ಗ್ಯಾಸ್ ಸಿಲಿಂಡರ್ ಸ್ಫೋ*ಟ, ಐವರಿಗೆ ಗಾಯ ಹುಣಸೂರು ನಗರದಲ್ಲಿ ನಡೆದಿದೆ.

ಹುಣಸೂರು: ಗ್ಯಾಸ್ ಸಿಲಿಂಡರ್ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಇಬ್ಬರ ಸಹಾಯಕ್ಕೆ ಬಂದ ಪಕ್ಕದ ಮನೆಯ ಮೂವರು ಸೇರಿದಂತೆ ಒಟ್ಟು ಐವರಿಗೆ ಸುಟ್ಟ ಗಾಯಗಳು ಉಂಟಾಗಿವೆ. ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ಈ ಘಟನೆ ನಡೆದಿದೆ.

ಗ್ಯಾಸ್ ಸಿಲಿಂಡ‌ರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಐವರಿಗೆ ಗಾಯವಾಗಿದೆ. ನಿಂಗರಾಜು ಎಂಬುವರ ಮನೆಯಲ್ಲಿ ಘಟನೆ ನಡೆದಿದ್ದು, ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ ಮತ್ತು ನಾಗಮ್ಮಗೆ ಗಾಯಗಳಾಗಿವೆ. ಗಾಯಗೊಂಡವರಿಗೆ ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಂಗರಾಜುರವರ ಮನೆಯಲ್ಲಿ ಸಿಲಿಂಡ‌ರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಮೊದಲು ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಹತ್ತಿಕೊಂಡಿದ್ದರಿಂದ ದಂಪತಿ ಕಿರುಚಾಡಿದ್ದಾರೆ. ಆಗ ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ, ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ.

ಈ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಗೆ ಶಾಸಕ ಜಿ ಡಿ ಹರೀಶ್‌ ಗೌಡ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!