ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲು
ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ ಅವರಿಂದ ಕೇಸ್ ನಂಬರ್ 11/2024 ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A1 ಆಗಿದ್ದು, ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್‌ನಲ್ಲಿ ಅಧಿಕೃತವಾಗಿ ನಮೂದು ಮಾಡಿದ್ದಾರೆ. A2 ಆಗಿ ಸಿಎಂ ಪತ್ನಿ ಬಿ.ಎನ್ ಪಾರ್ವತಿ, A3 ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ, A4 ಭೂಮಿ ಮಾರಾಟ ಮಾಡಿದ ದೇವರಾಜು ಅವರಾಗಿದ್ದಾರೆ.





