ಗೌರಿ ಗಣೇಶ ಹಬ್ಬದ ಅಂಗವಾಗಿ ಮುತ್ತೈದೆ ಪೌರಕಾರ್ಮಿಕರಿಗೆ ಬಾಗಿನ ಅರ್ಪಣೆ.

ಮೈಸೂರು: ಅಥರ್ವ ಲೈಫ್ ಸ್ಕಿಲ್ಸ್ ಫೌಂಡೇಶನ್ ಹಾಗೂಕರುಣೆ ಸೇವಾ ಟ್ರಸ್ಟ್ ವತಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಅರಮನೆಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕ ಮಹಿಳೆಯರಿಗೆ ಅರಿಶಿಣ -ಕುಂಕುಮ, ಸೀರೆ, ಬಳೆ ಮೊರದ ಬಾಗಿನ ನೀಡಿ ನಂತರ ಮಾತನಾಡಿದ ಕರುಣೆ ಸೇವಾ ಟ್ರಸ್ಟ್ ಅಧ್ಯಕ್ಷರಾದ ರುಕ್ಮಿಣಿ ಯಾವುದೇ ಒಳ್ಳೆಯ ಕೆಲಸ ಪ್ರಾರಂಭಿಸುವ ಮೊದಲು ವಿಘ್ನ ನಿವಾರಕ ಗಣೇಶನ ಪೂಜಿಸುವುದು ಹಿಂದು ಧರ್ಮಿಯರ ಪದ್ಧತಿ. ಇಂತಹ ಪವಿತ್ರ ಪೂಜಾ ಸ್ಥಾನಪಡೆದುಕೊಂಡಿರುವ ಗಣಪತಿಯನ್ನು ಪ್ರತಿಷ್ಠಾಪಿಸಿ ದೇಶದ ಆಚಾರ-ವಿಚಾರ, ಸಂಸ್ಕೃತಿ ಮುಂದುವರಿಸುತ್ತಿರುವುದು ಸಂತಸತಂದಿದೆ ಎಂದು ಹೇಳಿದರು, ಮೈಸೂರಿನ ಅರಮನೆ ಸುಂದರವಾಗಿ ಹಾಗೂ ಸ್ವಚ್ಛವಾಗಿ ಕಾಣಲು ಪೌರಕಾರ್ಮಿಕರ ಸಮ ಹೆಚ್ಚು, ಅಂಥವರನ್ನು ಗುರುತಿಸಿ ಬಾಗಿನ ನೀಡಿರುವುದು ನಮಗೂ ಸಂತೋಷ ಉಂಟು ಮಾಡುತ್ತದೆ ಎಂದು ಹೇಳಿದರು.

ಬಾಗಿನ ಪಡೆದ ಪೌರಕಾರ್ಮಿಕ ಮಹಿಳೆ ಜಯಲಕ್ಷ್ಮಿ ಮಾತನಾಡಿ ಪೌರಕಾರ್ಮಿಕರನ್ನು ಗುರುತಿಸಿ ಸಹೋದರಿಯಂತೆ ಬಾಗಿನ ನೀಡಿರುವುದು. ನಮ್ಮೆಲ್ಲರಿಗೂ ಸಂತಸ ಉಂಟು ಮಾಡಿದೆ, ಅವರ ಸಂಸ್ಥೆಗೆ ಧನ್ಯವಾದಗಳು.ಎಂದು ಹೇಳಿದರು. ಅಥರ್ವ ಸ್ಕಿಲ್ಸ್ ಫೌಂಡೇಶನ್ ಅಧ್ಯಕ್ಷರಾದ ಪುಷ್ಪಲತಾ, ಕರುಣೆ ಸೇವಾ ಟ್ರಸ್ಟ್ ಅಧ್ಯಕ್ಷರಾದ ರುಕ್ಮಿಣಿ, ಡಾಕ್ಟರ್ ಪುನೀತ್ ರಾಜಕುಮಾರ್ ರಾಜ ಶಿವರಾಜ್, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,ಮಂಜುಳಾ ಸೋಮಣ್ಣ, ಜ್ಯೋತಿ, ವರ್ಷಿಣಿ, ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಹಾಜರಿದ್ದರು.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!