ಸುಭಾಷ್ ಪವರ್ ಸ್ಟೇಷನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ- ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚನೆ.

ಮೈಸೂರು : ಕಬಿನಿಯ ಸರ್ಕಾರಿ ಜಾಗವನ್ನ ಅಡವಿಟ್ಟು ಸಾಲ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಸುಭಾಷ್ ಪವರ್ ಸ್ಟೇಷನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಅಧಿಕಾರಿಗಳಿಗೆ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸೂಚನೆ ನೀಡಿದ್ದಾರೆ.

ಸುಭಾಷ್ ಪವರ್ ಸ್ಟೇಷನ್ ಕಂಪನಿ ಕಬಿನಿ ಜಲಾಶಯದ ಒಳಗಿನ ಸರ್ಕಾರಿ ಭೂಮಿ ಲಪಟಾಯಿಸುವ ಹುನ್ನಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಈ ಕುರಿತು ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆಯಾಯಿತು. ಸರ್ಕಾರಿ ಭೂಮಿ ಅಡವಿಟ್ಟು ನೂರಾರು ಕೋಟಿ ಸಾಲ ಪಡೆದ ಬಗ್ಗೆ ಚರ್ಚೆ ನಡೆದಿದ್ದು, ಕಬಿನಿ ಸುಭಾಷ್ ಪವರ್ ಸ್ಟೇಷನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ತಹಶಿಲ್ದಾರ್ ಮೋಹನ‌ಕುಮಾರಿ, ಕಬಿನಿ ಸಹಾಯಕ ಕಾರ್ಯಪಾಲಕ ಗಣೇಶ್ ಗೆ ಶಾಸಕ ಚಿಕ್ಕಮಾದು ಸೂಚನೆ ನೀಡಿದರು. ಕಬಿನಿ ಜಲಾಶಯದ 18 ಎಕರೆ ಭೂಮಿ ತೋರಿಸಿ ನೂರಾರು ಕೋಟಿ ಸಾಲ ಪಡೆದ ಆರೋಪ ಕೇಳಿ ಬಂದಿತ್ತು. ರಾಜ್ಯದ ವಿವಿಧ ಬ್ಯಾಂಕ್ ಗಳಿಂದ ವಿವಿಧೆಡೆ 250 ಕೋಟಿ ರೂ ಅಧಿಕ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ತಾಲೂಕಿನ ಜನತೆ ಆಗ್ರಹಿಸಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಅನಿಲ್ ಚಿಕ್ಕಮಾದು, ಕಬಿನಿ ಸುಭಾಷ್ ಪವರ್ ಸ್ಟೇಷನ್ ವಿರುದ್ದ ಕ್ರಮ ಕೈಗೊಳ್ಳಲು ಸೂಚಿಸಿದರು.

ಕಬಿನಿ ಸುಭಾಷ್ ಪವರ್ ಕಳ್ಳಾಟ ಬಯಲು ಮಾಡಿದ ಅಧಿಕಾರಿಗಳು ಇದಾದ ಬೆನ್ನಲ್ಲೆ ಎಚ್ಚೆತ್ತ ತಾಲೂಕು ಆಡಳಿತ ಶಾಸಕ ಅನಿಲ್ ಚಿಕ್ಕಮಾದು ಸೂಚನೆ ಮೇರೆಗೆ ದಾಖಲೆಗಳ ಪರಿಶೀಲನೆ ನಡೆಸಿದ್ದು ಇದೀಗ ಅಧಿಕಾರಿಗಳು ಕಬಿನಿ ಸುಭಾಷ್ ಪವರ್ ಕಳ್ಳಾಟ ಬಯಲು ಮಾಡಿದ್ದಾರೆ ಆರ್ ಟಿಸಿ ಕಲಂ 11ರ ಬದಲಿಗೆ 9 ರಲ್ಲಿ ಗುತ್ತಿಗೆ ಪಡೆದವರ ಹೆಸರು ನಮೂದು ಮಾಡಲಾಗಿದ್ದು, ಅಧಿಕಾರಿಗಳ ಕಳ್ಳಾಟ, ದಿವ್ಯ ನಿರ್ಲಕ್ಷ್ಯದ ಪ್ರತೀಕ ಕಬಿನಿ ಜಲಾಶಯದ ಆಸ್ತಿ ಖಾಸಗಿ ವ್ಯಕ್ತಿ ಹೆಸರಿಗೆ ಪರಭಾರೆ ಮಾಡಿದ ಆರೋಪ ಕೇಳಿ ಬಂದಿತ್ತು. 30 ವರ್ಷ ಗುತ್ತಿಗೆ ಪಡೆದ ವ್ಯಕ್ತಿ ಹೆಸರಿಗೆ ಭೂಮಿ ಪರಭಾರೆ ಮಾಡಲಾಗಿದ್ದು, ಬ್ಯಾಂಕ್ ಗಳಿಗೆ ಕೇವಲ ಆರ್ ಟಿಸಿ ಕೊಟ್ಟು ಕಬಿನಿ ಸುಭಾಷ್ ಪವರ್ ಕಂಪನಿ ಕೋಟ್ಯಾಂತರ ರೂ ಸಾಲ ಪಡೆದಿದ್ದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ನಡುವೆ ಸುಭಾಷ್ ಪವರ್ ಕಂಪನಿಗೆ ಅಧಿಕಾರಿಗಳು ಪತ್ರ ಬರೆದು 15 ದಿನಗಳ ಒಳಗೆ ಸಮರ್ಪಕ ಉತ್ತರ ನೀಡಿ ಎಂದು ಸೂಚಿಸಿದ್ದರು . ಆದರೆ ಪತ್ರ ಬರೆದರೂ ಸುಭಾಷ್ ಪವರ್ ಕಂಪನಿ ಕ್ಯಾರೆ ಎನ್ನುತ್ತಿಲ್ಲ ಎನ್ನಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!