ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ ದಿಢೀರ್​​ ಏರುಪೇರಾಗಿದ್ದ ಹಿನ್ನೆಲೆ ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ 2-3 ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ಈ ನಡುವೆ ಬುಧವಾರ ಚನ್ನಮ್ಮನವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಂತಿಮವಾಗಿ ಅವರು ಇಹಲೋಕ ತ್ಯಜಿಸಿದ್ದಾರೆ.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ ಅವರು 1954 ಮೇ 25ರಂದು ಹೆಚ್​​.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಹೆಚ್​​.ಡಿ. ರೇವಣ್ಣ, ಹೆಚ್​​.ಡಿ. ಬಾಲಕೃಷ್ಣ, ಹೆಚ್​​.ಡಿ. ರಮೇಶ್​​ ಗೌಡ, ಹೆಚ್​​.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸುವ ಮೂಲಕ ಗಟ್ಟಿಗಿತ್ತಿ ಎನಿಸಿಕೊಂಡಿದ್ದರು. ಆರು ಮಕ್ಕಳನ್ನ ಸಲಹಿದ್ದಲ್ಲದೆ, ಅವರ ಶಿಕ್ಷಣದ ಜವಾಬ್ದಾರಿ ಹೊತ್ತು ಆದರ್ಶ ಗೃಹಿಣಿಯಾಗಿದ್ದರು.

2001ರ ಫೆಬ್ರವರಿ ತಿಂಗಳಲ್ಲಿ ಚನ್ನಮ್ಮ ಅವರು ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ದೇವೇಗೌಡ ಮತ್ತು ಕಾಳಮ್ಮ ದಂಪತಿಯ ಪುತ್ರಿಯ ಹಿರಿಯ ಮಗಳಾಗಿದ್ದ ಚನ್ನಮ್ಮ, ಅಂದಿನ ಕಾಲದಲ್ಲೇ SSLC ವರೆಗೆ ಶಿಕ್ಷಣ ಪೂರೈಸಿದ್ದರು. ಮನೆಯ ಹಿರಿಯ ಮಗಳಾಗಿ ನಾಲ್ವರು ತಮ್ಮಂದಿರು ಮತ್ತು ಮೂವರು ತಂಗಿಯರಿಗೆ ತಾಯಿಯಂತೆ ಆಸರೆಯಾಗಿದ್ದರು.

Related Posts

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ?

ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ?