಳೆಂದು ಗುರುತಿಸಿವೆ. ಆದರೆ ಭಾರತೀಯ ಪರಿಸ್ಥಿತಿಯಲ್ಲಿ ಇಂತಹ ಸಮಗ್ರ ಅಧ್ಯಯನಗಳ ಕೊರತೆ ಇತ್ತು. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದಲೇ AIIMS– ICMR ಅಧ್ಯಯನವನ್ನು ಕೈಗೆತ್ತಿಕೊಳ್ಳಲಾಯಿತು. ಅಧ್ಯಯನದಲ್ಲಿ ಪ್ರಾಥಮಿಕವಾಗಿ ಕಂಡುಬಂದ ಮಾಹಿತಿಗಳು, ಬದಲಾಯಿಸಲಾಗದ ಕಾರಣಗಳ ಜೊತೆಗೆ ಬದಲಾಯಿಸಬಹುದಾದ ಜೀವನಶೈಲಿ ಅಂಶಗಳು ಯುವಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂಬುದನ್ನು ಸ್ಪಷ್ಟಪಡಿಸುತ್ತವೆ.

ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತವಾಗುವುದಕ್ಕೆ ಕಾರಣವೇನು?
ಧೂಮಪಾನ, ಮದ್ಯಪಾನ, ದೈಹಿಕ ಚಟುವಟಿಕೆಯ ಕೊರತೆ, ಅಸಮರ್ಪಕ ನಿದ್ರೆ ಮತ್ತು ನಿರಂತರ ಮಾನಸಿಕ ಒತ್ತಡವು ಯುವಜನರಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತವೆ. ಮದ್ಯಪಾನ ಮತ್ತು ಧೂಮಪಾನವು ಕೊರೊನರಿ ಆರ್ಟರಿ ರೋಗ, ಹೃದಯಾಘಾತ (ಮೈಕಾರ್ಡಿಯಲ್ ಇನ್ಫಾರ್ಕ್ಷನ್) ಮತ್ತು ಹೃದಯ ಬಡಿತದ ಅಸಮತೋಲನಗಳಿಗೆ ಕಾರಣವಾಗುತ್ತವೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ ದೀರ್ಘಕಾಲದ ಕೆಲಸ, ನಿರ್ದಿಷ್ಟ ಸಮಯವನ್ನು ಕೆಲಸಕ್ಕೆ ಇಡದಿರುವುದು ಮತ್ತು ಕೆಲಸದ ಒತ್ತಡವು ಹೃದಯ ರಕ್ತನಾಳ ಸಂಬಂಧಿತ ಸಂಕೀರ್ಣತೆಗಳನ್ನು ಉಂಟುಮಾಡುತ್ತವೆ. ಮಧ್ಯವಯಸ್ಕರಿಗೆ ಹೋಲಿಸಿದರೆ, ಹೃದಯಾಘಾತಕ್ಕೆ ಒಳಗಾಗುವ ಯುವ ವಯಸ್ಕರು ಹೆಚ್ಚು ಮಾನಸಿಕ ಒತ್ತಡವನ್ನು ಅನುಭವಿಸಿರುವುದು ವರದಿಯಲ್ಲಿ ಬಹಿರಂಗವಾಗಿದ್ದು, ಒತ್ತಡ ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ದಾರಿ ಮಾಡಿಕೊಡುವ ಪ್ರಮುಖ ಕಾರಣ ಎಂಬುದು ತಿಳಿದು ಬಂದಿದೆ.

ಲಸಿಕೆಗಳ ಕುರಿತು ಹರಡುತ್ತಿರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಮಾತ್ರವಲ್ಲದೆ, ತಡೆಗಟ್ಟಬಹುದಾದ ಅಪಾಯಕಾರಕ ಅಂಶಗಳತ್ತ ಗಮನ ಹರಿಸಬೇಕಾಗಿದೆ. ಅದಕ್ಕಾಗಿಯೇ ಯುವಜನರಲ್ಲಿ ಮುಂಚಿತ ತಪಾಸಣೆ, ಆರೋಗ್ಯಕರ ಜೀವನಶೈಲಿಯ ಅಳವಡಿಕೆ, ಸಕಾರಾತ್ಮಕ ಕೆಲಸದ ವಾತಾವರಣ ನಿರ್ಮಾಣ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಅಕಾಲಿಕ ಮರಣಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ಭಾರತದಲ್ಲಿ ಯುವ ವಯಸ್ಕರ ಆಕಸ್ಮಿಕ ಮರಣಗಳ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಇನ್ನಷ್ಟು ಸಂಶೋಧನೆಗಳ ಅಗತ್ಯವಿದೆ. ಇಂತಹ ಅಧ್ಯಯನಗಳ ಆಧಾರದ ಮೇಲೆ ರೂಪುಗೊಳ್ಳುವ ಸ್ಪಷ್ಟ ಉತ್ತರ ಯುವಜನರ ಅಮೂಲ್ಯ ಜೀವಗಳನ್ನು ರಕ್ಷಿಸಲು ಸಹಾಯಕವಾಗಬಹುದು.

 

The post ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! appeared first on Good News 24x7.

]]>
ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ! https://www.goodnews24x7.com/young-hearts-are-facing-a-blow-heart-attack-risk-is-increasing-in-40-year-olds/ Fri, 06 Mar 2026 11:23:50 +0000 https://www.goodnews24x7.com/?p=8719 ಪರೇಲ್‌ನ ಗ್ಲೆನೀಗಲ್ಸ್ ಆಸ್ಪತ್ರೆಯ ನಿರ್ದೇಶಕ ಮತ್ತು ಹೃದ್ರೋಗ ತಜ್ಞ ಡಾ. ರಾಹುಲ್ ಗುಪ್ತಾ, ಮಾದರಿಗಳಲ್ಲಿನ ಸ್ಪಷ್ಟ ಬದಲಾವಣೆಯನ್ನು ಗಮನಿಸಿದ್ದಾರೆ. ಈಗ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೃದಯಾಘಾತದ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಆಘಾತಕ್ಕೆ ಎದುರಾಗಿರುವ ಕಾರಣಗಳು ಇಲ್ಲಿವೆ. ಮೊದಲೆಲ್ಲಾ 60 ವರ್ಷ…

The post ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ! appeared first on Good News 24x7.

]]>

ಪರೇಲ್‌ನ ಗ್ಲೆನೀಗಲ್ಸ್ ಆಸ್ಪತ್ರೆಯ ನಿರ್ದೇಶಕ ಮತ್ತು ಹೃದ್ರೋಗ ತಜ್ಞ ಡಾ. ರಾಹುಲ್ ಗುಪ್ತಾ, ಮಾದರಿಗಳಲ್ಲಿನ ಸ್ಪಷ್ಟ ಬದಲಾವಣೆಯನ್ನು ಗಮನಿಸಿದ್ದಾರೆ. ಈಗ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೃದಯಾಘಾತದ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಆಘಾತಕ್ಕೆ ಎದುರಾಗಿರುವ ಕಾರಣಗಳು ಇಲ್ಲಿವೆ.

ಮೊದಲೆಲ್ಲಾ 60 ವರ್ಷ ವಯಸ್ಸು ಸ್ವಲ್ಪ ಡೇಂಜರ್ ಅಂತ ಪರಿಗಣಿಸಲಾಗುತ್ತಿತ್ತು, ಏಕೆಂದರೆ ಆ ವಯಸ್ಸಿನಲ್ಲಿ ಅನೇಕರು ಹೃದಯಾಘಾತದಿಂದ ಮತ್ತು ಇನ್ನಿತರ ಕಾಯಿಲೆಗಳಿಂದ ಹಠಾತ್ ಸಾವನ್ನಪ್ಪುತ್ತಿದ್ದರು. ಆದರೆ ಈಗ ಇವೆಲ್ಲಾ ಕಾಯಿಲೆಗಳಿಗೆ ಯಾವುದೇ ರೀತಿಯ ವಯಸ್ಸಿನ ಇತಿಮಿತಿ ಇಲ್ಲದಂತಾಗಿದೆ. ಈಗೆಲ್ಲಾ ಕೊವಿಡ್-19 ಸಾಂಕ್ರಾಮಿಕ ರೋಗದ ಹಾವಳಿಯ ನಂತರದಲ್ಲಿ 30-40 ವಯಸ್ಸಿನ ಜನರು ಸಹ ಅನೇಕರು ಹೃದಯಾಘಾತಕ್ಕೆ ಬಲಿಯಾಗಿರುವ ಅಹಿತಕರ ಘಟನೆಗಳನ್ನು ನೋಡುತ್ತಿದ್ದೇವೆ. ಪ್ರಮುಖ ನಗರಗಳು ಮತ್ತು ಸಣ್ಣ ಪಟ್ಟಣಗಳಲ್ಲಿ, 40 ವರ್ಷದೊಳಗಿನ ಜನರಲ್ಲಿ ಹೃದಯಾಘಾತದಲ್ಲಿ ಸ್ಥಿರವಾದ ಏರಿಕೆ ಕಂಡು ಬಂದಿದೆ ಎಂದು ಹೃದ್ರೋಗ ತಜ್ಞರು ವರದಿ ಮಾಡಿದ್ದಾರೆ. ಒಂದು ಅಧ್ಯಯನದ ಪ್ರಕಾರ, ಹೃದಯ ಸಂಬಂಧಿ ಕಾಯಿಲೆಗಳು ದೇಶದಲ್ಲಿ ಸಾವಿಗೆ ಪ್ರಮುಖ ಕಾರಣವಾಗಿ ಇಲ್ಲಿವೆ.

ಹೃದ್ರೋಗ ತಜ್ಞ ಮತ್ತು ಹಾರ್ಟ್‌ಸ್ಟ್ರಾಂಗ್‌ನ ಲೇಖಕ ಡಾ. ಕೌಶಲ್ ಛತ್ರಪತಿ ಅವರು ‘ಈಗೆಲ್ಲಾ 40 ವರ್ಷ ವಯಸ್ಸಿನೊಳಗಿನ ಜನರು ಹೆಚ್ಚು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಸಾಮಾನ್ಯವಾಗಿದೆ. ಇದಕ್ಕೆ ಅನೇಕ ಕಾರಣಗಳಿದ್ದು, ಅವುಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದು, ಕೆಟ್ಟ ಆಹಾರ ಸೇವನೆ, ಕೆಟ್ಟ ಚಟಗಳು ಮತ್ತು ಆನುವಂಶಿಕ ಅಂಶಗಳು ಸಹ ಸೇರಿವೆ. ಉದಾಹರಣೆಗೆ, ವಾಯುಮಾಲಿನ್ಯ ಎಂಬ ಕಾರಣವನ್ನು ತೆಗೆದುಕೊಂಡರೆ ದೆಹಲಿಯಲ್ಲಿ ವಾಸಿಸುವ ಜನರು ಕೆಟ್ಟ ಗಾಳಿಯನ್ನು ಸೇವಿಸಿದರೆ ಅವರು ಪ್ರತಿದಿನ 20 ರಿಂದ 50 ಸಿಗರೇಟ್ ಸೇದುವಂತೆ ಆಗುತ್ತದೆ,’ ಅಂತ ಹೇಳಿದರು.

ಪರೇಲ್‌ನ ಗ್ಲೆನೀಗಲ್ಸ್ ಆಸ್ಪತ್ರೆಯ ನಿರ್ದೇಶಕ ಮತ್ತು ಹೃದ್ರೋಗ ತಜ್ಞ ಡಾ. ರಾಹುಲ್ ಗುಪ್ತಾ, ಮಾದರಿಗಳಲ್ಲಿನ ಸ್ಪಷ್ಟ ಬದಲಾವಣೆಯನ್ನು ಗಮನಿಸಿದ್ದಾರೆ. ಈಗ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೃದಯಾಘಾತದ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಈಗ, ಅನೇಕ ಜನರು ಮಧುಮೇಹ, ಅಧಿಕ ರಕ್ತದೊತ್ತಡ ಅಥವಾ ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟಗಳಂತಹ ಅಪಾಯಕಾರಿ ಅಂಶಗಳಿಂದಲೂ ಸಹ ಬಳಲುತ್ತಿದ್ದಾರೆ. ಅಲ್ಲದೆ, ಅತಿಯಾದ ಒತ್ತಡ, ಧೂಮಪಾನ, ವೇಪಿಂಗ್, ಸಾಕಷ್ಟು ನಿದ್ರೆ ಮಾಡದಿರುವುದು, ಕಳಪೆ ಆಹಾರ ಪದ್ಧತಿ, ಬೊಜ್ಜು ಮತ್ತು ದೀರ್ಘ ಕೆಲಸದ ಸಮಯದಿಂದಾಗಿಯೂ ಸಹ ಅವರು ಹೃದಯಾಘಾತದಿಂದ ಬಳಲಬಹುದು,’ ಅಂತ ಹೇಳಿದರು.

ವಾಯುಮಾಲಿನ್ಯ!
ವಾಯುಮಾಲಿನ್ಯವು ರಕ್ತನಾಳಗಳನ್ನು ಉಬ್ಬಿಸುತ್ತದೆ, PM2.5 ನಂತಹ ಸೂಕ್ಷ್ಮ ಕಣಗಳು ರಕ್ತಪ್ರವಾಹಕ್ಕೆ ಪ್ರವೇಶಿಸಿ ಹೆಪ್ಪುಗಟ್ಟುವಿಕೆಯ ರಚನೆಯನ್ನು ಹೆಚ್ಚಿಸುತ್ತವೆ. ದೆಹಲಿಯಂತಹ ಹೆಚ್ಚು ಕಲುಷಿತ ನಗರಗಳಲ್ಲಿ ವಾಸಿಸುವುದರಿಂದ ನಿವಾಸಿಗಳು ನಿರಂತರ ಹೃದಯರಕ್ತನಾಳದ ಒತ್ತಡಕ್ಕೆ ಒಳಗಾಗುತ್ತಾರೆ. ದೀರ್ಘಕಾಲೀನ ಮಾನ್ಯತೆ ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.
ಈ ಲಕ್ಷಣಗಳನ್ನು ಹೆಚ್ಚಾಗಿ ಈಗಿನ ಯುವಕರು ನಿರ್ಲಕ್ಷಿಸುತ್ತಾರೆ!
ಡಾ. ರಾಹುಲ್ ಗುಪ್ತಾ ‘ಅನೇಕ ಯುವಕರು ಎದೆಯ ಅಸ್ವಸ್ಥತೆ, ಉಸಿರಾಟದ ತೊಂದರೆ, ನಿರಂತರ ಆಯಾಸ ಅಥವಾ ತೋಳು ಮತ್ತು ದವಡೆಯ ನೋವಿನಂತಹ ಲಕ್ಷಣಗಳನ್ನು ಗಮನ ಕೊಡಲು ವಿಫಲರಾಗುತ್ತಾರೆ ಮತ್ತು ಸರಿಯಾದ ಸಮಯಕ್ಕೆ ವೈದ್ಯರನ್ನು ಸಂಪರ್ಕಿಸುವುದಿಲ್ಲ,’ ಅಂತ ಹೇಳುತ್ತಾರೆ. ಡಾ. ಗುಪ್ತಾ ‘40 ಅಥವಾ 65 ವರ್ಷ ವಯಸ್ಸಿನವರಾಗಿದ್ದರೂ, ವೈದ್ಯರು ಸೂಚಿಸಿದಂತೆ ನಿಯಮಿತವಾಗಿ ಹೃದಯ ತಪಾಸಣೆಗೆ ಒಳಗಾಗಬೇಕು. ನಿಮ್ಮ ಕುಟುಂಬದಲ್ಲಿ ಹೃದಯಾಘಾತದ ಇತಿಹಾಸವಿದ್ದರೆ, 25 ವರ್ಷದ ನಂತರ ಕಿರಿಯ ವಯಸ್ಸಿನಲ್ಲಿಯೇ ಸ್ಕ್ರೀನಿಂಗ್ ಅನ್ನು ಪ್ರಾರಂಭಿಸಿ,’ ಅಂತ ಸಲಹೆ ನೀಡುತ್ತಾರೆ.

 

The post ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ! appeared first on Good News 24x7.

]]>
ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳೇನು? https://www.goodnews24x7.com/what-are-the-new-programs-announced-in-the-budget/ Fri, 06 Mar 2026 10:13:10 +0000 https://www.goodnews24x7.com/?p=8704 ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳು ಯಾವುವು? 1.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ…

The post ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳೇನು? appeared first on Good News 24x7.

]]>

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ.

ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳು ಯಾವುವು?
1.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ ಸಂಸ್ಕರಣೆ, ಕೃಷಿ ತ್ಯಾಜ್ಯಗಳ ಮರುಬಳಕೆ, ಮಾರುಕಟ್ಟೆ ಸಂಪರ್ಕ ಬಲಪಡಿಸಲು ಹೊಸ ಕಾರ್ಯಕ್ರಮ ಘೋಷಿಸಿದ್ದಾರೆ. ರೈತರ ಸ್ಥಿರ ಮತ್ತು ಹೆಚ್ಚುವರಿ ಆದಾಯ ಮೂಲ ರಚಿಸಲು ಈ ಯೋಜನೆ ಪೂರಕವಾಗಿದೆ. ಈ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ಬರಲಿದೆ.

2.ವಸುಧಾಮೃತ ಕಾರ್ಯಕ್ರಮ: ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮುಂದಿನ ಮೂರು ವರ್ಷಗಳಲ್ಲಿ ಈ ಕಾರ್ಯಕ್ರಮ ಜಾರಿಯಾಗಲಿದೆ.

3.ಸಸ್ಯ ಸಂಜೀವಿನಿ ಯೋಜನೆ: ಪರಿಸರ ಸ್ನೇಹಿ ಜೈವಿಕ ಪೀಡನಾಶಕ, ಜೈವಿಕ ಕೀಟನಾಶಕಗಳ ಜೊತೆ ಇತರೆ ಸುರಕ್ಷಿತ ನಿರ್ವಹಣಾ ಕ್ರಮಗಳಿಗಾಗಿ ಈ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿ ಮಾಡುವ ಉದ್ದೇಶವಿದೆ.

4.ಫಲಧಾರೆ ಕಾರ್ಯಕ್ರಮ: ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆ ನಿವಾರಣೆಗೆ ಈ ಕಾರ್ಯಕ್ರಮದಡಿ ಶಿಬಿರಗಳ ಆಯೋಜನೆ ಮಾಡಲಾಗುವುದು. 5 ಕೋಟಿ ರೂ. ವೆಚ್ಚದಲ್ಲಿ 1000 ಗ್ರಾಮ ಪಂಚಾಯತಿಗಳಲ್ಲಿ “ಫಲಧಾರೆ” ಎಂಬ ಹೆಸರಿನಲ್ಲಿ ಶಿಬಿರ ನಡೆಸಲಾಗುವುದು.

5.ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ: 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 11 ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ ಮಾಡುವ ಉದ್ದೇಶದಿಂದ 2,500 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೊಳಿಸಲಾಗುವುದು.

6.ಕೇರಳ ಮಾದರಿಯ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಗೃಹಾಧಾರಿತ ಉಪಶಮನ ಆರೈಕೆ:
ಮನೆಗಳಲ್ಲೇ ಚಿಕಿತ್ಸಾ ಸೇವೆ, ಗಂಭೀರ ದೀರ್ಘಕಾಲೀನ, ಮಾರಣಾಂತಿಕ ಕಾಯಿಲೆಗಳಿರುವ ರೋಗಿಗಳಿಗೆ ಈ ಯೋಜನೆಯಡಿ ಆರೈಕೆ ಮಾಡಲಾಗುವುದು. Palliym India ಸಂಸ್ಥೆಯ ಸಹಯೋಗದೊಂದಿಗೆ ಯೋಜನೆಯನ್ನು ಜಾರಿಗೊಳಿಸಲಾಗುವುದು

7.ಮುಖ್ಯಮಂತ್ರಿ ಸೌರ ಕೃಷಿ ಯೋಜನೆ:
ಈ ಯೋಜನೆಯಡಿ ಕೆಪಿಟಿಸಿಎಲ್ ಉಪಕೇಂದ್ರಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳ ನಿರ್ಮಾಣ ಮಾಡಲಾಗುವುದು. ಅಂದಾಜು 10,500 ಕೋಟಿ ರೂ. ವೆಚ್ಚದಲ್ಲಿ 300 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳ ಆರಂಭಗೊಳಿಸಲು ನಿರ್ಧರಿಸಲಾಗಿದೆ.

The post ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳೇನು? appeared first on Good News 24x7.

]]>
ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*! https://www.goodnews24x7.com/innocent-dalit-boys-who-went-to-file-a-complaint-were-c-by-the-policeinnocent-dalit-boys-who-went-to-file-a-complaint-were-attacked-by-the-police/ Fri, 06 Mar 2026 10:06:12 +0000 https://www.goodnews24x7.com/?p=8696 ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು…

The post ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*! appeared first on Good News 24x7.

]]>

ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯರು ನ್ಯಾಯ ಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

 

 

 

 

 

 

ಮೊಬೈಲ್ ಕಳ್ಳತನ ಆಗಿದೆ ಎನ್ನಬೇಡ ಕಳುವಾಗಿದೆ ಎಂದು ದೂರು ಕೊಡು ಮಗನೇಇಲ್ಲ ಅಂದ್ರೆ ನಿನ್ನ ಮೇಲೆ ಕೇಸ್ ದಾಖಲಿಸುತ್ತೇನೆ ಎಂದು ಅಶ್ಲೀಲ ಪದಗಳಿಂದ ನಿಂದಿಸಿ ನನ್ನ ಕಪಾಲಕ್ಕೆ 10-15 ಬಾರಿ S I ,ಆಕಾಶ್ ಅವರು ಹೊಡೆದರು ಆ ವೇಳೆಯಲ್ಲಿ ಸಬ್ ಇನ್ಸೆಕ್ಟರ್ ಅವರು ಮದ್ಯಪಾನ ಮಾಡಿದ್ದರು ಅವರ ಜೊತೆಯಲ್ಲೇ ಇದ್ದ ಪೊಲೀಸ್ಪೇದೆ ಶಿವಕುಮಾರ್ ಹಾಸನ್ ಅವರು ನನಗೆ ಬೂಟಿಂದ ಹೊಡೆದರೆ ಹೇಗಾಗುತ್ತದೆ ಗೊತ್ತಾ ಮಗನೆ ನಾಟಕ ಆಡಿಕೊಂಡು ಸ್ಟೇಷನ್ ಗೆ ಬಂದಿದ್ದೀರ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಮೊದಲೇ ಕುಡಿದ ನಶೆಯಲ್ಲಿದ್ದ ಆಕಾಶ್ ದೂರುದರರನ್ನೇ ನೀವು ಕುಡಿದುಬಂದಿದ್ದೀರ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಮಾಡಿಸಿದ್ದಾರೆ ಡಾಕ್ಟರ್ ಇವರು ಕುಡಿದಿಲ್ಲ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಗಾಬರಿ ಗೊಂಡಿದ್ದ ಶಿವರಾಜುಗೆ ಬಿಪಿ ಜಾಸ್ತಿ ಇದೆ ಎಂದಾಗ ಠಾಣೆಗೆ ಕರೆದುಕೊಂಡು ಬಂದು ಮಧ್ಯರಾತ್ರಿ 1.30 ರ ವೇಳೆಯಲ್ಲಿ ಬೈಕ್ ಕಿತ್ತುಕೊಂಡು ಬಿಟ್ಟು ಕಳಿಸಿದ್ದಾರೆ.

ಇದರಿಂದ ನೋವು ಅನುಭವಿಸಿದ ಶಿವರಾಜು ಕೊಳ್ಳೆಗಾಲದ ಆಸ್ಪತ್ರೆಯಲ್ಲಿ ಮೆಡಿಕಲ್ ಸರ್ಟಿಫಿಕೇಟ್ ಮಾಡಿಸಿ ಆನ್ವೆನ್ ನಲ್ಲಿ ಸಬ್ ಇನ್ಸೆಕ್ಟರ್ ಹಾಗೂ ಪೊಲೀಸ್ ಪೇದೆ ವಿರುದ್ಧ ದೂರು ದಾಖಲಿಸಿದ್ದಾರೆ ನಾನು ಬಡವ ಕೂಲಿ ಮಾಡಿದರೆ ಉಂಟು ಇಲ್ಲ ಅಂದರೆ ಇಲ್ಲ ಹೀಗಿರುವಾಗ ಸಬ್ ಇನ್ನೆ ಕ್ಟರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ನನಗೆ ಏನಾದರೂ ತೊಂದರೆ ಆದರೆ ಅವರೇ ನೇರ ಹೊಣೆ ಎಂದು ಪತ್ರಿಕೆ ಜೊತೆ ತಮ್ಮ ಅಳಲನ್ನು ತೋಡಿಕೊಂಡರು ತಕ್ಷಣ ಮೇಲಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನೊಂದ ಶಿವರಾಜುಗೆ ನ್ಯಾಯ ಕೊಡಿಸುವರೇ ಕಾದು ನೋಡೋಣ.ರು ನ್ಯಾಯ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

The post ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*! appeared first on Good News 24x7.

]]>
ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್​ ಸಿಗ್ನಲ್​ ! https://www.goodnews24x7.com/green-signal-for-appointment-of-2000-teaching-staff-in-government-colleges8693-2/ Fri, 06 Mar 2026 08:56:28 +0000 https://www.goodnews24x7.com/?p=8693   2026ನೇ ಸಾಲಿನ ಕರ್ನಾಟಕ ಬಜೆಟ್ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದೆ. ಎಡಿಬಿ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಅಡಿಯಲ್ಲಿ 40 ಸರ್ಕಾರಿ ಪ್ರಥಮ ದರ್ಜೆ…

The post ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್​ ಸಿಗ್ನಲ್​ ! appeared first on Good News 24x7.

]]>

 

2026ನೇ ಸಾಲಿನ ಕರ್ನಾಟಕ ಬಜೆಟ್ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದೆ. ಎಡಿಬಿ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಅಡಿಯಲ್ಲಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್‌ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಉತ್ತೇಜಿಸಲು ಒಂಬತ್ತು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಬೋಧಕ ಸಿಬ್ಬಂದಿಯ ಕೊರತೆ ನೀಗಿಸಲು ಸರ್ಕಾರಿ ಕಾಲೇಜುಗಳಲ್ಲಿ 2,000 ಹುದ್ದೆಗಳನ್ನು ಹಾಗೂ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಒದಗಿಸಲಾಗುವುದು. ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್‌ ಮತ್ತು 3 ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ 31 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲಾಗುವುದು. ರಾಜ್ಯದಾದ್ಯಂತ ಹೊಸ ಕಾಲೇಜುಗಳ ಸ್ಥಾಪನೆ ಮತ್ತು ತಾಂತ್ರಿಕ ಕೋರ್ಸ್‌ಗಳಾದ ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌, ಮಷಿನ್‌ ಲರ್ನಿಂಗ್‌ ಅನ್ನು ಪರಿಚಯಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಗುರಿಯನ್ನು ಬಜೆಟ್ ಹೊಂದಿದೆ.

The post ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್​ ಸಿಗ್ನಲ್​ ! appeared first on Good News 24x7.

]]>
ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ! https://www.goodnews24x7.com/kumaranna-inducts-an-opponent-of-an-alliance-party-into-jdskumaranna-inducts-an-opponent-of-an-alliance-party-into-jds/ Thu, 05 Mar 2026 13:15:35 +0000 https://www.goodnews24x7.com/?p=8689   ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಇದ್ದರೂ ಸಹ…

The post ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ! appeared first on Good News 24x7.

]]>

 

ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಇದ್ದರೂ ಸಹ ಬಂಡಾಯ ನಾಯಕ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್​​ಡಿ ದೇವೇಗೌಡ, ನಿಖಿಲ್​ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡ ಬಳಿಕ ಮಾತನಾಡಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ವಿಜಯ್ ಕುಮಾರ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೆನೆ. ಮುಂದೆ ಒಂದು ದಿನ ಪಕ್ಷ ಸೇರುವ ಸಮಯ ಬರುತ್ತೆ ಎಂದು ಹೇಳಿದ್ದೆ. ದುಡಿಕೆ ರಾಜಕೀಯ ಜೀವನವನ್ನ ಹಾಳು ಮಾಡಬಾರದು.ಒಳ್ಳೆಯ ಉದ್ದೇಶಕ್ಕೆ ನಾವು ಕೈ ಜೋಡಿಸೊದ್ದೇವೆ. ಮಾಲೂರು ಅಭಿವೃದ್ಧಿಗೆ ಹೊಸ ಚೈತನ್ಯ ತುಂಬಬೇಕು. ವಿಧಾನಸಭಾ ಚುನಾವಣೆ ಇನ್ನೂ ದೂರ ಇದೆ. ಅದಕ್ಕೂ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಇದೆ. ಅದು ಕಾರ್ಯಕರ್ತರ ಚುನಾವಣೆಯಾಗಿದೆ. ಮಾಲೂರು ಕ್ಷೇತ್ರದ ಕೆಲವರು ಕಾರಣಾಂತರದಿಂದ ಪಕ್ಷವನ್ನ ಬಿಟ್ಟು ಹೋಗಿದ್ರು. ಇವತ್ತು ಎಲ್ಲರು ಮತ್ತೆ ಪಕ್ಷ ಸೇರಿದ್ದಾರೆ. ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೆತ್ರದ ಬಿಜೆಪಿ ಟಿಕೆಟ್​ ಹೂಡಿ ವಿಜಯ್ ಕುಮಾರ್ ಅವರ ಬದಲಿಗೆ ಕೆ.ಎಸ್. ಮಂಜುನಾಥ್ ಗೌಡ ಅವರಿಗೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡು ಹೂಡಿ ವಿಜಯ್ ಕುಮಾರ್ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಅವರ ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಯಾಕಂದ್ರೆ, ಕಾಂಗ್ರೆಸ್​​​ನ ನಂಜೇಗೌಡ ಅವರು ಕೇವಲ 250 ಮತಗಳಿಂದ ಮಾತ್ರ ಗೆದ್ದಿದ್ದರು. ಒಂದು ವೇಳೆ ಹೂಡಿ ವಿಜಯ್ ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡದಿದ್ದರೆ ಬಿಜೆಪಿ ಗೆಲ್ಲುತ್ತಿತ್ತು.

ಹೂಡಿ ವಿಜಯ್​​ ಕುಮಾರ್​​ ಜೆಡಿಎಸ್​​ ಸೇರ್ಪಡೆಗೆ ಸ್ಥಳೀಯ ಬಿಜೆಪಿ ನಾಯಕರು, ಮಂಜುನಾಥ್ ಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಜುನಾಥ್ ಗೌಡ ಆಕ್ರೋಶ ವ್ಯಕ್ತಪಡಿಸಿ, ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮವನ್ನು ಮುರಿಯುತ್ತಿದ್ದಾರೆ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯ ನಡುವೆ ಇದು ಬಿರುಕು ಉಂಟುಮಾಡಿದೆ ಎಂಬ ಆತಂಕ ವ್ಯಕ್ತವಾಗಿದೆ.ಮಿತ್ರ ಪಕ್ಷ ಬಿಜೆಪಿ​ ವಿರೋಧದ ನಡುವೆಯೂ ಹೂಡಿ ವಿಜಯ್ ಕುಮಾರ್ ಅವರನ್ನು ಜೆಡಿಎಸ್​​​ಗೆ ಸೇರಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಮಿತ್ರ ಪಕ್ಷಗಳ ನಡುವೆ ಸಂಬಂಧ ಹೇಗಿರುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

The post ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ! appeared first on Good News 24x7.

]]>